Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಭಾರತ ತಂಡದ ಬುಲಾವ್

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ ಹೆಸರುವಾಸಿಯಾಗಿದ್ದ 15 ವರ್ಷದ ವೈಭವ್‌ ಸೂರ್ಯವಂಶಿ ಅವರಿಗೆ ಇದೇ ಮೊದಲ ಬಾರಿಗೆ ಭಾರತದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಐಪಿಎಲ್‌ನಲ್ಲಿ ಇವರು ಆಡಿದ ಧಾಟಿಯನ್ನು ನೋಡಿದ ಬಳಿಕ ಮಾಜಿ ಆಟಗಾರರು ಇವರನ್ನು ಭಾರತ ತಂಡದ ಪರ ಆಡುವುದನ್ನು ನೋಡಲು ಉತ್ಸುಕರಾಗಿದ್ದಾಗಿ ಹೇಳಿದ್ದರು.

19ನೇ ಆವೃತ್ತಿಯ ಐಪಿಎಲ್‌ನಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಹೆಸರುವಾಸಿಯಾದ ಆಟಗಾರ ವೈಭವ್ ಸೂರ್ಯವಂಶಿ. ರಾಜಸ್ಥಾನ್ ರಾಯಲ್ಸ್ ತಂಡ ಎರಡನೆಯ ಕ್ವಾಲಿಫೈಯರ್‌ ವರೆಗೂ ಅರ್ಹತೆ ಪಡೆಯುವಲ್ಲಿ ವೈಭವ್ ಅವರ ಕಾಣಿಕೆ ಅಪಾರ. ಇವರು ಪ್ಲೇ ಆಫ್‌ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟಿ ತಂಡಕ್ಕೆ ಆಧಾರವಾಗಿದ್ದರು. ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ 97, ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 96 ರನ್‌ ಬಾರಿಸಿ ತಂಡಕ್ಕೆ ಆಧಾರವಾಗಿದ್ದರು.

15-Year-Old

ವೈಭವ್ ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಿದ್ದರು. ಅಲ್ಲದೆ ತಾವಾಡಿದ ಎರಡನೇ ಆವೃತ್ತಿಯಲ್ಲೂ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಇತ್ತೀಚೆಗೆ ಮುಕ್ತಾಯವಾದ ಐಪಿಎಲ್‌ನಲ್ಲಿ ವೈಭವ್‌ ಮೊದಲ ಬಾರಿಗೆ ಪೂರ್ತಿ ಐಪಿಎಲ್ ಆಡಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಇವರು ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇವರು 14 ವರ್ಷದಲ್ಲಿ ಐಪಿಎಲ್ ಆಡಿದ ಹಿರಿಮೆ ಹೊಂದಿದ್ದಾರೆ. ಇನ್ನು ಇವರು ಸಿಕ್ಸರ್‌ ಬಾರಿಸುವುದು ಅವರಿಗೆ ನೀರು ಕುಡಿದಷ್ಟೇ ಸುಲಭವಾಗಿದೆ.

ಆರೆಂಜ್ ಕ್ಯಾಪ್ ಸರದಾರ

ಈ ಬಾರಿಯ ಐಪಿಎಲ್‌ನಲ್ಲಿ ವೈಭವ್‌ ಸೂರ್ಯವಂಶಿ ವಿಶ್ವದ ಸ್ಟಾರ್ ಬೌಲರ್‌ಗಳ ಎದುರು ಬ್ಯಾಟ್ ಮಾಡಿದ ಧಾಟಿ ಎಲ್ಲರೂ ಅವರತ್ತ ನೋಡುವಂತೆ ಮಾಡಿತ್ತು. ಇವರು ಈ ಬಾರಿಯ ಐಪಿಎಲ್‌ನಲ್ಲಿ ಕ್ರಿಸ್‌ ಗೇಲ್‌ ಅವರ 59 ಸಿಕ್ಸರ್‌ಗಳ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಕ್ರಿಸ್‌ ಗೇಲ್‌ 2013ರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡುವಾಗ 59 ಸಿಕ್ಸರ್ ಸಿಡಿಸಿದ್ದರು. ಈಗ ಈ ದಾಖಲೆ ವೈಭವ್ ಸೂರ್ಯವಂಶಿ ಹೆಸರಿನಲ್ಲಿದೆ. ಇವರು ಈ ಆವೃತ್ತಿಯಲ್ಲಿ 72 ಸಿಕ್ಸರ್ ಬಾರಿಸಿ ದಾಖಲೆ ಬರೆದಿದ್ದಾರೆ.

15-Year-Old

ಐಪಿಎಲ್‌ನಲ್ಲಿ ವೇಗವಾಗಿ 1000 ರನ್‌ಗಳಿಸಿದ ದಾಖಲೆ ಸಹ ವೈಭವ್ ಸೂರ್ಯವಂಶಿ ಹೆಸರಿನಲ್ಲಿದೆ. 19ನೇ ಆವೃತ್ತಿಯ ಐಪಿಎಲ್‌ನಲ್ಲಿ 48ರ ಸರಾಸರಿಯಲ್ಲಿ 776 ರನ್‌ ಕಲೆ ಹಾಕಿರುವ ವೈಭವ್ ಅವರಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಸಹ ಸಂದಿದೆ. ಐಪಿಎಲ್‌ನಲ್ಲಿ ಇವರು ನೀಡಿದ ಅಮೋಘ ಪ್ರದರ್ಶನದ ಫಲವಾಗಿ ಇವರಿಗೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ.

ಇಂಗ್ಲೆಂಡ್‌, ಐರ್ಲೆಂಡ್‌ ಪ್ರವಾಸಕ್ಕೆ ಭಾರತ ತಂಡ: ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಪ್ರಿನ್ಸ್ ಯಾದವ್.

Story first published: Saturday, June 6, 2026, 14:44 [IST]
Other articles published on Jun 6, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+