Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Satvik- Chirag: ಥಾಯ್ಲೆಂಡ್‌ ಓಪನ್‌ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್‌- ಚಿರಾಗ್‌ ಜೋಡಿ

ಮೇ 19 ಭಾನುವಾರ, ಬ್ಯಾಂಕಾಕ್‌ನಲ್ಲಿ ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದ ಫೈನಲ್‌ ಪಂದ್ಯದಲ್ಲಿ ಭಾರತದ ಸ್ಟಾರ್ ಜೋಡಿ ಹಾಗು ಏಷ್ಯನ್ ಗೇಮ್ಸ್ ಚಾಂಪಿಯನ್ಸ್‌ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

29 ನೇ ಶ್ರೇಯಾಂಕದ ಚೀನಾ ಜೋಡಿಯಾದ ಚೆನ್ ಬೊ ಯಾಂಗ್ ಮತ್ತು ಲಿಯು ಯಿ ವಿರುದ್ಧ ವಿಶ್ವದ ಮೂರನೇ ಶ್ರೇಯಾಂಕದ ಜೋಡಿಯಾದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಜಯಗಳಿಸುವ ಮೂಲಕ ಥಾಯ್ಲೆಂಡ್‌ ಓಪನ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

Satvik-Chirag pair won the Thailand Open title

ಸಾತ್ವಿಕ್‌ ಮತ್ತು ಚಿರಾಗ್‌ ಜೋಡಿ ಚೆನ್‌ ಬೊ ಯಾಂಗ್‌ ಮತ್ತು ಲಿಯು ಯಿ ಅವರನ್ನು 21-15, 21-15 ಸೆಟ್‌ಗಳಿಂದ ಸೋಲಿಸಿತ್ತು. ಇದರೊಂದಿಗೆ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ಗೂ ಮುನ್ನ ಒಳ್ಳೆಯ ಆರಂಭ ಪಡೆದುಕೊಂಡಿದ್ದಾರೆ.

ಈ ಋತುವಿನ ಮಾರ್ಚ್‌ನಲ್ಲಿ ನಡೆದ ಫ್ರೆಂಚ್ ಓಪನ್ ಸೂಪರ್ 750 ನಲ್ಲಿ ಜಯಗಳಿಸಿದ ನಂತರ ಇದು ಎರಡನೇ ಪ್ರಶಸ್ತಿಯಾಗಿದೆ. ಈಗಾಗಲೇ ಮಲೇಷ್ಯಾ ಸೂಪರ್ 1000 ಮತ್ತು ಇಂಡಿಯಾ ಸೂಪರ್ 750 ನಲ್ಲಿ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಚಿರಾಗ್‌, "ಬ್ಯಾಂಕಾಕ್ ಯಾವಾಗಲೂ ನಮಗೆ ವಿಶೇಷವಾಗಿದೆ. ನಾವು 2019ರಲ್ಲಿ ನಮ್ಮ ಮೊದಲ ಸೂಪರ್ ಸಿರೀಸ್ ಪ್ರಶಸ್ತಿಯನ್ನು ಗೆದ್ದಿದ್ದೇವೆ ಮತ್ತು ಥಾಮಸ್ ಕಪ್ ಅನ್ನು ಸಹ ಗೆದ್ದಿದ್ದೇವೆ. ಆದ್ದರಿಂದ ಬ್ಯಾಂಕಾಕ್‌ ನಮಗೆ ವಿಶೇಷ ಸ್ಥಳವಾಗಿದ್ದು, ಇಲ್ಲಿಗೆ ಬಂದಿರುವುದು ತುಂಬಾ ಸಂತೋಷವಾಗಿದೆ" ಎಂದು ಹೇಳಿದರು.

ಮುಂಬರುವ ಪ್ಯಾರಿಸ್‌ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತದ 7 ಬ್ಯಾಡ್ಮಿಂಟನ್ ಆಟಗಾರರು ಆರ್ಹತೆ ಪಡೆದಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ಎಚ್‌ಎಸ್ ಪ್ರಣಯ್ ಮತ್ತು ಲಕ್ಷ್ಯ ಸೇನ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮಹಿಳೆಯರ ಸಿಂಗಲ್ಸ್‌ನಲ್ಲಿ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿರುವ ಪಿವಿ ಸಿಂಧು ಭಾರತದ ಏಕೈಕ ಆಟಗಾರ್ತಿಯಾಗಿದ್ದಾರೆ.

ಇನ್ನು ವಿಶ್ವದ 3ನೇ ಶ್ರೇಯಾಂಕದ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಧ್ವಜವನ್ನು ಹಾರಿಸಲು ರೆಡಿಯಾಗಿದ್ದಾರೆ. ಇತ್ತ ಮಹಿಳೆಯರ ಡಂಬಲ್ಸ್‌ನಲ್ಲಿ ತನಿಷಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

Story first published: Sunday, May 19, 2024, 20:12 [IST]
Other articles published on May 19, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+