For Quick Alerts
ALLOW NOTIFICATIONS  
For Daily Alerts

ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್

Tokyo Paralympics: Karnataka born IAS officer Suhas Yathiraj wins silver medal in badminton

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಸುಹಾಸ್ ಯತಿರಾಜ್ ಇತಿಹಾಸವನ್ನು ನಿರ್ಮಾಣ ಮಾಡಿದ್ದಾರೆ. ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವಿಸ್‌(ಐಎಎಸ್) ಅಧಿಕಾರಿಯಾಗಿ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ. ಭಾನುವಾರ ನಡೆದ ಫೈನಲ್ ಸ್ಪರ್ಧೆಯಲ್ಲಿ ಸುಹಾಸ್ ಯತಿರಾಜ್ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದ ಫೈನಲ್ ಸ್ಪರ್ಧೆಯಲ್ಲಿ ವಿಶ್ವದ ಅಗ್ರ ಕ್ರಮಾಂಕದ ಆಟಗಾರ ಹಾಗೂ ವಿಶ್ವ ಚಾಂಪಿಯನ್ ಫ್ರಾನ್ಸ್‌ನ ಲೂಕಾಸ್ ಮಜೂರ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಇನ್ನು ಈ ಐಎಎಸ್ ಅಧಿಕಾರಿಯಾಗಿರುವ ಸುಹಾಸ್ ಯತಿರಾಜ್ ಕರ್ನಾಟಕ ಮೂಲದವರು ಎಂಬುದು ಕನ್ನಡಿಗರ ಪಾಲಿಗೆ ಹೆಮ್ಮೆಯ ವಿಷಯ. ಕರ್ನಾಟದ ಹಾಸನದವರಾದ ಸುಹಾಸ್ ಯತಿರಾಜ್ ಉತ್ತರ ಪ್ರದೇಶದ ನೋಯ್ಡಾದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನು ಇದೇ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಇನ್ನೋರ್ವ ಬ್ಯಾಡ್ಮಿಂಟನ್ ಆಟಗಾರ ತರುಣ್ ಕೂಡ ಸೆಮಿಫೈನಲ್‌ನಲ್ಲಿ ಇದೇ ಎದುರಾಳಿ ಫ್ರಾನ್ಸ್‌ನ ಲೂಕಾಸ್ ಮಜೂರ್ ವಿರುದ್ಧವೇ ಸೋಲು ಕಂಡಿದ್ದರು. ಬಳಿಕ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ತರುಣ್ ಇಂಡೋನೇಶಿಯಾದ ಫ್ರೆಡ್ಡೀ ಸೆಟಿಯಾವನ್ ವಿರುದ್ಧ ಸೋಲು ಕಂಡಿದ್ದಾರೆ.

ಎಸ್‌ಎಲ್ 4 ವಿಭಾಗದಲ್ಲಿ ಯತಿರಾಜ್ ಈಗ ವಿಶ್ವದ ನಂಬರ್ 3 ಆಟಗಾರನಾಗಿದ್ದಾರೆ. ಸೆಮಿಫೈನಲ್‌ನಲ್ಲಿ ಇವರು ಇಂಡೋನೇಶಿಯಾದ ಫ್ರೆಡ್ಡಿ ಸೆಟಿಯಾವನ್ ವಿರುದ್ಧ ನೇರ ಸೆಟ್‌ಗಳನಲ್ಲಿ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ಖಚಿತಪಡಿಸಿದ್ದರು. ಈ ಮೂಲಕ ಈಗ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಸುಹಾಸ್ ಗೆದ್ದ ಬೆಳ್ಳಿ ಪದಕ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಗೆದ್ದಿರುವ 18ನೇ ಪದಕವಾಗಿದೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಪ್ರಥಮ ಬಾರಿಗೆ ಭಾರತ ಇಷ್ಟ ಪದಕ ಗೆದ್ದ ಸಾಧನೆ ಮಾಡಿದೆ.

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳ ವಿವರ:

1. ಭವೀನಾಬೆನ್ ಪಟೇಲ್- ಬೆಳ್ಳಿ ಪದಕ- ಮಹಿಳಾ ಸಿಂಗಲ್ಸ್ ಟೇಬಲ್ ಟೆನಿಸ್ C4
2. ನಿಶಾದ್ ಕುಮಾರ್ - ಬೆಳ್ಳಿ ಪದಕ - ಪುರುಷರ ಹೈಜಂಪ್ ಟಿ 47
3. ಅವನಿ ಲೇಖರ - ಚಿನ್ನದ ಪದಕ - ಮಹಿಳೆಯರ 10 ಮೀ ಏರ್ ರೈಫಲ್ ಶೂಟಿಂಗ್ ಸ್ಟ್ಯಾಂಡಿಂಗ್ ಎಸ್ ಎಚ್ 1
4. ದೇವೇಂದ್ರ ಝಝಾರಿಯಾ - ಬೆಳ್ಳಿ ಪದಕ - ಪುರುಷರ ಜಾವೆಲಿನ್ ಥ್ರೋ ಎಫ್ 46
5. ಸುಂದರ್ ಸಿಂಗ್ ಗುರ್ಜಾರ್ - ಕಂಚಿನ ಪದಕ - ಪುರುಷರ ಜಾವೆಲಿನ್ ಥ್ರೋ ಎಫ್ 46
6. ಯೋಗೀಶ್ ಕಠುನಿಯಾ - ಬೆಳ್ಳಿ ಪದಕ - ಪುರುಷರ ಡಿಸ್ಕಸ್ ಥ್ರೋ ಎಫ್ 56
7. ಸುಮಿತ್ ಆಂಟಿಲ್ - ಚಿನ್ನದ ಪದಕ - ಪುರುಷರ ಜಾವೆಲಿನ್ ಥ್ರೋ ಎಫ್ 64
8. ಸಿಂಗರಾಜ್ ಅಧಾನ - ಕಂಚಿನ ಪದಕ - ಪುರುಷರ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಎಸ್‌ಎಚ್ 1
9. ಮರಿಯಪ್ಪನ್ ತಂಗವೇಲು - ಬೆಳ್ಳಿ ಪದಕ - ಪುರುಷರ ಹೈ ಜಂಪ್ ಟಿ 42
10. ಶರದ್ ಕುಮಾರ್ - ಕಂಚಿನ ಪದಕ - ಪುರುಷರ ಹೈಜಂಪ್ ಟಿ 42
11. ಪ್ರವೀಣ್ ಕುಮಾರ್ - ಬೆಳ್ಳಿ ಪದಕ - ಪುರುಷರ ಎತ್ತರ ಜಿಗಿತ ಟಿ 64
12. ಅವನಿ ಲೇಖರ - ಕಂಚಿನ ಪದಕ - ಮಹಿಳೆಯರ 50 ಮೀ ರೈಫಲ್ ಎಸ್‌ಹೆಚ್ 1
13. ಹರ್ವಿಂದರ್ ಸಿಂಗ್‌- ಕಂಚಿನ ಪದಕ- ಪುರುಷರ ಆರ್ಚರಿ ಸಿಂಗಲ್ಸ್ ರಿಕ್ಯೂರ್ವ್
14. ಮನೀಷ್ ನರ್ವಾಲ್ - ಚಿನ್ನದ ಪದಕ - ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆ
15. ಸಿಂಗ್‌ರಾಜ್ - ಬೆಳ್ಳಿ ಪದಕ - ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆ
14. ಮನೀಷ್ ನರ್ವಾಲ್ - ಚಿನ್ನದ ಪದಕ - ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆ
15. ಸಿಂಗ್‌ರಾಜ್ - ಬೆಳ್ಳಿ ಪದಕ - ಪುರುಷರ 50 ಮೀಟರ್ 4 ಪೊಸಿಷನ್ ಏರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆ
16. ಪ್ರಮೋದ್ ಭಗತ್- ಬೆಳ್ಳಿ ಪದಕ - ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್-3 ವಿಭಾಗ
17. ಸುಹಾಸ್ ಯತಿರಾಜ್- ಬೆಳ್ಳಿ ಪದಕ- ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗ

Story first published: Sunday, September 5, 2021, 9:17 [IST]
Other articles published on Sep 5, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+