ಏಷ್ಯಾಕಪ್‌ಗೆ ಆಯ್ಕೆಯಾಗಿರುವ ಭಾರತದ ಈ ಮೂವರಿಗೆ ಸಿಗುವುದಿಲ್ಲ ಟಿ20 ವಿಶ್ವಕಪ್ ಟಿಕೆಟ್!

ಇದೇ ತಿಂಗಳ 27ರಿಂದ ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಆರಂಭವಾಗಲಿದೆ. ಶ್ರೀಲಂಕಾದಿಂದ ಯುಎಇಗೆ ಸ್ಥಳಾಂತರಗೊಂಡಿರುವ ಈ ಬಾರಿಯ ಏಷ್ಯಾಕಪ್ ಹದಿನೈದನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯಾಗಿದೆ. ಈಗಾಗಲೇ ಟೂರ್ನಿಯಲ್ಲಿ ಭಾಗವಹಿಸಲಿರುವ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ತಮ್ಮ ತಂಡಗಳನ್ನು ಪ್ರಕಟಿಸಿದ್ದು, ಕಣಕ್ಕಿಳಿದು ಸೆಣಸಾಡಲು ಸಿದ್ಧತೆ ನಡೆಸಿಕೊಳ್ಳುತ್ತಿವೆ.
ಕಳೆದ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಟ್ರೋಫಿ ಗೆದ್ದು ಹಾಲಿ ಚಾಂಪಿಯನ್ ಎನಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿಯೂ ಸಹ ಗೆದ್ದು ಚಾಂಪಿಯನ್ ಪಟ್ಟವನ್ನು ಉಳಿಸಿಕೊಂಡು ಸತತ ಮೂರನೇ ಬಾರಿಗೆ ಏಷ್ಯಾಕಪ್ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡುವತ್ತ ಕಣ್ಣಿಟ್ಟಿದೆ. ಬಿಸಿಸಿಐ ಹದಿನೈದು ಆಟಗಾರರ ಟೀಮ್ ಇಂಡಿಯಾವನ್ನು ಏಷ್ಯಾಕಪ್‌ಗಾಗಿ ಪ್ರಕಟಿಸಿದ್ದು ರೋಹಿತ್ ಶರ್ಮಾ ನಾಯಕತ್ವದಡಿಯಲ್ಲಿ ತಂಡ ತನ್ನ ಮೊದಲ ಆಗಸ್ಟ್ 28ರಂದು ತನ್ನ ಚೊಚ್ಚಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದೆ.
ಇನ್ನು ಈ ತಂಡದಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಿಂಚಿ ಕಮ್‌ಬ್ಯಾಕ್ ಮಾಡಿದ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್ ಹಾಗೂ ದಿನೇಶ್ ಕಾರ್ತಿಕ್ ಅವರಿಗೂ ಸಹ ಸ್ಥಾನ ದೊರಕಿದೆ. ಇನ್ನು ಇತ್ತಿಚಿನ ದಿನಗಳಲ್ಲಿ ಹೆಚ್ಚು ಟಿ ಟ್ವೆಂಟಿ ಪಂದ್ಯಗಳನ್ನಾಡದ ರವಿಚಂದ್ರನ್ ಅಶ್ವಿನ್ ಹಾಗೂ ಟಿ ಟ್ವೆಂಟಿ ಪಂದ್ಯಗಳಲ್ಲಿ ಹೆಚ್ಚು ರನ್ ನೀಡಿ ಕಳಪೆ ಬೌಲಿಂಗ್ ಪ್ರದರ್ಶನ ನೀಡಿರುವ ಅವೇಶ್ ಖಾನ್ ಅವರಿಗೂ ಸಹ ಈ ಏಷ್ಯಾಕಪ್ ಟೂರ್ನಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾದಲ್ಲಿ ಸ್ಥಾನ ದೊರಕಿರುವುದು ಆಶ್ಚರ್ಯ ಹಾಗೂ ಟೀಕೆಗೆ ಎಡೆ ಮಾಡಿಕೊಟ್ಟಿತ್ತು. ಹೀಗೆ ಈ ಬಾರಿಯ ಏಷ್ಯಾಕಪ್‌ಗೆ ಪ್ರಕಟವಾಗಿರುವ ಟೀಮ್ ಇಂಡಿಯಾದ ಬಹುತೇಕ ಆಟಗಾರರಿಗೆ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿಯೂ ಸಹ ಸ್ಥಾನ ದೊರೆಯುವುದು ಖಚಿತ ಎನ್ನಲಾಗುತ್ತಿದ್ದು, ಈ ಕೆಳಕಂಡ ಮೂವರು ಆಟಗಾರರಿಗೆ ಮಾತ್ರ ಅವಕಾಶ ಲಭಿಸುವುದಿಲ್ಲ ಎನ್ನಬಹುದು.

