ಫ್ರೆಂಚ್ ಓಪನ್‌ನಿಂದ ಹಿಂದೆ ಸರಿದ ರೋಜರ್ ಫೆಡರರ್

20 ಬಾರಿ ಗ್ರ್ಯಾನ್‌ಸ್ಲಾಮ್ ಚಾಂಪಿಯನ್ ಆಗಿರುವ ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಪ್ರಸ್ತುತ ನಡೆಯುತ್ತಿರುವ ಫ್ರೆಂಚ್ ಓಪನ್ 2021 ಟೆನಿಸ್ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ.

ರವಿಚಂದ್ರನ್ ಅಶ್ವಿನ್ ಮಹಾನ್ ಬೌಲರ್ ಏನಲ್ಲ, ಆತನಿಗೆ ಸಮಸ್ಯೆಯಿದೆ: ಮಾಜಿ ಭಾರತೀಯ ಕ್ರಿಕೆಟಿಗ

ಶನಿವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ರೋಜರ್ ಫೆಡರರ್ ಜರ್ಮನಿಯ ಡೊಮಿನಿಕ್ ಕೂಪರ್ ವಿರುದ್ಧ 7-6(5), 6-7(3), 7-6(4) ಹಾಗೂ 7-5 ಅಂತರದಿಂದ ಗೆಲುವನ್ನು ಸಾಧಿಸಿ ನಾಲ್ಕನೇ ಸುತ್ತಿನ ಪಂದ್ಯಕ್ಕೆ ಪ್ರವೇಶಿಸಿದ್ದರು.

ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಇಟಲಿಯ ಮ್ಯಾಟ್ಟೋ ಬೆರೆಟ್ಟಿನಿ ವಿರುದ್ಧ ಸೆಣಸಾಡಬೇಕಿದ್ದ ರೋಜರ್ ಫೆಡರರ್, ಈ ಸುತ್ತಿನ ಪಂದ್ಯಕ್ಕೂ ಮುನ್ನ ಭಾನುವಾರ ಪಂದ್ಯಾವಳಿಯಿಂದ ಹಿಂದೆ ಸರಿದಿರುವ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. 3 ವರ್ಷಗಳ ಹಿಂದೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಜರ್ ಫೆಡರರ್ ಕಾಲು ನೋವಿನ ಕಾರಣದಿಂದ ಪ್ರಸ್ತುತ ಪಂದ್ಯಾವಳಿಯಿಂದ ದೂರ ಸರಿದಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಪ್ರಸ್ತುತ ಪಂದ್ಯಾವಳಿಯಲ್ಲಿ 3 ಪಂದ್ಯಗಳನ್ನು ಗೆದ್ದಿರುವುದರ ಕುರಿತು ರೋಜರ್ ಫೆಡರರ್ ಸಂತಸ ವ್ಯಕ್ತಪಡಿಸಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, June 6, 2021, 21:43 [IST]
Other articles published on Jun 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X