For Quick Alerts
ALLOW NOTIFICATIONS  
For Daily Alerts

ಪ್ಯಾರಿಸ್ ಒಲಿಂಪಿಕ್ಸ್‌ಗೆ ಆರ್ಹತೆ ಪಡೆದ ಭಾರತದ ಏಕೈಕ ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ

ಜೂನ್‌ 2 ಭಾನುವಾರ, ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಎರಡನೇ ವಿಶ್ವ ಅರ್ಹತಾ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ಭಾರತದ ಸ್ಟಾರ್ ಬಾಕ್ಸರ್‌ 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆರ್ಹತೆ ಪಡೆದುಕೊಂಡಿದ್ದಾರೆ.

ಎರಡನೇ ವಿಶ್ವ ಅರ್ಹತಾ ಟೂರ್ನಿಯ 51 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಚೀನಾದ ಚುವಾಂಗ್ ಲಿಯು ವಿರುದ್ಧ 5-0 ಅಂತರದಿಂದ ಭಾರತದ ಏಕೈಕ ಪುರುಷರ ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಗಲ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ 2024ರ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಪಡೆಯುವಲ್ಲಿ ಅಮಿತ್ ಪಂಗಲ್ ಯಶಸ್ವಿಯಾಗಿದ್ದಾರೆ.

India s only world championship silver medalist to qualify for Paris Olympics

ಅಮಿತ್ ಪಂಗಲ್ ಅವರಿಗೂ ಮುನ್ನ ನಿಶಾಂತ್ ದೇವ್ (71 ಕೆಜಿ), ನಿಖತ್ ಜರೀನ್ (50 ಕೆಜಿ), ಪ್ರೀತಿ ಪವಾರ್ (54 ಕೆಜಿ) ಮತ್ತು ಲೊವ್ಲಿನಾ ಬೊರ್ಗೊಹೈನ್ (75 ಕೆಜಿ) ಅವರು ಈಗಾಗಲೇ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ.

ಮೊದಲ ಎರಡು ಅರ್ಹತಾ ಈವೆಂಟ್‌ಗಳ ಆಯ್ಕೆ ಮೌಲ್ಯಮಾಪನದಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತ ದೀಪಕ್ ಭೋರಿಯಾ ವಿರುದ್ಧ ಸೋತಿದ್ದರಿಂದ ಪಂಗಲ್‌ಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಹೋಗಲು ಒಂದೇ ಒಂದು ಅವಕಾಶವಿತ್ತು. ಹೀಗಾಗಿ ಅಮಿತ್‌ ಪಂಗಲ್‌ ತನ್ನ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಪ್ಯಾರಿಸ್‌ ಕ್ರೀಡಾಕೂಟಕ್ಕೆ ಆರ್ಹತೆ ಗಳಿಸಿದ್ದಾರೆ.

ಮತ್ತೊಂದೆಡೆ ಜಾಸ್ಮಿನ್ ಲಂಬೋರಿಯಾ (57 ಕೆಜಿ) ಮತ್ತು ಸಚಿನ್ ಸಿವಾಚ್ (57 ಕೆಜಿ) ಸಹ ಒಲಿಂಪಿಕ್ ಕೋಟಾ ಸಾಧಿಸುವ ಪ್ರಯತ್ನದಲ್ಲಿದ್ದಾರೆ. ಈಗಾಗಲೇ ಪ್ಯಾರಿಸ್ ಒಲಿಂಪಿಕ್ಸ್‌ಗೆ ಪ್ರವೇಶ ಪಡೆದಿರುವ ಎಲ್ಲಾ 5 ಬಾಕ್ಸರ್‌ಗಳು ಪದಕ ಗೆಲ್ಲುವ ಗುರಿ ಹೊಂದಿದ್ದಾರೆ.

ಅಮಿತ್ ಪಂಗಲ್ ಅವರು ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಭಾರತದ ಅಗ್ರ ಬಾಕ್ಸರ್‌ಗಳಲ್ಲಿ ಒಬ್ಬರಾಗಿದ್ದಾರೆ.

2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಮತ್ತು ಗೋಲ್ಡ್ ಕೋಸ್ಟ್‌ನಲ್ಲಿ ನಡೆದ 2018 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಅಮಿತ್‌ ಪಂಗಲ್‌ ಗೆದ್ದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಪಡೆದ ಮೊದಲ ಬಾಕ್ಸರ್

ಶುಕ್ರವಾರ ನಡೆದ 71 ಕೆಜಿ ವಿಭಾಗದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಭಾರತದ ಬಾಕ್ಸರ್ ನಿಶಾಂತ್ ದೇವ್ ಅವರು ಮೊಲ್ಡೊವಾದ ವಸಿಲೆ ಸೆಬೊಟಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.

5-0 ಅಂಕಗಳ ಅಂತರದಿಂದ ಗೆಲ್ಲುವ ಮೂಲಕ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ನಿಶಾಂತ್‌ ಅರ್ಹತೆ ಪಡೆದರು ಮೊದಲ ಪರುಷ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

Story first published: Sunday, June 2, 2024, 16:44 [IST]
Other articles published on Jun 2, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+