1. ಅವೇಶ್ ಖಾನ್
ಈ ವರ್ಷದ ಆರಂಭದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅಂತರರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಅವೇಶ್ ಖಾನ್ ನಂತರ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೊರ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದು 18 ವಿಕೆಟ್ ಪಡೆದ ಅವೇಶ್ ಖಾನ್ ನಂತರ ಜೂನ್ ತಿಂಗಳಿನಲ್ಲಿ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಆಡುವ ಅವಕಾಶ ಪಡೆದಿದ್ದರು. ಇನ್ನು ಒಟ್ಟಾರೆ 13 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಪಡೆದಿರುವ ಅವೇಶ್ ಖಾನ್ ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗಿದ್ದು, ಟೂರ್ನಿಗೆ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವೇಶ್ ಖಾನ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎನ್ನಬಹುದು. ಹೀಗೆ ಸಾಮಾನ್ಯ ಪ್ರದರ್ಶನ ನೀಡಿ ಪ್ರಮುಖ ವೇಗಿಗಳ ಅಲಭ್ಯತೆಯ ಕಾರಣದಿಂದಾಗಿ ಸ್ಥಾನ ಪಡೆದುಕೊಂಡಿರುವ ಅವೇಶ್ ಖಾನ್ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ಪಡೆದುಕೊಳ್ಳುವುದು ಬಹುತೇಕ ಅನುಮಾನ.

2. ರವಿ ಬಿಷ್ಣೋಯಿ
ಈ ವರ್ಷ ತನ್ನ ಉತ್ತಮ ಪ್ರದರ್ಶನದಿಂದ ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ರವಿ ಬಿಷ್ಣೋಯಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಇತ್ತೀಚೆಗಷ್ಟೇ ಮುಕ್ತಾಯವಾದ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯ ಮೂರು ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದರು. ಈ ಕೆರೆಬಿಯನ್ನರ ವಿರುದ್ಧದ ಸರಣಿಯಲ್ಲಿ ಎಂಟು ವಿಕೆಟ್‌ಗಳನ್ನು ಕಬಳಿಸಿದ್ದ ಬಿಷ್ಣೊಯಿ ಪಂದ್ಯವೊಂದರಲ್ಲಿ 16 ರನ್ ನೀಡಿ 4 ವಿಕೆಟ್‌ಗಳನ್ನು ಪಡೆದಿದ್ದರು. ಹೀಗೆ ತನ್ನ ಉತ್ತಮ ಪ್ರದರ್ಶನದಿಂದ ಏಷ್ಯಾಕಪ್‌ಗೆ ಆಯ್ಕೆಯಾಗಿರುವ ರವಿ ಬಿಷ್ಣೋಯಿ ಮುಂಬರುವ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಕುಲ್‌ದೀಪ್ ಯಾದವ್‌ಗೆ ಅವಕಾಶ ಸಿಕ್ಕರೆ ಸ್ಥಾನ ಸಿಗದೇ ಹೊರಬೀಳುವ ಸಾಧ್ಯತೆಗಳಿವೆ.

3. ಶ್ರೇಯಸ್ ಐಯ್ಯರ್
ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನಗಳನ್ನು ನೀಡಿರುವ ಶ್ರೇಯಸ್ ಐಯ್ಯರ್ ಟಿ ಟ್ವೆಂಟಿ ಮಾದರಿಯಲ್ಲಿಯೂ ಸಹ ಅದೇ ರೀತಿಯ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿಲ್ಲ ಎನ್ನಬಹುದು. ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿಗೂ ಸಹ ಮೀಸಲು ಆಟಗಾರನಾಗಿ ಮಾತ್ರ ಆಯ್ಕೆಯಾಗಿರುವ ಶ್ರೇಯಸ್ ಐಯ್ಯರ್ ಮುಂದಿನ ಟಿ ಟ್ವೆಂಟಿ ವಿಶ್ವಕಪ್‌ಗಾಗಿ ಹೆಚ್ಚು ಆಟಗಾರರ ಆಯ್ಕೆಗಳು ಇರುವ ಕಾರಣ ಸ್ಥಾನ ಗಿಟ್ಟಿಸಿಕೊಳ್ಳುವುದು ಅನುಮಾನ ಎನ್ನಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications