
ನವದೆಹಲಿ, ನವೆಂಬರ್ 24: ಮಹಿಳೆಯರ ವಿಶ್ವ ಚಾಂಪಿಯನ್ ಶಿಪ್‌ನ 48 ಕೆಜಿ ವಿಭಾಗದ ಫೈನಲ್‌ನಲ್ಲಿ ಉಕ್ರೇನ್‌ನ ಹನ್ನಾ ಒಖೋಟಾ ಅವರನ್ನು ಸೋಲಿಸುವ ಮೂಲಕ ಭಾರತದ ಬಾಕ್ಸರ್ ಮೇರಿ ಕೋಮ್ ಚಿನ್ನದ ಪದಕ ಗೆದ್ದಿದ್ದಾರೆ.
2010ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಮೇರಿ ಕೋಮ್ ಚಿನ್ನದ ಪದಕ ಗೆದ್ದಿದ್ದರು. ಎಂಟು ವರ್ಷದ ತರುವಾಯ ಅವರು ಮತ್ತು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಅವರು ಆರನೇ ಬಾರಿ ವಿಶ್ವ ಚಾಂಪಿಯನ್ ಎನಿಸಿಕೊಂಡಿದ್ದಾರೆ.
16 ವರ್ಷದ ಹಿಂದೆ (2002) ಅವರು ತಮ್ಮ ಮೊದಲ ವಿಶ್ವ ಚಾಂಪಿಯನ್ ಚಿನ್ನದ ಪದಕ ಜಯಿಸಿದ್ದರು. ಆರು ಬಾರಿ ಚಿನ್ನದ ಪದಕ ಗೆದ್ದ ಮೊದಲ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಐರ್ಲೆಂಡ್‌ನ ಬಾಕ್ಸರ್ ಕೇಟಿ ಟೇಲರ್ ಐದು ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. ಈಗ ಮೇರಿ ಕೋಮ್ ಅವರನ್ನು ಹಿಂದಿಕ್ಕಿದ್ದಾರೆ.
ನವದೆಹಲಿಯ ಕೆಡಿ ಜಾಧವ್ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ 35 ವರ್ಷ ಮೇರಿ ಕೋಮ್, 5-0 ಅಂತರ ಏಕಪಕ್ಷೀಯ ಪಂದ್ಯದಲ್ಲಿ ಗೆಲುವು ಸಾಧಿಸಿದರು.
2002, 2005, 2006, 2008 ಮತ್ತು 2010ರಲ್ಲಿ ಮೇರಿ ವಿಶ್ವ ಚಾಂಪಿಯನ್ ಆಗಿದ್ದರು.