Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ 5ನೇ ಸ್ಥಾನಕ್ಕೇರಿದ ಸಿಂಧು

ನವದೆಹಲಿ, ಫೆಬ್ರವರಿ. 19 : ಭಾರತದ ಸ್ಟಾರ್ ಶೆಟ್ಲರ್, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಶ್ರೇಯಾಂಕದಲ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಇದು ಪಿ.ವಿ. ಸಿಂಧು ಅವರ ಕ್ರೀಡಾ ಜೀವನದ ಶ್ರೇಷ್ಠ ಸಾಧನೆಯಾಗಿದೆ.

ರಿಯೊ ಡಿ ಜನೈರೊದಲ್ಲಿ ನಡೆದಿದ್ದ ಒಲಿಂಪಿಕ್ಸ್ ನ ಮಹಿಳೆಯರ ಸಿಂಗಲ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು 9ನೇ ಸ್ಥಾನದಲ್ಲಿದ್ದ ಸಿಂಧು ಕಳೆದ ತಿಂಗಳು ಸೈಯದ್ ಮೋದಿ ಗ್ರ್ಯಾನ್ ಪ್ರಿ ಗೋಲ್ಡ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಶ್ರೇಯಾಂಕದಲ್ಲಿ 4 ಸ್ಥಾನ ಮೇಲಕ್ಕೆ ಜಿಗಿದು ಟಾಪ್ 5ನೇ ಸ್ಥಾನವನ್ನು ಅಲಂಕರಿಸಿದ್ದಾರೆ.[ಹಾಂಗ್ ಕಾಂಗ್ ಓಪನ್: ಅಂತಿಮ ಹಣಾಹಣಿಯಲ್ಲಿ ಸಿಂಧುಗೆ ಸೋಲು]

Career-best rank: PV Sindhu becomes World No. 5

ಹೈದರಾಬಾದಿನ ಬೆಡಗಿ 21 ವರ್ಷದ ಸಿಂಧು ಅವರು ಒಟ್ಟು 69399 ಅಂಕಗಳನ್ನು ಪಡೆದುಕೊಂಡಿದ್ದಾರೆ. ಹೋದ ವರ್ಷ ರಿಯೊ ಡಿ ಜನೈರೊದಲ್ಲಿ ನಡೆದಿದ್ದ ಒಲಿಂಪಿಕ್ಸ್ ನ ಮಹಿಳೆಯರ ಸಿಂಗಲ್ಸ್ ನಲ್ಲಿ ಅವರು ಬೆಳ್ಳಿ ಪದಕ ಜಯಿಸಿದ್ದರು.

ನಂತರ ಚೀನಾ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದಿದ್ದರು. ಹಾಂಗ್ ಕಾಂಗ್ ಓಪನ್ ಬಾಡ್ಮಿಂಟನ್ ಟೂರ್ನಮೆಂಟ್ ನ ಅಂತಿಮ ಹಣಾಹಣಿಯಲ್ಲಿ ಪಿವಿ ಸಿಂಧು ಅವರು ಸೋಲು ಕಂಡಿದ್ದರು.

ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಅಜಯ್ ಜಯರಾಮ್ 18, ಕೆ. ಶ್ರೀಕಾಂತ್ ಮತ್ತು ಪ್ರಣಯ ತಲಾ 21 ಮತ್ತು 23ನೇ ಸ್ಥಾನದಲ್ಲಿದ್ದಾರೆ.

ಇನ್ನು ಪುರುಷರ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ಮನು ಅತ್ರಿ ಮತ್ತು ಬಿ. ಸುಮೀತ್ ರೆಡ್ಡಿ ಜೋಡಿ 24ನೇ ಸ್ಥಾನದಲ್ಲಿದೆ.

Story first published: Wednesday, January 3, 2018, 10:14 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+