Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Lakshya Sen: ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ವಿರುದ್ಧ ತನಿಖೆಗೆ ರಾಜ್ಯ ಹೈಕೋರ್ಟ್ ಆದೇಶ

ಭಾರತ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ವಿರುದ್ಧ ಗಂಭೀರ್ ಆರೋಪ ಕೇಳಿ ಬಂದಿದೆ. ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರದಿಂದ ಪ್ರಯೋಜನೆಗಳನ್ನು ಪಡೆಯಲು ಲಕ್ಷ್ಯ ಸೇನ್ ಅವರ ಪೋಷಕರು ಜನನ ಪ್ರಮಾಣಪತ್ರಗಳನ್ನು ಬದಲಾಯಿಸಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಲಕ್ಷ್ಯ ಸೇನ್ ಮತ್ತು ಅವರ ಸಹೋದರ ಚಿರಾಗ್ ಸೇನ್ ವಿರುದ್ಧದ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಲಕ್ಷ್ಯ ಸೇನ್ ಮತ್ತು ಇತರರು ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ನಗರದ 8ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸುವಂತೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂಜಿ ಉಮಾ ನೇತೃತ್ವದ ಪೀಠವು ಫೆಬ್ರವರಿ 19 ರಂದು ಈ ಆದೇಶವನ್ನು ಹೊರಡಿಸಿದೆ.

Karnataka State High Court orders investigation against Lakshya Sen

ಬ್ಯಾಡ್ಮಿಂಟನ್ ಟೂರ್ನಿಗಳಿಗೆ ಅರ್ಹತೆ ಪಡೆಯಲು ಮತ್ತು ಸರ್ಕಾರಿ ಸವಲತ್ತುಗಳನ್ನು ಪಡೆಯಲು ಲಕ್ಷ್ಯ ಸೇನ್ ತಮ್ಮ ವಯಸ್ಸನ್ನು ಜನನ ಪ್ರಮಾಣಪತ್ರದಲ್ಲಿ ಎರಡೂವರೆ ವರ್ಷ ಕಡಿಮೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ನಾಗರಾಜ್ ಎಂಬುವವರು ಮಾಹಿತಿ ಹಕ್ಕು ಕಾಯ್ದೆಯ (ಆರ್‌ಟಿಐ) ಮೂಲಕ ಭಾರತ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ದಾಖಲೆಗಳನ್ನು ಪಡೆದು ನಂತರ ಖಾಸಗಿ ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ, ಎಸಿಎಂಎಂ ನ್ಯಾಯಾಲಯವು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸುವಂತೆ ನಿರ್ದೇಶಿಸಿತು.

ಲಕ್ಷ್ಯ ಸೇನ್ ಪರ ವಕೀಲರು, ಎಫ್‌ಐಆರ್ ಮತ್ತು ಖಾಸಗಿ ದೂರು ಆಧಾರರಹಿತವಾಗಿದ್ದು, ಕ್ರೀಡಾಪಟುವಿಗೆ ಕಿರುಕುಳ ನೀಡುವ ಉದ್ದೇಶದಿಂದ ಮಾಡಲಾಗಿದೆ ಎಂದು ವಾದಿಸಿದರು. ದೂರುದಾರರು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ಕಂಡುಕೊಂಡಿದ್ದು, ಈ ಹಂತದಲ್ಲಿ ಪ್ರಕರಣವನ್ನು ವಜಾಗೊಳಿಸುವುದು ಸೂಕ್ತವಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ತಮ್ಮ ವಿರುದ್ಧದ ಎಫ್ಐಆರ್ ಹಾಗೂ ಅದರ ಕುರಿತ ನಗರದ 8ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಲಕ್ಷ್ಯ ಸೇನ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಫೆಬ್ರವರಿ 19 ರಂದು ಈ ಆದೇಶ ನೀಡಿದೆ. ಅಲ್ಲದೇ, ಪ್ರಕರಣ ಸಂಬಂಧ ದೂರುದಾರರು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ.‌ ಈ ಎಲ್ಲ ಅಂಶಗಳು ಆರೋಪ ಸಂಬಂಧ ಮೇಲ್ನೋಟಕ್ಕೆ ಸಾಕ್ಷ್ಯಾಧಾರಗಳಾಗಿದ್ದು, ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ. ಇದಾದ ನಂತರ, ಅರ್ಜಿದಾರರು ಈಗ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ. ಅಲ್ಲಿ ಈ ವಿಷಯವು ಪ್ರಸ್ತುತ ವಿಚಾರಣೆಯಲ್ಲಿದೆ.

ಲಕ್ಷ್ಯ ಸೇನ್ ಹಿನ್ನೆಲೆ

ಲಕ್ಷ್ಯ ಸೇನ್ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ. ಇವರು ಆಗಸ್ಟ್ 16, 2001 ರಂದು ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಜನಿಸಿದರು. ಸೇನ್ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ಪದಕ ಗೆಲ್ಲುವಲ್ಲಿ ವಿಫಲರಾದರು. ಸೇನ್ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ, ಥಾಮಸ್ ಕಪ್ ಚಿನ್ನದ ಪದಕ, ಏಷ್ಯನ್ ಕ್ರೀಡಾಕೂಟದ ಬೆಳ್ಳಿ ಪದಕ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಅವರು ಏಷ್ಯಾ ತಂಡ ಮತ್ತು ಏಷ್ಯಾ ಮಿಶ್ರ ತಂಡ ಚಾಂಪಿಯನ್‌ಶಿಪ್‌ಗಳಲ್ಲಿ ಕಂಚಿನ ಪದಕಗಳಿಗೂ ಮುತ್ತಿಕ್ಕಿದ್ದಾರೆ. ಇದಲ್ಲದೆ, ಅವರು ಮಾಜಿ ವಿಶ್ವ ಜೂನಿಯರ್ ನಂ. 1. ಪಟ್ಟವನ್ನು ಅಲಂಕರಿಸಿದ್ದಾರೆ.

Story first published: Tuesday, February 25, 2025, 18:33 [IST]
Other articles published on Feb 25, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+