ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

2011ರ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿದ್ದ ಈ ಮೂವರು ಇನ್ನೂ ಸಹ ನಿವೃತ್ತಿ ತೆಗೆದುಕೊಂಡಿಲ್ಲ!

3 players who were part of the Team India squad in 2011 ODI World Cup are not yet retired

2011ರಲ್ಲಿ ಭಾರತದಲ್ಲಿ ನಡೆದಿದ್ದ ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ಬಲಿಷ್ಠ ಶ್ರೀಲಂಕಾ ತಂಡವನ್ನು ಸೋಲಿಸುವುದರ ಮೂಲಕ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತ್ತು. 28 ವರ್ಷಗಳ ಬಳಿಕ ಟೀಮ್ ಇಂಡಿಯಾ ಈ ಸಾಧನೆಯನ್ನು ಮಾಡಿತ್ತು.

'ಟೀಮ್ ಇಂಡಿಯಾಗೆ ಈ 2 ಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ'; ಪಣತೊಟ್ಟ ಕಳಪೆ ಫಾರ್ಮ್‌ನಲ್ಲಿರುವ ಕೊಹ್ಲಿ!'ಟೀಮ್ ಇಂಡಿಯಾಗೆ ಈ 2 ಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ'; ಪಣತೊಟ್ಟ ಕಳಪೆ ಫಾರ್ಮ್‌ನಲ್ಲಿರುವ ಕೊಹ್ಲಿ!

2007ರಲ್ಲಿ ನಡೆದಿದ್ದ ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿ ಚಾಂಪಿಯನ್ ಆಗಿ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಎಂಎಸ್ ಧೋನಿ 2011ರಲ್ಲಿ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಪ್ರತಿನಿಧಿಸಿದ್ದರು. ಹೀಗೆ ಎಂಎಸ್ ಧೋನಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದ ಚೊಚ್ಚಲ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಅತಿ ಹೆಚ್ಚು ಬಾರಿ 90+ ರನ್ ಕಲೆಹಾಕಿ ಶತಕ ಕೈತಪ್ಪಿಸಿಕೊಂಡಿರುವ ಭಾರತೀಯ ಕ್ರಿಕೆಟಿಗರ ಪಟ್ಟಿಅತಿ ಹೆಚ್ಚು ಬಾರಿ 90+ ರನ್ ಕಲೆಹಾಕಿ ಶತಕ ಕೈತಪ್ಪಿಸಿಕೊಂಡಿರುವ ಭಾರತೀಯ ಕ್ರಿಕೆಟಿಗರ ಪಟ್ಟಿ

ಏಪ್ರಿಲ್ 2ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಕಲೆಹಾಕಿ ಟೀಮ್ ಇಂಡಿಯಾಗೆ ಗೆಲ್ಲಲು 275 ರನ್‌ಗಳ ಗುರಿಯನ್ನು ನೀಡಿತ್ತು. ಟೀಮ್ ಇಂಡಿಯಾ ಪರ ಗೌತಮ್ ಗಂಭೀರ್ 97 ಮತ್ತು ನಾಯಕ ಎಂಎಸ್ ಧೋನಿ ಅಜೇಯ 91 ರನ್ ಕಲೆಹಾಕಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಪರಿಣಾಮ ತಂಡ 48.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 277 ರನ್ ಕಲೆಹಾಕಿ 6 ವಿಕೆಟ್‍ಗಳ ಜಯವನ್ನು ಸಾಧಿಸಿತ್ತು. ಹೀಗೆ ಭಾರತ ಇತಿಹಾಸ ಬರೆದಿದ್ದ 2011ರ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿದ್ದ ಟೀಮ್ ಇಂಡಿಯಾದ 15 ಆಟಗಾರರ ಪೈಕಿ ಈಗಾಗಲೇ 12 ಆಟಗಾರರು ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಂಡಿದ್ದು, ಮೂವರು ಆಟಗಾರರು ಮಾತ್ರ ಇನ್ನೂ ಸಹ ನಿವೃತ್ತಿ ಘೋಷಿಸಿಲ್ಲ. ಆ ಆಟಗಾರರ ಪಟ್ಟಿ ಕೆಳಕಂಡಂತಿದೆ.

1. ವಿರಾಟ್ ಕೊಹ್ಲಿ

1. ವಿರಾಟ್ ಕೊಹ್ಲಿ

2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕೂಡ ಇದ್ದರು. ಶ್ರೀಲಂಕಾ ವಿರುದ್ಧ ನಡೆದಿದ್ದ ಫೈನಲ್ ಪಂದ್ಯದಲ್ಲಿಯೂ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 35 ರನ್ ಕಲೆಹಾಕಿ ಅತ್ಯಮೂಲ್ಯ ಇನ್ನಿಂಗ್ಸ್ ಆಡಿದ್ದರು. ಹೀಗೆ ಅಂದಿನ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಇಂದಿಗೂ ಸಹ ಸಕ್ರಿಯ ಆಟಗಾರನಾಗಿ ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಆಡುತ್ತಿದ್ದಾರೆ.

2. ರವಿಚಂದ್ರನ್ ಅಶ್ವಿನ್

2. ರವಿಚಂದ್ರನ್ ಅಶ್ವಿನ್

2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಭಾರತ ತಂಡದ ಭಾಗವಾಗಿದ್ದರು. ಟೂರ್ನಿಯಲ್ಲಿ ಒಟ್ಟು 2 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ರವಿಚಂದ್ರನ್ ಅಶ್ವಿನ್ ಎರಡೂ ಪಂದ್ಯಗಳಲ್ಲಿಯೂ ತಲಾ 2 ವಿಕೆಟ್ ಪಡೆದಿದ್ದರು. ಅದರಲ್ಲಿಯೂ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರಿಕಿ ಪಾಂಟಿಂಗ್ ಮತ್ತು ಶೇನ್ ವ್ಯಾಟ್ಸನ್ ರೀತಿಯ ಬಲಿಷ್ಠ ಆಟಗಾರರ ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್ ಇಂದಿಗೂ ಸಹ ನಿವೃತ್ತಿ ಘೋಷಿಸದೇ ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಸಕ್ರಿಯ ಆಟಗಾರನಾಗಿ ಉಳಿದುಕೊಂಡಿದ್ದಾರೆ.

3. ಪಿಯೂಷ್ ಚಾವ್ಲಾ

3. ಪಿಯೂಷ್ ಚಾವ್ಲಾ

ಪಿಯೂಷ್ ಚಾವ್ಲಾ 2007ರ ಟಿ ಟ್ವೆಂಟಿ ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್‌ಗಳಲ್ಲಿ ಕಣಕ್ಕಿಳಿದಿದ್ದ ಭಾರತ ತಂಡದ ಭಾಗವಾಗಿದ್ದರು. 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿ 4 ವಿಕೆಟ್ ಪಡೆದಿದ್ದ ಪಿಯೂಷ್ ಚಾವ್ಲಾ ನಂತರದ ದಿನಗಳಲ್ಲಿ ಹೆಚ್ಚು ಅಂತರರಾಷ್ಟ್ರೀಯ ಕ್ರಿಕೆಟ್ ಆಡುವ ಅವಕಾಶ ಪಡೆದುಕೊಂಡಿಲ್ಲ. ಸದ್ಯ ಫ್ರಾಂಚೈಸಿ ಕ್ರಿಕೆಟ್‍ನಲ್ಲಿ ಮಾತ್ರ ಅವಕಾಶ ಗಿಟ್ಟಿಸಿಕೊಳ್ಳುತ್ತಿರುವ ಪಿಯೂಷ್ ಚಾವ್ಲಾ ಇನ್ನೂ ಸಹ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿಲ್ಲ.

ಮೈದಾನದಲ್ಲೇ ಅಯ್ಯರ್ ಮತ್ತು ಶಿಖರ್ ಧವನ್ ಮಸ್ತಿ ಹೇಗಿತ್ತು ನೋಡಿ | *Cricket | OneIndia Kannada
2011ರ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿದ್ದ ಭಾರತ ತಂಡ

2011ರ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿದ್ದ ಭಾರತ ತಂಡ

ಎಂಎಸ್ ಧೋನಿ ( ನಾಯಕ ), ವಿರೇಂದ್ರ ಸೆಹ್ವಾಗ್ ( ಉಪನಾಯಕ ), ರವಿಚಂದ್ರನ್ ಅಶ್ವಿನ್, ಪಿಯೂಷ್ ಚಾವ್ಲಾ, ಗೌತಮ್ ಗಂಭೀರ್, ಹರ್ಭಜನ್ ಸಿಂಗ್, ಜಹೀರ್ ಖಾನ್, ವಿರಾಟ್ ಕೊಹ್ಲಿ, ಆಶಿಶ್ ನೆಹ್ರಾ, ಮುನಾಫ್ ಪಟೇಲ್, ಸುರೇಶ್ ರೈನಾ, ಯೂಸುಫ್ ಪಠಾಣ್, ಶ್ರೀಶಾಂತ್,

Story first published: Sunday, July 24, 2022, 21:39 [IST]
Other articles published on Jul 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X