ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೇಪ್ ಟೌನ್ ಟೆಸ್ಟ್: ಭಾರತ ವಿರುದ್ಧ ದಕ್ಷಿಣ ಆಫ್ರಿಕಾಗೆ ಭರ್ಜರಿ ಜಯ

1st Test. It's all over! South Africa won by 72 runs	against India

ಕೇಪ್ ಟೌನ್, ಜನವರಿ 08: ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ನೆಲ್ಸನ್ ಮಂಡೇಲಾ-ಮಹಾತ್ಮಾ ಗಾಂಧಿ ಕ್ರಿಕೆಟ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋಲು ಕಂಡಿದೆ.

ದಕ್ಷಿಣ ಆಫ್ರಿಕಾದ ನೀಡಿದ್ದ 208 ರನ್ ಗಳು ಸಲಭ ಗುರಿಯನ್ನು ಬೆನ್ನಟ್ಟಿದ್ದ ಭಾರತ ಕೇವಲ 135 ರನ್ ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ದಕ್ಷಿಣ ಆಫ್ರಿಕಾ 72ರನ್ ಗಳ ಅಮೋಘ ಜಯಗಳಿಸಿತು.

ವೇಗಿ ವರ್ನೊನ್ ಫಿಲಾಂಡರ್ ಬೌಲಿಂಗ್ ದಾಳಿಗೆ ಭಾರತ ಬ್ಯಾಟ್ಸ್ ಮನ್ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಪೆವಿಲಿಯನ್ ಪರೇಡ್ ನಡೆಸಿದರು. ಫಿಲಾಂಡರ್ ಅಂತಿಮವಾಗಿ 15.4 ಓವರ್ ಗಳಲ್ಲಿ 42 ರನ್ ನೀಡಿ 6 ವಿಕೆಟ್ ಕಬಳಿಸಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು.

ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ದಕ್ಷಿಣಾ ಆಫ್ರಿಕಾ ಮೊದಲ ಇನ್ನಿಂಗ್ಸ್ ನಲ್ಲಿ 286 ರನ್ ಗಳಿಸಿತು. ಇದಾದ ಬಳಿಕ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 209 ರನ್ ಗಳಸಲಷ್ಟೇ ಶಕ್ತವಾಯಿತು.

ಈ ಮೂಲಕ ಆಫ್ರಿಕಾ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತದ ಬೌಲಿಂಗ್ ದಾಳಿಗೆ ಕೇವಲ 130 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 2018 ರನ್ ಗಳು ಸುಲಭ ಗುರಿ ನೀಡಿತು.

ಗೆಲುವಿನ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾದ ಬಿಗಿ ಬೌಲಿಂಗ್ ದಾಳಿಗೆ ಕೇವಲ 135 ರನ್ ಗಳಿಸಲಷ್ಟೇ ಶಕ್ತವಾಯಿತು.

Story first published: Monday, January 8, 2018, 21:02 [IST]
Other articles published on Jan 8, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X