ರೋಹಿತ್ ಶರ್ಮಾ ನಾಯಕತ್ವದಲ್ಲೇ ODI ಮಾದರಿಗೆ ಪದಾರ್ಪಣೆ ಮಾಡಿದ್ದಾರೆ ಈ 4 ಖ್ಯಾತ ಕ್ರಿಕೆಟಿಗರು

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಪ್ರವಾಸಕ್ಕೆ ಸಜ್ಜಾಗಿದೆ. ಮೊದಲಿಗೆ ಟೆಸ್ಟ್ ಸರಣಿ ನಡೆಯಲಿದ್ದು ನಂತರ ಏಕದಿನ ಸರಣಿ ಆಯೋಜನೆಯಾಗಲಿದೆ. ಈ ದಕ್ಷಿಣ ಆಫ್ರಿಕಾ ಸರಣಿಯ ಮೂಲಕ ಭಾರತೀಯ ಸೀಮಿತ ಓವರ್‌ಗಳ ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ರೋಹಿತ್ ಶರ್ಮಾ ಕರ್ತವ್ಯವನ್ನು ಆರಂಭಿಸಲಿದ್ದಾರೆ. ಇತ್ತೀಚೆಗಷ್ಟೇ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಂಡ ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರೋಹಿತ್ ಶರ್ಮಾ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ತಿಳಿಸಿತ್ತು.
ಏಕದಿನ ತಂಡದ ನಾಯಕನಾಗಿ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಆದರೆ ರೋಹಿತ್ ಶರ್ಮಾ ಸೀಮಿತ ಓವರ್‌ಗಳ ನಾಯಕನಾಗಲು ಅತ್ಯಂತ ಅರ್ಃವಾದ ಆಟಗಾರ ಎಂಬುದು ಬಹುತೇಕ ಅಭಿಮಾನಿಗಳು ಹಾಗೂ ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿದೆ. ರೋಹಿತ್ ಶರ್ಮಾ ಅವರಲ್ಲಿನ ನಾಯಕತ್ವದ ಗುಣ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಶರ್ಮಾ ಮಾಡಿದ ಸಾಧನೆಗಳು ಕೂಡ ಅದಕ್ಕೆ ಕಾರಣವಾಗಿದೆ.
ಆದರೆ ರೋಹಿತ್ ಶರ್ಮಾ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪೂರ್ಣ ಪ್ರಮಾಣದ ನಾಯಕನಾಗುವ ಮುನ್ನ ಉಪನಾಯಕನಾಗಿ ಜವಾಬ್ಧಾರಿ ವಹಸಿಕೊಂಡಿದ್ದರು. ಈ ಅವಧಿಯಲ್ಲಿ ಸಾಕಷ್ಟು ಸಂದರ್ಭಗಳಲ್ಲಿ ಭಾರತೀಯ ತಂಡವನ್ನು ಮುನ್ನಡೆಸುವ ಹೊಣೆಯನ್ನು ಕೂಡ ಹೊತ್ತಿದ್ದರು. ಹೀಗೆ ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದಾಗ ಭಾರತೀಯ ಕ್ರಿಕೆಟ್ ತಂಡವನ್ನು ಪ್ರವೇಶಿಸಿದ ನಾಲ್ಕು ಆಟಗಾರರು ಈಗ ಭಾರತೀಯ ಕ್ರಿಕೆಟ್ ತಂಡದ ಭರವಸೆಯ ಆಟಗಾರರಾಗಿ ಮೂಡಿಬಂದಿದ್ದಾರೆ. ಆ ನಾಲ್ಕು ಆಟಗಾರರು ಯಾರು? ಮುಂದೆ ಓದಿ..

ಶ್ರೇಯಸ್ ಐಯ್ಯರ್, 2017
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಐಯ್ಯರ್ 2017ರಲ್ಲಿ ಏಕದಿನ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿಯೇ ಪದಾರ್ಪಣೆ ಮಾಡಿದ್ದರು. ನಾಲ್ಕು ವರ್ಷದ ಹಿಂದೆ ಡಿಸೆಂಬರ್ 10 ರಂದು ನಡೆದಿದ್ದ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕದಿನ ತಂಡದ ನಾಯಕನಾಗಿ ಭಾರತೀಯ ತಂಡವನ್ನು ಮೊದಲ ಬಾರಿಗೆ ಮುನ್ನಡೆಸಿದ್ದರು. ಶ್ರೀಲಂಕಾ ವಿರುದ್ಧ ನಡೆದಿದ್ದ ಈ ಪಂದ್ಯವನ್ನು ಭಾರತ 7 ವಿಕೆಟ್‌ಗಳ ಅಂತರದಿಮದ ಕಳೆದುಕೊಂಡಿತ್ತು. ಈ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ 9 ರನ್ ಬಾರಿಸಿದ್ದರು.

ಶುಬ್ಮನ್ ಗಿಲ್, 2019
ಅಂಡರ್ 19 ವಿಶ್ವಕಪ್ ಗೆದ್ದ ಬಳಿಕ ಆ ತಂಡದ ಆಟಗಾರನಾಗಿದ್ದ ಶುಬ್ಮನ್ ಗಿಲ್ ಮುಂದಿನ ವರ್ಷ ಭಾರತೀಯ ಏಕದಿನ ತಂಡಕ್ಕೆ ನ್ಯೂಜಿಲೆಂಡ್ ವಿರುದ್ಧಧ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದರು. ಈ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದರು. ಕುತೂಹಲಕಾರಿ ಸಂಗತಿಯೆಂದರೆ ಶ್ರೇಯಸ್ ಐಯ್ಯರ್ ಅವರಂತೆಯೇ ಈ ಪಂದ್ಯದಲ್ಲಿ ಶುಬ್ಮನ್ ಗಿಲಗ ಕೂಡ 9 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದರು. ಈ ಪಂದ್ಯವನ್ನು ಭಾರತ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿತ್ತು.

ವಾಶಿಂಗ್ಟನ್ ಸುಂದರ್
ತಮಿಳುನಾಡು ಮೂಲಕ ಆಲ್‌ರೌಂಡರ್ ಆಟಗಾರ ವಾಶಿಂಗ್ಟನ್ ಸುಂದರ್ ಈವರೆಗೆ ಕೇವಲ ಒಂದು ಏಕದಿನ ಪಂದ್ಯವನ್ನು ಮಾತ್ರ ಆಡಿದ್ದಾರೆ. ಅದು ಕೂಡ ರೋಹಿತ್ ಶರ್ಮಾ ಅವರ ನಾಯಕತ್ವದ ಅಡಿಯಲ್ಲಿ 2017ರ ಶ್ರೀಲಂಕಾ ಸರಣಿಯಲ್ಲಿ. ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆಯ ಮೂರನೇ ದ್ವಿಶತಕ ಸಿಡಿಸಿದ ಪಂದ್ಯದಲ್ಲಿ ಸುಂದರ್ ಭಾರತೀಯ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಆ ಪಂದ್ಯ ನಡೆದು ಇಂದಿಗೆ(ಡಿಸೆಂಬರ್ 13) ಭರ್ತಿ ನಾಲ್ಕು ವರ್ಷವಾಗಿದೆ. ಆ ಪಂದ್ಯದಲ್ಲಿ ವಾಶಿಂಗ್ಟನ್ ಸುಂದರ್ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಖಲೀಲ್ ಅಹ್ಮದ್, 2018
ಈ ಪಟ್ಟಿಯಲ್ಲಿರುವ ನಾಲ್ಕನೇ ಆಟಗಾರ ವೇಗಿ ಖಲೀಲ್ ಅಹ್ಮದ್. ಈ ಎಡಗೈ ವೇಗದ ಬೌಲರ್ 2018ರ ಏಷ್ಯಾಕಪ್‌ನಲ್ಲಿ ಭಾರತೀಯ ಏಕದಿನ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಈ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನಿಡಿ ಮಿಂಚಿದ್ದರು ಖಲೀಲ್ ಅಹ್ಮದ್. 48 ರನ್‌ಗಳಿಗೆ 3 ವಿಕೆಟ್ ಸಂಪಾದಿಸಿದ್ದರು ಖಲೀಲ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications