Saina Nehwal: ಸೈನಾ ನೆಹ್ವಾಲ್ ನಿವೃತ್ತಿ ಹೊಂದುವುದು ಯಾವಾಗ ಗೊತ್ತಾ?
ದೇಶದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಮೈದಾನದಿಂದ ದೂರ ಸರೆದಿದ್ದಾರಾ ಎಂಬ ಸಂಶಯ ಮೂಡುತ್ತಿದೆ. ಅವರು ಬಹುದಿನಗಳಿಂದ ಅಂಗಳದಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಸೈನಾ ನೆಹ್ವಾಲ್ ಬಹಿರಂಗ ಪಡಿಸಿದ್ದಾರೆ. ಅಲ್ಲದೆ ತಾವು ರಾಜೀನಾಮೆ ಪಡೆಯುವ ಬಗ್ಗೆಯೂ ತುಟಿ ಬಿಚ್ಚಿದ್ದಾರೆ.
ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಸಾಧನೆ ಮಾಡಿರುವ ಸೈನಾ ನೆಹ್ವಾಲ್, ಕಳೆದ ಕೆಲವು ತಿಂಗಳುಗಳಿಂದ ಅಂಗಳಕ್ಕೆ ಇಳಿದಿಲ್ಲ. ಹೀಗಾಗಿ ನಿವೃತ್ತಿ ಹೊಂದಿದ್ದಾರಾ ಎಂಬ ಊಹಾಪೋಹಗಳು ಹರಿದಾಡಲು ಆರಂಭಿಸಿದವು. ಇದಕ್ಕೆ ಉತ್ತರವನ್ನು ಸೈನಾ ನೀಡಿದ್ದಾರೆ.

ಸೈನಾ ಹೇಳಿದ್ದೇನು?
ಸೈನಾ ನೆಹ್ವಾಲ್ ಕಳೆದ ಕೆಲವು ತಿಂಗಳುಗಳಿಂದ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಟೂರ್ನಿಗಳಲ್ಲಿ ಭಾಗವಹಿಸಲು ಆಗುತ್ತಿಲ್ಲ. ಇದರ ನೇರ ಪರಿಣಾಮ ತಮ್ಮ ಅಭ್ಯಾಸದ ಮೇಲೂ ಬಿದ್ದಿದೆ ಎಂದು ನೈಹ್ವಾಲ್ ತಿಳಿಸಿದ್ದಾರೆ. ಸೈನಾ ಬಹುದಿನಗಳಿಂದ ಮೊಣಕಾಲಿನ ಸಮಸ್ಯೆಯಿಂದ ಬಲುತ್ತಿದ್ದಾರೆ. ಇದು ತನ್ನ ಆಟದ ಮೇಲೆ ನೇರ ಪರಿಣಾಮ ಬೀರಬಹುದು. ಅಲ್ಲದೆ ತಮ್ಮ ವೃತ್ತಿ ಜೀವನಕ್ಕೂ ತೊಂದರೆ ಆಗಬಹುದು ಎಂದು ಅವರು ನಂಬಿದ್ದಾರೆ.
ಮೊಣಕಾಲಿನ ಸಮಸ್ಯೆ ತಮ್ಮ ವೃತ್ತಿ ಜೀವನದ ಮೇಲೆ ಪರಿಣಾಮ ಬೀರುವುದಾದರೆ ಅವರು ಶೀಘ್ರದಲ್ಲೇ ನಿವೃತ್ತಿ ಘೋಷಿಸಬಹುದು ಎಂದು ಸೂಚನೆ ನೀಡಿದ್ದಾರೆ.

ಲಂಡನ್ ಒಲಿಂಪಿಕ್ಸ್‌ನಲ್ಲಿ ಸೈನಾ ನೆಹ್ವಾಲ್ ಭರ್ಜರಿ ಪ್ರದರ್ಶನ ನೀಡಿದ್ದರು. ಅಲ್ಲದೆ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ದೇಶದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯನ್ನು ಉತ್ತೇಜಿಸಲು ಶ್ರಮಿಸಿದ್ದರು. ಈ ಮೂಲಕ ಭಾರತದ ಪರ ಒಲಿಂಪಿಕ್ಸ್‌ನಲ್ಲಿ ಪದಕ ಸಾಧನೆಯನ್ನು ಮಾಡಿದ ಮೊದಲ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಲಂಡನ್ ಒಲಿಂಪಿಕ್ಸ್‌ನ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಕಂಚಿನ ಸಾಧನೆ ಮಾಡಿರುವ ರೈಫಲ್ ಅಥ್ಲಿಟ್ ಗಗನ್ ನಾರಂಗ್ ಅವರೊಂದಿಗಿನ ಪಾಡ್ ಕ್ಯಾಸ್ಟ್‌ನಲ್ಲಿ ಸೈನಾ ಈ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಸೈನಾ ನನ್ನ ಮೊಣಕಾಲು ಉತ್ತಮ ಸ್ಥಿತಿಯಲ್ಲಿಲ್ಲ. ಈ ಪರಿಸ್ಥಿತಿಯಲ್ಲಿದ್ದಾಗ ನಾವು ವಿಶ್ವದ ಅತ್ಯುತ್ತಮ ಆಟಗಾರರನ್ನು ಹೇಗೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ.
ಕಳೆದ ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಬಳಿಕ ಸೈನಾ ಯಾವುದೇ ಟೂರ್ನಿಯಲ್ಲಿ ಭಾಗವಹಿಸಿಲ್ಲ. ಇವರಿಗೆ ಸ್ನಾಯು ಸೆಳೆತದ ನೋವು ಬಹುವಾಗಿ ಕಾಡುತ್ತಿದೆ. ಹೀಗಾಗಿ ಅವರು ಈ ವರ್ಷದ ಅಂತ್ಯದಲ್ಲಿ ಬ್ಯಾಡ್ಮಿಂಟನ್‌ಗೆ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications