India vs Pakistan: ಪಂದ್ಯದ ಮುನ್ನದಿನ ಭಾರತದ ಡ್ರೆಸ್ಸಿಂಗ್‌ರೂಮ್‌ನಿಂದ ಹೊರಬಿದ್ದ ಪ್ರಮುಖ 3 ಸುದ್ದಿಗಳು!
ಭಾರತ ಹಾಗೂ ಪಾಕಿಸ್ತಾನ ತಂಡಗಳು ಶನಿವಾರ ಏಷ್ಯಾಕಪ್ ಟೂರ್ನಿಯಲ್ಲಿ ಮೂಖಾಮುಖಿಯಾಗಲಿದೆ. ಪಾಕಿಸ್ತಾನ ಮೊದಲ ಪಂದ್ಯವನ್ನು ನೇಪಾಳ ವಿರುದ್ಧ ಭರ್ಜರಿಯಾಗಿ ಗೆದ್ದುಕೊಂಡಿದ್ದು ಭಾರತ ತಂಡದ ವಿರುದ್ಧ ಕದನಕ್ಕೆ ಸಿದ್ಧವಾಗಿದೆ. ಇನ್ನು ಪ್ರಸ್ತುತ ಪಾಕ್ ಪಡೆ ಏಕದಿನ ಮಾದರಿಯಲ್ಲಿ ನಂಬರ್ 1 ತಂಡ ಎನಿಸಿಕೊಂಡಿರುವುದು ತಂಡದ ಆತ್ಮವಿಶ್ವಾಸವನ್ನು ಸಹಜವಾಗಿಯೇ ಹೆಚ್ಚಿಸಿಕೊಂಡಿರಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಕೂಡ ಈಗಾಗಲೇ ಶ್ರೀಲಂಕಾಗೆ ಪ್ರಯಾಣ ಬೆಳೆಸಿದ್ದಿ ಕೊನೆಯ ಹಂತದ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಹುನಿರೀಕ್ಷಿತ ಪಂದ್ಯದ ಆರಂಭಕ್ಕೆ ಇದೀಗ ಕೆಲವೇ ಗಂಟೆಗಳು ಬಾಕಿಯಿರುವಾಗಿ ತಂಡದ ವಿಚಾರವಾಗಿ ಕೆಲ ಕುತೂಹಲಕಾರಿ ಮಾಹಿತಿಗಳು ಹೊರಬಿದ್ದಿವೆ. ಭಾರತ ಹಾಗೂ ಪಾಕ್ ವಿರುದ್ಧದ ಪಂದ್ಯವನ್ನು ಎದುರಿನೋಡುತ್ತಿರುವ ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಗೂ ಇದು ಮಹತ್ವವಾಗಿದೆ.

ಟೀಮ್ ಇಂಡಿಯಾದ ಅಗ್ರ ಕ್ರಮಾಂಕದಲ್ಲಿ ಇವರೇ ಮೂವರು
ಪಾಕಿಸ್ತಾನದ ವಿರುದ್ಧದ ಏಷ್ಯಾಕಪ್ ಲೀಗ್ ಹಂತದ ಕದನದಲ್ಲಿ ಭಾರತದ ಅಗ್ರ ಕ್ರಮಾಂಕದ ಬಗ್ಗೆ ಸಾಕಷ್ಟು ಕುತೂಹಲಗಳು ಇದ್ದವು. ಇದೀಗ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದರೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿಯೇ ಮುಂದುವರಿಯಲಿದ್ದಾರೆ ಎನ್ನುವುದು ಖಚಿತವಾಗಿದೆ. ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಆಡಲಿ, ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿ ಎನ್ನುವಂತಾ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಆದರೆ ಅಗ್ರ ಕ್ರಮಾಂಕದಲ್ಲಿ ಭಾರತ ಯಾವುದೇ ಬದಲಾವನೆ ಮಾಡಿಕೊಳ್ಳದಿರಲು ನಿರ್ಧರಿಸಿದೆ.
ಇಶಾನ್ ಕಿಶನ್‌ಗೆ ಮಧ್ಯಮ ಕ್ರಮಾಂಕ ಬಹುತೇಕ ಖಚಿತ
ಕೆಎಲ್ ರಾಹುಲ್ ಮೊದಲ ಎರಡು ಪಂದ್ಯಗಳಿಗೆ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಇಶಾನ್ ಕಿಶನ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ. ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ. ಆದರೆ ಬ್ಯಾಟರ್ ಆಗಿ ಇಶಾನ್ ಎಲ್ಲಿ ಆಡುತ್ತಾರೆ ಎನ್ನುವುದು ಸದ್ಯಕ್ಕಿರುವ ಪ್ರಶ್ನೆ. ಪಾಕಿಸ್ತಾನದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಇಶಾನ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಐದನೇ ಕ್ರಮಾಂಕದಲ್ಲಿ ಯುವ ಎಡಗೈ ಆಟಗಾರ ಕಣಕ್ಕಿಳಿಯುವ ಸಾಧ್ಯತೆಯಿದೆ.
ಸಂಜು ಸ್ಯಾಮ್ಸನ್‌ಗೆ ಇಲ್ಲ ಅವಕಾಶ
ಇನ್ನು ಟೀಮ್ ಇಂಡಿಯಾ ಪ್ರಾಥಮಿಕ ಸ್ಕ್ವಾಡ್‌ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ವಿಫಲವಾಗಿರುವ ಸಂಜು ಸ್ಯಾಮ್ಸನ್ ಆರಂಭಿಕ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯವಾಗಿದ್ದರೂ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆಯಿಲ್ಲ. ಈಗಾಗಲೇ ಹೇಳಿದಂತೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಹೀಗಾಗಿ ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿಯೇ ಉಳಿದುಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications