Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Asian Games : ಫೈನಲ್‌ನಲ್ಲಿ ಭಾರತ-ಅಫ್ಘಾನಿಸ್ತಾನ ಮುಖಾಮುಖಿ: ಪಂದ್ಯದ ಸಮಯ, ನೇರ ಪ್ರಸಾರ, ಆಡುವ ಬಳಗ

ಏಷ್ಯನ್ ಗೇಮ್ಸ್ 2023ರ ಪುರುಷರ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಭಾರತ ಫೈನಲ್‌ಗೆ ಪ್ರವೇಶಿಸಿದರೆ, ಬಲಿಷ್ಠ ಪಾಕಿಸ್ತಾನ ತಂಡವನ್ನು ಮಣಿಸಿದ ಅಫ್ಘಾನಿಸ್ತಾನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಒಂಬತ್ತು ವಿಕೆಟ್‌ಗಳ ಜಯ ಗಳಿಸಿದ ಭಾರತ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತು. ಪಾಕಿಸ್ತಾನ ವಿರುದ್ಧ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ ಫೈನಲ್ ಪ್ರವೇಶಿಸಿತು.

ಅಫ್ಘಾನಿಸ್ತಾನ ತಂಡ ಫೈನಲ್ ಪ್ರವೇಶಿಸುವ ಮೂಲಕ ಈಗಾಗಲೇ ಪದಕವನ್ನು ಖಚಿತಪಡಿಸಿಕೊಂಡಿದೆ. ಫೈನಲ್‌ನಲ್ಲಿ ಸೋತರೂ ಬೆಳ್ಳಿ ಪದಕ ಗೆಲ್ಲಲಿದೆ. ಭಾರತ ಫೈನಲ್‌ ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ತಂಡವಾಗಿದ್ದು ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದೆ.

2023-asian-games-cricket-final

ಫೈನಲ್ ಪಂದ್ಯ ಯಾವಾಗ?

ಶನಿವಾರ ಭಾರತೀಯ ಕಾಲಮಾನ ಬೆಳಗ್ಗೆ 11.30 ಗಂಟೆಗೆ ಭಾರತ - ಅಫ್ಘಾನಿಸ್ತಾನ ನಡುವೆ ಫೈನಲ್ ಪಂದ್ಯ ಆರಂಭವಾಗಲಿದೆ. ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.

ಭಾರತ vs ಅಫ್ಘಾನಿಸ್ತಾನ ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಸೋನಿಲಿವ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಕೂಡ ನೇರಪ್ರಸಾರ ಮಾಡಲಾಗುತ್ತಿದ್ದು ವೀಕ್ಷಿಸಬಹುದಾಗಿದೆ.

ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದ ಪಿಚ್‌ ಬೌಲರ್ ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಎರಡೂ ಸೆಮಿಫೈನಲ್ ಪಂದ್ಯಗಳಲ್ಲಿ ಕಡಿಮೆ ಮೊತ್ತ ದಾಖಲಾಗಿದೆ. ಸ್ಪಿನ್ ಬೌಲರ್ ಗಳಿಗೆ ಹೆಚ್ಚಿನ ನೆರವು ಸಿಗಲಿದ್ದು, ಬ್ಯಾಟರ್ ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಬೇಕಾಗುತ್ತದೆ. ಟಾಸ್ ಗೆಲ್ಲುವ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಉಭಯ ತಂಡಗಳ ಆಡುವ ಬಳಗ

ಭಾರತ : ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅರ್ಷದೀಪ್ ಸಿಂಗ್

ಅಫ್ಘಾನಿಸ್ತಾನ : ಸೇದಿಕುಲ್ಲಾ ಅಟಲ್, ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್), ನೂರ್ ಅಲಿ ಜದ್ರಾನ್, ಶಾಹಿದುಲ್ಲಾ ಕಮಾಲ್, ಗುಲ್ಬದಿನ್ ನೈಬ್ (ನಾಯಕ), ಶರಫುದ್ದೀನ್ ಅಶ್ರಫ್, ಅಫ್ಸರ್ ಝಜೈ, ಕರೀಂ ಜನತ್, ಖೈಸ್ ಅಹ್ಮದ್, ಫರೀದ್ ಅಹ್ಮದ್ ಮಲಿಕ್, ಜಹೀರ್ ಖಾನ್.

Story first published: Friday, October 6, 2023, 20:50 [IST]
Other articles published on Oct 6, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+