ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್: ಚಿರಾಗ್-ಸಾತ್ವಿಕ್‌ಗೆ ಗೆಲುವು, ಪ್ರಣೀತ್‌ಗೆ ಸೋಲು

Tokyo olympics: Chirag-Satwik win the opening match, but Praneeth is defeated by Zilmerman

ಟೋಕಿಯೋ, ಜುಲೈ: ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಸಾಯಿ ಪ್ರಣೀತ್ ಮೊದಲ ಸುತ್ತಿನಲ್ಲೇ ಹೊರಬಿದ್ದು ನಿರಾಸೆ ಅನುಭವಿಸಿದ್ದಾರೆ. ಆದರೆ ಆದರೆ ಡಬಲ್ಸ್ ಜೋಡಿಯಾದ ಚಿರಾಗ್ ಶೆಟ್ಟಿ ಹಗೂ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸುವ ಮೂಲಕ ಬ್ಯಾಡ್ಮಿಂಟನ್ ಪಾಳಯದಲ್ಲಿ ಸಂಭ್ರಮ ಮೂಡಿಸಿದರು.

ಭಾರತದ ಜೋಡಿಯಾದ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಚೀನಾದ ಜೋಡಿಯ ವಿರುದ್ಧ 21-16, 16-21, 27-25 ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೊದಲ ಸುತ್ತಿನಲ್ಲಿ ಗೆಲುವಿನ ರುಚಿಕಂಡಿದ್ದಾರೆ.

ಟೋಕಿಯೋ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮೀರಾಬಾಯಿ ಚಾನುಟೋಕಿಯೋ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಪುರಷರ ಸಿಂಗಲ್ಸ್ ವಿಭಾಗದಲ್ಲಿ ಸ್ಪರ್ಧಿಸುತ್ತಿರುವ ಭಾರತದ ಏಕೈಕ ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್ ಕೆಳ ಕ್ರಮಾಂಕದ ಆಟಗಾರನ ವಿರುದ್ಧ ಸೋಲು ಕಂಡರು. ಒಲಿಂಪಿಕ್ಸ್‌ನಲ್ಲಿ ಪ್ರಥಮ ಪಂದ್ಯವನ್ನಾಡಿದ ಸಾಯಿ ಪ್ರಣೀತ್ ಇಸ್ರೇಲ್‌ನ ಮಿಶಾ ಜಿಲ್ಮೇರ್ಮನ್ ವಿರುದ್ಧ ಸೋಲು ಕಂಡರು.

ಪುರುಷರ ಸಿಂಗಲ್ಸ್‌ನ ಡಿ ಗ್ರೂಫ್‌ನ ಮೊದಲ ಪಂದ್ಯದಲ್ಲಿ ಸಾಯಿ ಪ್ರಣೀತ್ ಜಿಲ್ಮೇರ್ಮನ್ ವಿರುದ್ಧ 17-21, 15-21 ಅಂತರದಿಂದ ಸೋಲು ಕಂಡಿದ್ದಾರೆ. 42 ನಿಮಿಷಗಳಲ್ಲಿ ಈ ಪಂದ್ಯ ಅಂತ್ಯವಾಗಿತ್ತು. ಈ ಮೂಲಕ ಸಾಯಿ ಪ್ರಣೀತ್ ಬ್ಯಾಡ್ಮಿಂಟನ್ ಪ್ರೇಮಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಆರಂಭದಿಂದಲೂ ಸಾತಿ ಪ್ರಣೀತ್ ಎದುರಾಳಿ ವಿರುದ್ಧ ಮೇಲುಗೈ ಸಾಧಿಸುವಲ್ಲಿ ವಿಫಲರಾದರು. ಈ ಮೂಲಕ ಪಂದ್ಯದಲ್ಲಿ ಹಿಡಿತವನ್ನು ಸಾಧಿಸುವಲ್ಲಿ ಸಂಪೂರ್ಣವಾಗಿ ವಿಫಲರಾದರು.

ಎರಡು ಸೆಟ್‌ಗಳಲ್ಲಿಯೂ ಸಾಯಿ ಪ್ರಣೀತ್ ಉತ್ತಮ ಆರಂಭವನ್ನು ಪಡೆದರು. ಆದರೆ ಅದನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಸಫಲರಾಗಲಿಲ್ಲ.

Story first published: Saturday, July 24, 2021, 13:55 [IST]
Other articles published on Jul 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X