ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs Ban 2nd ODI : ರೋಹಿತ್ ಶರ್ಮಾ ಹೋರಾಟ ವ್ಯರ್ಥ, ರೋಚಕ ಪಂದ್ಯದಲ್ಲಿ 5 ರನ್‌ಗಳಿಂದ ಸೋತ ಟೀಂ ಇಂಡಿಯಾ

5 Players Who Can Get Demand At IPL Auction 2023 By Performing Good At Ongoing Lanka Premier League

ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್‌ಗಳ ರೋಚಕ ಜಯ ಸಾಧಿಸುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ. ಗಾಯದ ನಡುವೆಯೂ ನಾಯಕ ರೋಹಿತ್ ಶರ್ಮಾ ಏಕಾಂಗಿ ಹೋರಾಟ ಮಾಡಿದರೂ ತಂಡವನ್ನು ಗೆಲುವಿನ ದಡ ತಲುಪಿಸಲು ಸಾಧ್ಯವಾಗಲಿಲ್ಲ.

272 ರನ್‌ಗಳ ಸವಾಲಿನ ಮೊತ್ತವನ್ನು ಬೆನ್ನತ್ತಿದ ಭಾರತ ತಂಡಕ್ಕೆ ಬಾಂಗ್ಲಾದೇಶ ಆರಂಭದಲ್ಲೇ ಆಘಾತ ನೀಡಿತು. ರೋಹಿತ್ ಶರ್ಮಾ ಗಾಯಗೊಂಡ ನಂತರ 8 ವರ್ಷಗಳ ಬಳಿಕ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತೆ ವೈಫಲ್ಯ ಅನುಭವಿಸಿದರು. ಕೇವಲ 5 ರನ್ ಗಳಿಸಿ ಎಬಾಡೊಟ್ ಹಸನ್ ಬೌಲಿಂಗ್‌ನಲ್ಲಿ ಬೌಲ್ಡ್ ಆದರು.

IND vs BAN 2nd ODI: ನಿರ್ಣಾಯಕ ಪಂದ್ಯದಲ್ಲಿ ಕೈ ಕೊಟ್ಟ ಕೊಹ್ಲಿ, ಧವನ್ ನಿವೃತ್ತಿಯಾಗಲಿ; ಫ್ಯಾನ್ಸ್ ತರಾಟೆIND vs BAN 2nd ODI: ನಿರ್ಣಾಯಕ ಪಂದ್ಯದಲ್ಲಿ ಕೈ ಕೊಟ್ಟ ಕೊಹ್ಲಿ, ಧವನ್ ನಿವೃತ್ತಿಯಾಗಲಿ; ಫ್ಯಾನ್ಸ್ ತರಾಟೆ

ಶಿಖರ್ ಧವನ್ ಕೂಡ ತಮ್ಮ ಕಳಪೆ ಫಾರ್ಮ್ ಮುಂದುವರೆಸಿದರು. 10 ಎಸೆತಗಳಲ್ಲಿ 8 ರನ್ ಗಳಿಸಿ ಔಟ್ ಆದರು. ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ವಾಷಿಂಗ್ಟನ್ ಸುಂದರ್ ಕೂಡ ರನ್ ಗಳಿಸುವಲ್ಲಿ ವಿಫಲವಾದರು. 19 ಎಸೆತಗಳಲ್ಲಿ 11 ರನ್ ಗಳಿಸಿ ಔಟ್ ಆದರು. ಇನ್ನು ಕಳೆದ ಪಂದ್ಯದಲ್ಲಿ ಉತ್ತಮವಾಗಿ ರನ್ ಗಳಿಸಿದ್ದ ಕೆಎಲ್ ರಾಹುಲ್ ಕೂಡ 28 ಎಸೆತಗಳಲ್ಲಿ 14 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಆಸರೆಯಾದ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್

ಆಸರೆಯಾದ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್

65 ರನ್ ಆಗುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದು ಭಾರತ ತಂಡಕ್ಕೆ ಆಸರೆಯಾಗಿದ್ದು, ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಈ ಜೋಡಿ 107 ರನ್ ಜೊತೆಯಾಟ ಆಡುವ ಮೂಲಕ ಭಾರತಕ್ಕೆ ಗೆಲುವಿನ ಭರವಸೆ ಮೂಡಿಸಿದರು.

ಶ್ರೇಯಸ್ ಅಯ್ಯರ್ 102 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ನೆರವಿನಿಂದ 82 ರನ್ ಗಳಿಸಿದರೆ, ಅಕ್ಷರ್ ಪಟೇಲ್ 56 ಎಸೆತಗಳಲ್ಲಿ 2 ಬೌಂಡರಿ 3 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ಆದರೆ ಇವರಿಬ್ಬರು ಔಟಾದ ಬಳಿಕ ಭಾರತ ