PV Sindhu ಹೊಸ ದಾಖಲೆ: ವೃತ್ತಿ ಜೀವನದ 500ನೇ ಜಯ
ನವದೆಹಲಿ: ಸದ್ಯ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಭಾರತದ ಆಟಗಾರರು ಸಹ ಭಾಗವಹಿಸಿದ್ದಾರೆ. ಮಹಿಳಾ ಸಿಂಗಲ್ಸ್‌ನಲ್ಲಿ ಭಾರತದ ಪಿವಿ ಸಿಂಧು ಸಹ ಪ್ರದರ್ಶನ ನೀಡುತ್ತಿದ್ದಾರೆ. ಸಿಂಧು ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಡೆನ್ಮಾರ್ಕ್‌ನ ಆಟಗಾರ್ತಿ ಲೈನ್ ಹೊಜ್‌ಮಾರ್ಕ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಕ್ವಾರ್ಟರ್ ಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತ ಪಡಿಸಿಕೊಂಡರು. ಈ ಪಂದ್ಯದಲ್ಲಿ ಗೆದ್ದ ಸಿಂಧು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಯಾವೊಬ್ಬ ಭಾರತೀಯ ಆಟಗಾರ್ತಿ ಮಾಡಲಾಗದ ಸಾಧನೆಯನ್ನು ಸಿಂಧು ಮಾಡಿದ್ದಾರೆ.
ಪಿವಿ ಸಿಂಧು ಈಗ ಇಂಡೋನೇಷ್ಯಾ ಮಾಸ್ಟರ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ವಿಶ್ವದ ನಾಲ್ಕನೇ ಶ್ರೇಯಾಂಕದ ಚೀನಾದ ಚೆನ್ ಯು ಫೀ ಅವರನ್ನು ಎದುರಿಸಲಿದ್ದಾರೆ. ಸಿಂಧು ಮತ್ತು ಚೆನ್ ಯು ಒಟ್ಟು 13 ಬಾರಿ ಮುಖಾಮುಖಿಯಾಗಿದ್ದು, ಚೆನ್ ಯು 7, ಸಿಂಧು 6 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ.

ಪಿವಿ ಸಿಂಧು ಇತ್ತೀಚಿಗೆ ನಡೆದ 3 ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಎರಡನೇ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಇದರಲ್ಲಿ 2026ರಲ್ಲಿ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದ್ದರು. ಸಿಂಧು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡು ನಿರಾಸೆ ಅನುಭವಿಸಿದ್ದರು.
ಸಿಂಧು ಸಾಧನೆ
ಹೈದರಾಬಾದ್‌ನ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ತಮ್ಮದೇ ಛಾಪು ಮೂಡಿಸಿದ ಆಟಗಾರ್ತಿ. ಇವರು ಈಗಾಗಲೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕವನ್ನು ಗೆದ್ದಿದ್ದಾರೆ. ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಸಾಧನೆ ಮಾಡಿರುವ ಸಿಂಧು ಇತಿಹಾಸ ನಿರ್ಮಿಸಿದ್ದಾರೆ.
ಲಕ್ಷ್ಯ ಸೇನ್‌ಗೆ ಜಯ
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಸಹ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಇವರು ಇಂಡೋನೇಷ್ಯಾ ಮಾಸ್ಟರ್ಸ್ 500 ರ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇವರು ಹಾಂಗ್ ಕಾಂಗ್‌ನ ಜೇಸನ್ ಗುಣವಾನ್ ಅವರನ್ನು 21-10 ಮತ್ತು 21-11 ರಿಂದ ಅರ್ಧಗಂಟೆ ನಡೆದ ಪಂದ್ಯದಲ್ಲಿ ಸೋಲಿಸಿದರು. ಈ ಮೂಲಕ ಲಕ್ಷ್ಯ ಎಂಟರ ಘಟ್ಟಕ್ಕೆ ತಮ್ಮ ಸ್ಥಾನ ಖಚಿತ ಪಡಿಸಿಕೊಂಡರು. ಇವರು ಕ್ವಾರ್ಟರ್ ಫೈನಲ್‌ನಲ್ಲಿ ಥೈಲ್ಯಾಂಡ್‌ನ ಪಕ್ಕಪೋನ್ ತಿರರತ್ಸಕುಲ್ ಅವರನ್ನು ಎದುರಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications