Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ರಣಜಿಯಲ್ಲೂ ಟಿ20 ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದ ವೈಭವ್: 9 ಬೌಂಡರಿ, 4 ಸಿಕ್ಸರ್‌

ಭರವಸೆಯ ಆಟಗಾರ ವೈಭವ್ ಸೂರ್ಯವಂಶಿ ಕ್ರಿಕೆಟ್‌ ಅಂಗಳದಲ್ಲಿ ಕಮಾಲ್‌ ಮಾಡುತ್ತಿದ್ದಾರೆ. ತಮ್ಮ 14ನೇ ವಯಸ್ಸಿನಲ್ಲಿ ಐಪಿಎಲ್‌ ಅಂಗಳದಲ್ಲಿ ಸದ್ದು ಮಾಡಿದ್ದ ಈ ಯಂಗ್ ಬಾಯ್‌ ಈಗ ದೇಶೀಯ ಕ್ರಿಕೆಟ್‌ನಲ್ಲೂ ತಮ್ಮ ಛಾಪೂ ಮೂಡಿಸಲು ಸಜ್ಜಾಗಿದ್ದಾರೆ. ಸದ್ಯ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ತಮ್ಮ ಕಮಾಲ್‌ ಪ್ರದರ್ಶನ ಮುಂದುವರೆಸಿದ್ದಾರೆ. ವೈಭವ್ ಸೂರ್ಯವಂಶಿ ಪ್ಲೇಟ್‌ ಗುಂಪು ಹಂತದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ ಮುಗಿಸಿ ಭಾರತಕ್ಕ ಬರುತ್ತಿದ್ದಂತೆ ವೈಭವ್ ಸೂರ್ಯವಂಶಿ ಅವರಿಗೆ ಬಿಹಾರ ತಂಡದ ಉಪನಾಯಕ ಪಟ್ಟವನ್ನು ಕಟ್ಟಲಾಗಿದೆ. ಆದರೆ ಈ ಟೂರ್ನಿಯ ಮೂರನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಶೈಲಿಯ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದಾರೆ. ಈ ವೇಳೆ ಇವರು ಕೆಲವೇ ರನ್‌ಗಳಿಂದ ಶತಕಗಳಿಂದ ವಂಚಿತರಾದರು. ಆದರೆ ಅವರ ಕಮಾಲ್‌ ಪ್ರದರ್ಶನ ಎಲ್ಲರೂ ಹುಬ್ಬೇರುವಂತೆ ಮಾಡಿದೆ.

14-Year-Old Vaibhav Suryavanshi Hits 97 in Ranji Trophy Plate Group Match for Bihar

ಸದ್ಯ ಇವರು ರಣಜಿ ಟ್ರೋಫಿಯಲ್ಲಿ ಬಿಹಾರ ಪರ ಬ್ಯಾಟ್ ಮಾಡುತ್ತಿದ್ದಾರೆ. ಪಾಟ್ನಾದಲ್ಲಿ ನಡೆದ ಪಂದ್ಯದಲ್ಲಿ ಬಿಹಾರ ಹಾಗೂ ಮೇಘಾಲಯ ಮೇಘಾಲಯ ನಡುವಿನ ಪಂದ್ಯದಲ್ಲಿ ವೈಭವ್ 138.80 ಸ್ಟ್ರೈಕ್ ರೇಟ್ ನಲ್ಲಿ ಬ್ಯಾಟ್ ಮಾಡಿದೆ. ವೈಭವ್ ಸೂರ್ಯವಂಶಿ 67 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 97 ರನ್ ಗಳಿಸಿದರು. ಮಂಗಳವಾರ ನಡೆದ ನಾಲ್ಕನೇ ದಿನದಾಟದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಬ್ಯಾಟಿಂಗ್ ಮಾಡುವ ಅವಕಾಶ ಲಭಿಸಿತು. ಈ ವೇಳೆ ವೈಭವ್ ಸೂರ್ಯವಂಶಿ ಟಿ20 ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ಮೇಘಾಲಯ ತಂಡದ ಬೌಲರ್‌ಗಳನ್ನು ಕಾಡಿದರು.

ಪಂದ್ಯದ ಫಲಿತಾಂಶ

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೇಘಾಲಯ ಮೊದಲ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 408 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿತು. ಮೇಘಾಲಯ ಪರ ಅಜಯ್ ಧುಹನ್‌ ಶತಕ ಬಾರಿಸಿದರೆ, ಸ್ವತ್ತಿಕ ಚೆಟ್ರಿ 94 ರನ್‌ ಬಾರಿಸಿ ತಂಡದ ಮೊತ್ತ ಹಿಗ್ಗಿಸುವಲ್ಲಿ ಸಫಲರಾದರು. ಬಿಹಾರ ಪರ ಹಿಮಾಂಶು ಸಿಂಗ್‌ 3, ಶುಭಾಂ ರಾಯ್‌ 2 ವಿಕೆಟ್‌ ಪಡೆದರು. ಮೊದಲ ಇನಿಂಗ್ಸ್‌ ಆರಂಭಿಸಿದ ಬಿಹಾರ 4 ವಿಕೆಟ್‌ ಕಳೆದುಕೊಂಡು 156 ರನ್‌ ಬಾರಿಸಿದ್ದಾಗ ಪಂದ್ಯವನ್ನು ಡಿಕ್ಲೇರ್ ಮಾಡಲಾಯಿತು.

ವೈಭವ್ ಸೂರ್ಯವಂಶಿ ಅಂಡರ್ 19 ತಂಡದ ಪರ ಆಡಿ ಗಮನ ಸೆಳೆದಿದ್ದಾರೆ. ಇತ್ತಿಚೀಗೆ ಅಂಡರ್‌ 19 ಭಾರತ ತಂಡ ಆಸ್ಟ್ರೇಲಿಯಾ, ಇಂಗ್ಲೆಂಡ್‌ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದರು.

Story first published: Tuesday, November 4, 2025, 21:23 [IST]
Other articles published on Nov 4, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+