ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಇಂಡೋನೇಷ್ಯಾ ಮಾಸ್ಟರ್ಸ್: 2ನೇ ಸುತ್ತಿಗೆ ಲಗ್ಗೆಯಿಟ್ಟ ಲಕ್ಷ್ಯಸೇನ್, ಸೈನಾ ನೆಹ್ವಾಲ್

Indonesia Masters: Saina Nehwal and Lakshya Sen advance to the second round

ಇಂಡೋನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿ ಆರಂಭವಾಗಿದೆ. ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತದ ಶಟ್ಲರ್‌ಗಳಾದ ಲಕ್ಷ್ಯ ಸೇನ್ ಹಾಗೂ ಸೈನಾ ನೆಹ್ವಾಲ್ ಭರ್ಜರಿ ಆರಂಭವನ್ನು ಪಡೆದುಕೊಂಡಿದ್ದಾರೆ. ಈ ಇಬ್ಬರು ಕೂಡ ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಎರಡನೇ ಸುತ್ತಿಗೆ ಪ್ರವೇಶ ಪಡೆದುಕೊಂಡಿದ್ದಾರೆ.

ಹಿಂದಿನ ಎರಡು ವಾರಗಳಲ್ಲಿ ಮಲೇಷ್ಯಾ ಮತ್ತು ಇಂಡಿಯಾ ಓಪನ್‌ನಲ್ಲಿ ಆರಂಭಿಕ ಹಂತದಲ್ಲಿಯೇ ನಿರ್ಗಮಿಸಿದ್ದ ಲಕ್ಷ್ಯ ಸೇನ್ ಇಂಡೋನೇಷ್ಯಾ ಮಾರ್ಸ್ಟರ್ಸ್‌ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದ್ದಾರೆ. ಜಪಾನ್‌ನ ಭರವಸೆಯ ಆಟಗಾರ ಕೊಡೈ ನರೋಕಾ ವಿರುದ್ಧ ನಡೆದ ಪಂದ್ಯದಲ್ಲಿ 21-12, 21-11ರಿಂದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಶತಕ ಬಾರಿಸಿದರೂ ಅಪ್ಪನಿಗೆ ಪೂರ್ತಿ ಖುಷಿಯಾಗಿಲ್ಲ: ಆಸಕ್ತಿಕರ ವಿಚಾರ ಹಂಚಿಕೊಂಡ ಶುಭಮನ್ ಗಿಲ್ಶತಕ ಬಾರಿಸಿದರೂ ಅಪ್ಪನಿಗೆ ಪೂರ್ತಿ ಖುಷಿಯಾಗಿಲ್ಲ: ಆಸಕ್ತಿಕರ ವಿಚಾರ ಹಂಚಿಕೊಂಡ ಶುಭಮನ್ ಗಿಲ್

ಇನ್ನು ಇಂಡಿಯಾ ಓಪನ್‌ನಲ್ಲಿ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದ ಸೈನಾಗೆ ಇಂದು ಚೈನೀಸ್ ತೈಪೆಯ ಪೈ ಯು ಪೊ ಎದುರಾಳಿಯಾಗಿದ್ದರು. ಈ ಪಂದ್ಯದಲ್ಲಿ 21-15 17-21 21-15 ಅಂತರದಲ್ಲಿ ಗೆದ್ದು ಪ್ರೀ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಉತ್ತಮ ಆರಂಭ ಪಡೆದುಕೊಂಡಿದ್ದಾರೆ.

ಇನ್ನು ಏಳನೇ ಶ್ರೇಯಾಂಕದ ಲಕ್ಷ್ಯ ಸೇನ್‌ಗೆ ಮುಂದಿನ ಪಂದ್ಯದಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಎದುರಾಳಿಯಾಗಿ ಸವಾಲೊಡ್ಡಲಿದ್ದಾರೆ. ಇತ್ತ ಸೈನಾ ಸೆಹ್ವಾಲ್ ಚೀನಾದ ಆಟಗಾರರ್ತಿಯರಾದ ಜಾಂಗ್ ಯಿ ಮಾನ್ ಮತ್ತು ಎಂಟನೇ ಶ್ರೇಯಾಂಕದ ಹಾನ್ ಯುಯೆ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

ಇನ್ನು ಭಾರತದ ಮತ್ತೋರ್ವ ಸ್ಟಾರ್ ಆಟಗಾರ ವಿಶ್ವದ ಮಾಜಿ ನಂ.1 ಶಟ್ಲರ್ ಕಿಡಂಬಿ ಶ್ರೀಕಾಂತ್ ಈ ಟೂರ್ನಿಯಲ್ಲಿ ನಿರಾಸೆ ಅನುಭವಿಸಿದ್ದಾರೆ. ಈ ಪಂದ್ಯದಲ್ಲಿ ಕಿಡಂಬಿ ಶ್ರೀಕಾಂತ್ ಅವರು 10-21 22-24 ಅಂತರದಿಂದ ಸೋಲು ಅನುಭವಿಸಿ ನಿರ್ಗಮಿಸಿದ್ದಾರೆ. ಈ ಪಂದ್ಯ 39 ನಿಮಿಷಗಳಲ್ಲಿ ಅಂತ್ಯವಾಯಿತು.

Story first published: Wednesday, January 25, 2023, 19:30 [IST]
Other articles published on Jan 25, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X