ಪಿವಿ ಸಿಂಧು ಆಟ ನೋಡಿ ರೋಮಾಂಚನವಾಯಿತು ಎಂದ ಮಹಿಳಾ ಸ್ಟಾರ್ ಕ್ರಿಕೆಟರ್

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇಗದ ಬೌಲರ್ ರೇಣುಕಾ ಸಿಂಗ್ ಭಾರತದ ಸ್ಟಾರ್ ಬಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ. ಪಿವಿ ಸಿಂಧು ಅವರ ಆಟವನ್ನು ನೇರವಾಗಿ ನೋಡುವುದು ನನ್ನ ಕನಸಾಗಿತ್ತು ಎಂದು ಹೇಳಿಕೊಂಡಿರುವ ಅವರು ಪಂದ್ಯವನ್ನು ನೋಡುತ್ತಾ ರೋಮಾಂಚನವಾಯಿತು ಎಂದಿದ್ದಾರೆ.

ಮಿಶ್ರ ಬ್ಯಾಡ್ಮಿಂಟನ್ ತಂಡದ ಭಾಗವಾಗಿದ್ದ ಪಿವಿ ಸಿಂಧು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಸ್ಪಲ್ಪದರಲ್ಲಿ ಕಳೆದುಕೊಂಡಿದ್ದರು. ಇದೀಗ ಮಹಿಳಾ ಸಿಂಗಲ್ಸ್‌ನಲ್ಲಿ ಭಾರತದ ಪರವಾಗಿ ಚಿನ್ನ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ. ಹೀಗಾಗಿ ಪಿವಿ ಸಿಂಧು ಪ್ರದರ್ಶನದ ಮೇಲೆ ಸಾಕಷ್ಟು ಕುತೂಹಲ ಮೂಡಿಸಿದೆ.

ಪ್ರಸ್ತುತ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತದ ಪ್ರಮುಖ ಬೌಲರ್ ಆಗಿರುವ ರೇಣಿಕಾ ಸಿಂಗ್ ಉತ್ತಮ ಫಾರ್ಮ್‌ನಲ್ಲಿದ್ದು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲು ಅನುಭವಿಸಿದ್ದರೂ 26ರ ಹರೆಯದ ವೇಗಿ ಅತ್ಯುತ್ತಮ ಪ್ರದರ್ಶನ ನೀಡಿ ನಾಲ್ಕು ವಿಕೆಟ್ ಪಡೆದು ತಂಡಕ್ಕೆ ಮೇಲುಗೈ ಒದಗಿಸಿದ್ದರು. ಬಾರ್ಬಡೋಸ್ ವಿರುದ್ಧದ ಪಂದ್ಯದಲ್ಲಿಯೂ ಇದೇ ಪ್ರದರ್ಶನವನ್ನು ಪುನರಾವರ್ತಿಸಿದ್ದಾರೆ. ಭಾರತಕ್ಕೆ ಗೆಲುವು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಬಾರ್ಬಡೋಸ್‌ನ ಅಗ್ರ ಕ್ರಮಾಂಕವನ್ನು ಕೆಡವಿದರು. ಈ ಮೂಲಕ ಭಾರತವು ಸೆಮಿಫೈನಲ್‌ಗೆ ಪ್ರವೇಶಿಸಲು ಸಾಧ್ಯವಾಯಿತು.

ಟಿ20 ವಿಶ್ವಕಪ್‌: ಈ ಸ್ಟಾರ್ ಆಟಗಾರನ ಫಾರ್ಮ್ ಭಾರತ ತಂಡಕ್ಕೆ ಸಕಾರಾತ್ಮಕ ಸಂಕೇತ; ಕಮ್ರಾನ್ ಅಕ್ಮಲ್ಟಿ20 ವಿಶ್ವಕಪ್‌: ಈ ಸ್ಟಾರ್ ಆಟಗಾರನ ಫಾರ್ಮ್ ಭಾರತ ತಂಡಕ್ಕೆ ಸಕಾರಾತ್ಮಕ ಸಂಕೇತ; ಕಮ್ರಾನ್ ಅಕ್ಮಲ್

ಭಾರತದ ವೇಗದ ಬೌಲರ್ ರೇಣುಕಾ ಸಿಂಗ್ ಪಿವಿ ಸಿಂಧು ಆಟವನ್ನು ನೋಡುವ ತಮ್ಮ ಕನಸನ್ನು ಹಂಚಿಕೊಂಡಿದ್ದಾರೆ. "ಸಿಂಧು ಅವರನ್ನು ಮುಖಾಮುಖಿ ನೋಡುವುದು ಕನಸಾಗಿತ್ತು ಮತ್ತು ಅದು ಈಡೇರಿದೆ" ಎಂದು ಭಾರತದ ವೇಗಿ ಹೇಳಿದ್ದಾರೆ. "ನಾವು ಪಿವಿ ಸಿಂಧು ಅವರ ಪಂದ್ಯವನ್ನು ವೀಕ್ಷಿಸಲು ಹೋಗಿದ್ದೆವು ಮತ್ತು ಅದು ಬಹಳ ಪೈಪೋಟಿಯಿಂದ ಕೂಡಿದ ಪಂದ್ಯವಾಗಿತ್ತು. ಅವರ ಆಟವನ್ನು ನೋಡುವಾಗ ನನಗೆ ರೋಮಾಂಚನವಾಯಿತು. ನಾವು ಬಹಳಷ್ಟು ಆನಂದಿಸಿದ್ದೇವೆ. ಪಿವಿ ಸಿಂಧು ಅವರನ್ನು ಮುಖಾಮುಖಿ ನೋಡಬೇಕೆಂಬುದು ಕನಸಾಗಿತ್ತು ಮತ್ತು ಅದು ನಿನ್ನೆ ಈಡೇರಿದೆ" ಎಂದಿದ್ದಾರೆ.

ಭಾರತದ ಈ ಪ್ಲೇಯರ್ ವಿಶ್ವದ ನಂ 1 ಆಗೋದ್ರಲ್ಲಿ ಅನುಮಾನವಿಲ್ಲ, ವಿಶ್ವಕಪ್‌ಗೆ ಆಯ್ಕೆ ಮಾಡಿ: ಕೃಷ್ಣಮಾಚಾರಿ ಶ್ರೀಕಾಂತ್ಭಾರತದ ಈ ಪ್ಲೇಯರ್ ವಿಶ್ವದ ನಂ 1 ಆಗೋದ್ರಲ್ಲಿ ಅನುಮಾನವಿಲ್ಲ, ವಿಶ್ವಕಪ್‌ಗೆ ಆಯ್ಕೆ ಮಾಡಿ: ಕೃಷ್ಣಮಾಚಾರಿ ಶ್ರೀಕಾಂತ್

ಇನ್ನು ತಂಡದ ಆಲ್‌ರೌಂಡರ್ ದೀಪ್ತಿ ಶರ್ಮಾ ಮಾತನಾಡಿ ಭಾರತದ ಮಹಿಳಾ ಹಾಕಿ ತಂಡದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. "ಭಾರತದ ಮಹಿಳಾ ಹಾಕಿ ತಂಡದ ಪ್ರದರ್ಶನ ನೋಡುವುದಕ್ಕೆ ಬಹಳ ಕಾತುರಳಾಗುದ್ದೆ. ಅವರ ಕಠಿಣ ಪರಿಶ್ರಮ ಆಟದಲ್ಲಿಯೂ ವ್ಯಕ್ತವಾಗಿದೆ" ಎಂದಿದ್ದಾರೆ.

ಇನ್ನು ಜಮಿಮಾ ರೋಡ್ರಿಗಸ್ ಮಾತನಾಡಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳ ಪ್ರದರ್ಶನ ನೋಡಿ ಸಾಕಷ್ಟು ಸ್ಪೂರ್ತಿಗೊಂಡಿರುವುದಾಗಿ ಹೇಳಿದ್ದಾರೆ. ಈ ಪ್ರದರ್ಶನವನ್ನು ನೋಡಿದ ಬಳಿಕ ಭಾರತಕ್ಕಾಗಿ ಚಿನ್ನದ ಪದಕನ್ನು ಗೆಲ್ಲಲು ಹೆಚ್ಚು ಸ್ಪೂರ್ತಿಪಡೆದುಕೊಂಡಿರುವುದಾಗಿ ಹೇಳಿದ್ದಾರೆ.

2022ರ ಕಾಮನ್‌ವೆಲ್ತ್‌ನಲ್ಲಿ ಭಾರತ ಪರ ಪದಕ ಗೆದ್ದವರು

1 ಸಂಕೇತ್ ಸರ್ಗರ್: ಬೆಳ್ಳಿ (ಪುರುಷರ 55 ಕೆಜಿ ವೇಟ್ ಲಿಫ್ಟಿಂಗ್)
2 ಗುರುರಾಜ ಪೂಜಾರಿ: ಕಂಚು (ಪುರುಷರ 61 ಕೆಜಿ ವೇಟ್ ಲಿಫ್ಟಿಂಗ್)
3 ಮೀರಾಬಾಯಿ : ಚಿನ್ನ (ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ )
4 ಬಿಂದ್ಯಾರಾಣಿ ದೇವಿ: ಬೆಳ್ಳಿ (ಮಹಿಳೆಯರ 55 ಕೆಜಿ ವೇಟ್ ಲಿಫ್ಟಿಂಗ್ )
5 ಜೆರೆಮಿ ಲಾಲ್ರಿನ್ನುಂಗಾ: ಚಿನ್ನ (ಪುರುಷರ 67 ಕೆಜಿ ವೇಟ್‌ಲಿಫ್ಟಿಂಗ್ )
6 ಅಚಿಂತಾ ಶೆಯುಲಿ: ಚಿನ್ನ (ಪುರುಷರ 73 ಕೆಜಿ ವೇಟ್‌ಲಿಫ್ಟಿಂಗ್ )
7 ಸುಶೀಲಾ ದೇವಿ ಲಿಕ್ಮಾಬಮ್: ಬೆಳ್ಳಿ (ಮಹಿಳೆಯರ 48 ಕೆಜಿ ಜೂಡೋ)
8 ವಿಜಯ್ ಕುಮಾರ್ ಯಾದವ್ :ಕಂಚು (ಪುರುಷರ 60 ಕೆಜಿ ಜೂಡೋ)
9 ಹರ್ಜಿಂದರ್ ಕೌರ್ :ಕಂಚು (ಮಹಿಳೆಯರ 71 ಕೆಜಿ ವೇಟ್ ಲಿಫ್ಟಿಂಗ್)
10 ಭಾರತೀಯ ಮಹಿಳಾ ತಂಡ: ಚಿನ್ನ (ಮಹಿಳೆಯರ ನಾಲ್ಕು ಲಾನ್ ಬೌಲ್‌ಗಳು)
11 ವಿಕಾಸ್ ಠಾಕೂರ್ :ಬೆಳ್ಳಿ (ಪುರುಷರ 96 ಕೆಜಿ ವೇಟ್ ಲಿಫ್ಟಿಂಗ್)
12 ಭಾರತೀಯ ಪುರುಷರ ತಂಡ: ಚಿನ್ನ (ಪುರುಷರ ತಂಡ ಟೇಬಲ್ ಟೆನಿಸ್)
13 ಭಾರತೀಯ ಮಿಶ್ರ ತಂಡ: ಬೆಳ್ಳಿ (ಮಿಶ್ರ ತಂಡ ಬ್ಯಾಡ್ಮಿಂಟನ್)
14 ಲವ್‌ಪ್ರೀತ್ ಸಿಂಗ್: ಕಂಚು (ಪುರುಷರ 109 ಕೆಜಿ ವೇಟ್‌ಲಿಫ್ಟಿಂಗ್)
15 ಸೌರವ್ ಘೋಸಲ್ :ಕಂಚು (ಪುರುಷರ ಸಿಂಗಲ್ಸ್ ಸ್ಕ್ವಾಷ್)
16 ತುಲಿಕಾ ಮಾನ್ :ಬೆಳ್ಳಿ (ಮಹಿಳೆಯರ +78 ಕೆಜಿ ಜೂಡೋ)
17 ಗುರ್ದೀಪ್ ಸಿಂಗ್: ಕಂಚು (ಪುರುಷರ +109 ಕೆಜಿ ವೇಟ್ ಲಿಫ್ಟಿಂಗ್)
18 ತೇಜಸ್ವಿನ್ ಶಂಕರ್: ಕಂಚು (ಪುರುಷರ ಹೈಜಂಪ್ ಅಥ್ಲೆಟಿಕ್ಸ್)

For Quick Alerts
ALLOW NOTIFICATIONS
For Daily Alerts
Story first published: Thursday, August 4, 2022, 23:55 [IST]
Other articles published on Aug 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X