ICC ಪುರುಷರ ಟೆಸ್ಟ್ ತಂಡದಲ್ಲಿ 3 ಭಾರತೀಯರು: ಮಹಿಳಾ ತಂಡದಲ್ಲಿ ಇಬ್ಬರಿಗೆ ಸ್ಥಾನ
ಐಸಿಸಿ ಶುಕ್ರವಾರ ತನ್ನ ವರ್ಷದ ತಂಡವನ್ನು ಬಿಡುಗಡೆ ಮಾಡಿದೆ. ಎಲ್ಲ ಫಾರ್ಮೆಟ್‌ನಲ್ಲೂ ತಂಡವನ್ನು ಪ್ರಕಟಿಸುವಂತೆ ಟೆಸ್ಟ್ ಫಾರ್ಮೆಟ್‌ಗೂ ವರ್ಷದ ತಂಡವನ್ನು ಐಸಿಸಿ ಘೋಷಣೆ ಮಾಡಿದೆ. ಪ್ರಕಟಿತ ತಂಡದಲ್ಲಿ ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಥಾನ ಪಡೆದಿಲ್ಲ. ಆದರೆ ಟೀಮ್ ಇಂಡಿಯಾದ ಮೂವರು ಆಟಗಾರರು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ತಂಡದಲ್ಲಿ ಇಂಗ್ಲೆಂಡ್ ತಂಡದ ನಾಲ್ವರು ಆಟಗಾರರು ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದಿರುವ ಆಸ್ಟ್ರೇಲಿಯಾ ತಂಡದಿಂದ ಇಬ್ಬರು, ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ತಂಡದ ತಲಾ ಒಬ್ಬ ಆಟಗಾರರಿಗೆ ಸ್ಥಾನ ನೀಡಲಾಗಿದೆ.

ಐಸಿಸಿ ಪ್ರಕಟಿತ ತಂಡವನ್ನು ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮಿನ್ಸ್ ಮುಂದಾಳತ್ವದಲ್ಲಿ ಆಸ್ಟ್ರೇಲಿಯಾ ಎರಡನೇ ಬಾರಿಗೆ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಕೊಂಡೊಯ್ದ ಹೆಗ್ಗಳಿಕೆ ಹೊಂದಿದ್ದಾರೆ. ಇವರಿಗೆ ನಾಯಕತ್ವ ನೀಡಲಾಗಿದೆ. ಇವರು ಕಳೆದ ವರ್ಷ 37 ವಿಕೆಟ್ ಕಬಳಿಸಿದ್ದಾರೆ.
ಭಾರತದ ಮೂವರಿಗೆ ಸ್ಥಾನ
2024ರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾ ಪರ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುವ ಆಟಗಾರ. ಇವರು ಕಳೆದ ವರ್ಷ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 700ಕ್ಕೂ ಹೆಚ್ಚು ರನ್ ಕಲೆ ಹಾಕಿ ದಾಖಲೆ ಬರೆದಿದ್ದರು. ಹೀಗಾಗಿ ಇವರಿಗೆ ಆರಂಭಿಕ ಆಟಗಾರ ಎಂದು ಐಸಿಸಿ ಆಯ್ಕೆ ಮಾಡಿದೆ.
ಆಲ್‌ರೌಂಡರ್ ಕೋಟಾದಲ್ಲಿ ಜಡ್ಡುಗೆ ಸ್ಥಾನ
ಟೀಮ್ ಇಂಡಿಯಾದ ಭರವಸೆಯ ಆಲ್‌ರೌಂಡರ್ ರವೀಂದ್ರ ಜಡೇಜಾ ಆಲ್‌ರೌಂಡರ್ ಕೋಟಾದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. 2024ರಲ್ಲಿ ಇವರು 527 ರನ್ ಸಿಡಿಸಿ 48 ವಿಕೆಟ್ ಪಡೆಯುವಲ್ಲಿ ಸಫಲರಾಗಿದ್ದಾರೆ.

ಬುಮ್ರಾಗೂ ಸ್ಥಾನ
ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರನ್ನು ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರು ಕಳೆದ ವರ್ಷ ಭರ್ಜರಿ ಫಾರ್ಮ್‌ನಲ್ಲಿದ್ದರು. ಇವರು 71 ವಿಕೆಟ್ ಕಬಳಿಸಿ ಅಬ್ಬರಿಸಿದ್ದರು. ಅಲ್ಲದೆ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಇವರು 32 ವಿಕೆಟ್ ಕಬಳಿಸಿ ಸಾಧನೆ ಮಾಡಿದ್ದರು.
ಐಸಿಸಿ ಪುರುಷರ ಟೆಸ್ಟ್ ತಂಡ : ಯಶಸ್ವಿ ಜೈಸ್ವಾಲ್, ಬೆನ್ ಡಕೆಟ್, ಕೇನ್ ವಿಲಿಯಮ್ಸನ್, ಜೋ ರೂಟ್, ಹ್ಯಾರಿ ಬ್ರೂಕ್, ಕಾಮಿಂಡು ಮೆಂಡಿಸ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಪ್ಯಾಟ್ ಕಮ್ಮಿನ್ಸ್ (ನಾಯಕ), ಮ್ಯಾಟ್ ಹೆನ್ರಿ, ಜಸ್ಪ್ರೀತ್ ಬುಮ್ರಾ.

ಮಹಿಳಾ ತಂಡದಲ್ಲಿ ಇಬ್ಬರು ಭಾರತೀಯರು
ಐಸಿಸಿ ಮಹಿಳಾ ಏಕದಿನ ತಂಡವನ್ನು ಪ್ರಕಟಿಸಲಾಗಿದ್ದು, ಸ್ಮೃತಿ ಮಂಧಾನ ಹಾಗೂ ಆಲ್‌ರೌಂಡರ್ ದೀಪ್ತಿ ಶರ್ಮಾ ಸ್ಥಾನ ಪಡೆದಿದ್ದಾರೆ. ಇವರಿಬ್ಬರು ಕಳೆದ ವರ್ಷ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು.
ಐಸಿಸಿ ಏಕದಿನ ಮಹಿಳಾ ತಂಡ: ಸ್ಮೃತಿ ಮಂಧಾನ, ಲಾರಾ ವೋಲ್ವಾರ್ಡ್, ಚಾಮರಿ ಅಥಪತ್ತು, ಹೇಲಿ ಮ್ಯಾಥ್ಯೂಸ್, ಮರಿಜಾನ್ನೆ ಕಪ್, ಆಶ್ಲೀ ಗಾರ್ಡ್ನೆ, ಅನ್ನಾಬೆಲ್ ಸದರ್ಲ್ಯಾಂಡ್, ಆಮಿ ಜೋನ್ಸ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಕೇಟ್ ಕ್ರಾಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications