ಟಿ ಟ್ವೆಂಟಿ ವಿಶ್ವಕಪ್ ಆಡುವ ಅವಕಾಶವನ್ನು ಕಳೆದುಕೊಳ್ಳಬಹುದಾದ 3 ಭಾರತೀಯ ಆಟಗಾರರು

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ ಅದು ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರ ಶುಕ್ರವಾರದಂದು ಆರಂಭವಾಗಲಿದ್ದು ಟೀಮ್ ಇಂಡಿಯಾ ಸರಣಿಯನ್ನು ಕೈವಶ ಪಡಿಸಿಕೊಳ್ಳುತ್ತಾ ಅಥವಾ ಇಂಗ್ಲೆಂಡ್ ತಂಡ ಸರಣಿಯನ್ನು ಡ್ರಾ ಮಾಡಿಕೊಳ್ಳುತ್ತಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ದೊಡ್ಡದಾಗಿ ನಡೆಯುತ್ತಿವೆ. ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ.

ಓವಲ್ ಟೆಸ್ಟ್ ಪಂದ್ಯದ ವೇಳೆ ಕೊಹ್ಲಿಗೆ ಬೂಮ್ರಾ ಕೊಟ್ಟ ಈ ಉಪಾಯದಿಂದ ಬಿತ್ತು 2 ಪ್ರಮುಖ ವಿಕೆಟ್!ಓವಲ್ ಟೆಸ್ಟ್ ಪಂದ್ಯದ ವೇಳೆ ಕೊಹ್ಲಿಗೆ ಬೂಮ್ರಾ ಕೊಟ್ಟ ಈ ಉಪಾಯದಿಂದ ಬಿತ್ತು 2 ಪ್ರಮುಖ ವಿಕೆಟ್!

ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ನಡುವೆಯೇ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿ ಮಾಡುವುದರ ಮೂಲಕ ಸದ್ದು ಮಾಡುತ್ತಿದೆ. ಭಾರತದಲ್ಲಿ ನಡೆಯಬೇಕಿದ್ದ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಕೊರೋನಾವೈರಸ್ ಕಾರಣದಿಂದಾಗಿ ಯುಎಇಗೆ ಸ್ಥಳಾಂತರಿಸಲಾಗಿದ್ದು ಅಕ್ಟೋಬರ್ 17ರಂದು ಟೂರ್ನಿ ಆರಂಭವಾಗಲಿದೆ ಹಾಗೂ ನವೆಂಬರ್ 14ರಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಅಂತ್ಯಗೊಳ್ಳಲಿದೆ.

'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ

ಯುಎಇಯಲ್ಲಿ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನೂ 40ಕ್ಕಿಂತ ಹೆಚ್ಚು ದಿನಗಳು ಬಾಕಿ ಇರುವಾಗಲೇ ಟೂರ್ನಿಯ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಈಗಾಗಲೇ ಕೆಲ ದೇಶಗಳು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಮ್ಮ ತಂಡಗಳನ್ನು ಪ್ರಕಟಿಸಿವೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವ ಸಾಧ್ಯತೆಗಳಿರುವ ತಂಡಗಳಲ್ಲೊಂದಾಗಿರುವ ಟೀಮ್ ಇಂಡಿಯಾ ಮಾತ್ರ ಇದುವರೆಗೂ ತನ್ನ ತಂಡವನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಕ್ರೀಡಾ ಪಂಡಿತರು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಬಹುದು ಎಂದು ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಇನ್ನು ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳದೆ ಈ ಕೆಳಕಂಡ ಮೂವರು ಆಟಗಾರರು ಟೂರ್ನಿಯಿಂದ ಹೊರ ಬೀಳಬಹುದು ಎನ್ನಲಾಗುತ್ತಿದೆ..

1. ಕುಲದೀಪ್ ಯಾದವ್

1. ಕುಲದೀಪ್ ಯಾದವ್

ಕಳೆದ ಕೆಲ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿರುವ ಕುಲದೀಪ್ ಯಾದವ್ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗುವ ಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿವೆ. ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದ ಕುಲದೀಪ್ ಯಾದವ್ ಏಕದಿನ ಪಂದ್ಯವೊಂದರಲ್ಲಿ 2 ವಿಕೆಟ್ ಪಡೆದರು ಹಾಗೂ ಇನ್ನುಳಿದ ಪಂದ್ಯಗಳಲ್ಲಿಯೂ ಸಾಧಾರಣ ಮಟ್ಟದಲ್ಲಿ ವಿಕೆಟ್ ಪಡೆದ ಕುಲದೀಪ್ ಯಾದವ್ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತನ್ನನ್ನು ಆಯ್ಕೆಗಾರರು ಆಯ್ಕೆ ಮಾಡುವಂತಹ ಉತ್ತಮ ಪ್ರದರ್ಶನವನ್ನೇನೂ ನೀಡಲಿಲ್ಲ. ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಕುಲದೀಪ್ ಯಾದವ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

