Women's World Boxing Championships: ಕ್ವಾ. ಫೈನಲ್‌ನಲ್ಲಿ ಮಿಂಚಿದ ಭಾರತದ ಬಾಕ್ಸರ್‌ಗಳು: ನಾಲ್ಕು ಪದಕ ಖಚಿತ

ನವದೆಹಲಿಯಲ್ಲಿ ನಡೆಯುತ್ತಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಬಾಕ್ಸರ್‌ಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಭಾರತದ ಬಾಕ್ಸಿಂಗ್ ತಾರೆ ನಿಖತ್ ಜರೀನ್ ಸೇರಿದಂತೆ ನಾಲ್ವರು ಬಾಕ್ಸರ್‌ಗಳು ತಮ್ಮ ತಮ್ಮ ಕ್ವಾರ್ಟರ್‌ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದು ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ನಾಲ್ಕು ಪದಕಗಳು ಖಚಿತವಾಗಿದೆ.
ಮೊದಲಿಗೆ ನೀತು ಗಂಗಾಸ್ ತಮ್ಮ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಪಾನ್‌ನ ಮಡೋಕಾ ವಡಾ ಅವರನ್ನು ಎದುರಿಸಿದರು. ಈ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.ಈ ಪಂದ್ಯದಲ್ಲಿ ಮಡೋಕಾ ವಿರುದ್ಧ ನೀತು ಆರಂಭದಿಂದಲೇ ಮೇಲುಗೈ ಸಾಧಿಸಿದ್ದರು. ಮೇಲಿಂದ ಮೇಲೆ ಪಂಚ್‌ಗಳನ್ನು ಬಾರಿಸಿದ ನೀತು ಎದುರಾಳಿಯನ್ನು ತಬ್ಬಿಬ್ಬಾಗಿಸಿದರು.
ಇನ್ನು ನಿಖತ್ ಜರೀನ್ ಕೂಡ ಸೆಮಿಫೈನಲ್‌ಗೆ ಪ್ರವೇಶಿಸುವ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಪದಕವನ್ನು ಖಚಿತಪಡಿಸಿದರು. 26 ವರ್ಷದ ನಿಖತ್ ಜರೀನ್ 2 ಬಾರಿಯ ವಿಶ್ವ ಪದಕ ವಿಜೇತೆ ಥಾಯ್ಲೆಂಡ್‌ನ ಚುತಮತ್ ರಕ್ಸತ್ ಅವರನ್ನು ಮಣಿಸಿದ್ದಾರೆ. ಈ ಮೂಲಕ ಈ ಕಠಿಣ ಹೋರಾಟದ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಿ ಪದಕವನ್ನು ಖಚಿತಪಡಿಸಿದ್ದಾರೆ.
ಸಂಜೆ ನಡೆದ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ 75 ಕೆಜಿ ಮಿಡಲ್‌ವೇಟ್ ವಿಭಾಗದಲ್ಲಿ ಗೆಲುವು ಸಾಧಿಸಿದ್ದಾರೆ. ಮೊಜಾಂಬಿಕ್‌ನ ಅಡೋಸಿಂಡಾ ಗಮಾನೆ ರಾಡಿ ವಿರುದ್ಧ ನಡೆದ ಮುಖಾಮುಖಿಯಲ್ಲಿ ಸರ್ವಾನುಮತದ ನಿರ್ಣಯದಿಂದ ಗೆದ್ದು ಅವರು ಸೆಮಿ ಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡರು. ಅಸ್ಸಾಂ ಬಾಕ್ಸರ್ ಪ್ರಸ್ತುತ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಪ್ರಾಬಲ್ಯ ಸಾಧಿಸುವ ಮೂಲಕ ನಂತರ ಭಾರತಕ್ಕೆ ಈ ಟೂರ್ನಿಯಲ್ಲಿ ನಾಲ್ಕನೇ ಪದಕವನ್ನು ಖಚಿತಪಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications