ನವದೆಹಲಿ, ನವೆಂಬರ್ 01: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 53ರನ್ ಗಳ ಜಯ ದಾಖಲಿಸಿದೆ. ಈ ಗೆಲುವಿನ ಮೂಲಕ ಮೂರು ಟಿ20ಐ ಪಂದ್ಯಗಳ ಸರಣಿಯಲ್ಲಿ ಭಾರತ 1-0ರ ಮುನ್ನಡೆ ಸಾಧಿಸಿದೆ.
ಸ್ಕೋರ್ ಕಾರ್ಡ್
ನ್ಯೂಜಿಲೆಂಡ್ ವಿರುದ್ಧ ಮೊಟ್ಟ ಮೊದಲ ಬಾರಿಗೆ ಟಿ20 ಪಂದ್ಯವೊಂದರಲ್ಲಿ ಭಾರತ ಗೆಲುವು ಸಾಧಿಸಿದೆ. ಈ ಪಂದ್ಯದ ನಂತರ ವೇಗಿ ಆಶೀಶ್ ಅವರು ಸುಮಾರು 20 ವರ್ಷಗಳ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ.