2. ಮನೀಷ್ ಪಾಂಡೆ

2. ಮನೀಷ್ ಪಾಂಡೆ

ತನ್ನನ್ನು ತಾನು ಸಾಬೀತುಪಡಿಸಿಕೊಳ್ಳಲು ಸಾಲು ಸಾಲು ಅವಕಾಶಗಳು ಸಿಕ್ಕರೂ ಸಹ ಸದುಪಯೋಗಪಡಿಸಿಕೊಳ್ಳದ ಕನ್ನಡಿಗ ಮನೀಷ್ ಪಾಂಡೆ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತನ್ನನ್ನು ಆಯ್ಕೆ ಮಾಡುವಂತೆ ಆಯ್ಕೆಗಾರರನ್ನು ತನ್ನ ಆಟದ ಮೂಲಕ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ. ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡ ಮನೀಷ್ ಪಾಂಡೆ ಆಡಿದ 3 ಏಕದಿನ ಪಂದ್ಯಗಳಲ್ಲಿ 26,37 ಮತ್ತು 11 ರನ್‌ಗಳನ್ನು ಕಲೆ ಹಾಕುವುದರ ಮೂಲಕ ನೀರಸ ಪ್ರದರ್ಶನವನ್ನು ನೀಡಿದರು. ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಮನೀಷ್ ಪಾಂಡೆಗೆ ಅವಕಾಶ ನೀಡುವುದು ದೂರದ ಮಾತು.

ರೋಹಿತ್ ಶರ್ಮಾ ಮ್ಯಾನ್ ಆಫ್ ದಿ ಮ್ಯಾಚ್ ನಿರಾಕರಿಸಲು ಕಾರಣ ಈ ಆಟಗಾರ | Oneindia Kannada
3. ಶ್ರೇಯಸ್ ಐಯ್ಯರ್

3. ಶ್ರೇಯಸ್ ಐಯ್ಯರ್

ಕಳೆದ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ 67 ಮತ್ತು 37 ರನ್ ಬಾರಿಸಿ ಉತ್ತಮ ಪ್ರದರ್ಶನವನ್ನು ನೀಡಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ಪಡೆದುಕೊಳ್ಳುವುದು ಖಚಿತ ಎಂಬ ಭರವಸೆಯನ್ನು ಮೂಡಿಸಿದ್ದ ಶ್ರೇಯಸ್ ಐಯ್ಯರ್ ಸದ್ಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶ ಪಡೆದುಕೊಳ್ಳುವುದು ಅನುಮಾನ ಮೂಡಿಸಿದೆ. ಹೌದು ಐಪಿಎಲ್ ಆರಂಭಕ್ಕೂ ಮುನ್ನವೇ ಗಾಯಕ್ಕೊಳಗಾಗಿರುವ ಶ್ರೇಯಸ್ ಐಯ್ಯರ್ ಇನ್ನೂ ಸಹ ಸಂಪೂರ್ಣವಾದ ಚೇತರಿಕೆಯನ್ನು ಕಂಡಿಲ್ಲ. ಹೀಗಾಗಿ ಮುಂದುವರಿಯಲಿರುವ ಐಪಿಎಲ್ ಟೂರ್ನಿಯ ಪೂರ್ತಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ರಿಷಭ್ ಪಂತ್ ಅವರೇ ನಿರ್ವಹಿಸಲಿದ್ದು, ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಸಹ ಶ್ರೇಯಸ್ ಐಯ್ಯರ್ ಅಲಭ್ಯರಾಗುವ ಸಾಧ್ಯತೆಗಳು ಹೆಚ್ಚಿವೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 18 - October 26 2021, 03:30 PM
ದಕ್ಷಿಣ ಆಫ್ರಿಕಾ
ವೆಸ್ಟ್ ಇಂಡೀಸ್
Predict Now

For Quick Alerts
ALLOW NOTIFICATIONS
For Daily Alerts
Story first published: Wednesday, September 8, 2021, 13:17 [IST]
Other articles published on Sep 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X