Advertisement

ಕೊರೊನಾ ಲಸಿಕೆ ಹಾಕಿಸಿಕೊಂಡ ಟೀಮ್ ಇಂಡಿಯಾ ವೇಗಿ ಬೂಮ್ರಾ


ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮಂಗಳವಾರ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬೂಮ್ರಾ ಫೋಟೋವನ್ನು ಹಂಚಿಕೊಂಡಿ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಎಲ್ಲರೂ ಸುರಕ್ಷಿತವಾಗಿರುವಂತೆ ಮನವಿ ಮಾಡಿದ್ದಾರೆ.

ಜಸ್‌ಪ್ರೀತ್ ಬೂಮ್ರಾ ಇತ್ತೀಚೆಗೆ ಮುಂದೂಡಿದ ಐಪಿಎಲ್ 14ನೇ ಆವೃತ್ತಿಯಲ್ಲಿ ಭಾಗಿಯಾಗಿದ್ದು ಮುಂದೂಡಿಕೆಯಾದ ನಂತರ ಈಗ ತವರಿಗೆ ಮರಳಿದ್ದಾರೆ. ಮುಂಬೈ ಇಂಡಿಯನ್ಸ್ ಪರವಾಗಿ ಆಡುವ ಬೂಮ್ರಾ ಈ ಬಾರಿಯ ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದಾರೆ.

Advertisement
Advertisement

ಎಬಿಡಿಗಿಂತ ಕ್ರಿಸ್ ಗೇಲ್, ಕೊಹ್ಲಿ ಸಖತ್ ಡೇಂಜರಸ್ ಎನ್ನುತ್ತಿವೆ ಈ ಅಂಕಿಅಂಶಗಳು!

ಬೂಮ್ರಾ ಸದ್ಯ ಕುಟುಂಬದೊಂದಿಗೆ ಕಾಲವನ್ನು ಕಳೆಯುತ್ತಿದ್ದು ಕೆಲವೇ ದಿನಗಳಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಯಾಗಲಿದ್ದಾರೆ. ಅದಕ್ಕೂ ಮುನ್ನ ಮೊದಲ ಡೋಸ್ ಲಸಿಕೆಯನ್ನು ಬೂಮ್ರಾ ಹಾಕಿಸಿಕೊಂಡಿದ್ದಾರೆ.

ಇಂಗ್ಲೆಂಡ್‌ಗೆ ತೆರಳುವ ಎಲ್ಲಾ ಆಟಗಾರರಿಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೊದಲ ಡೋಸ್‌ನ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಸೂಚನೆಯನ್ನು ನೀಡಿದೆ. ಎರಡನೇ ಡೋಸ್‌ನ ಲಸಿಕೆಯನ್ನು ಇಂಗ್ಲೆಂಡ್‌ನಲ್ಲಿಯೇ ನೀಡುವ ವ್ಯವಸ್ಥೆಯನ್ನು ಬಿಸಿಸಿಐ ಮಾಡಿಕೊಂಡಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

English Summary

Team India Pacer Jasprit Bumrah Gets COVID-19 Vaccine first dose and share a Picture on social media.
Read more...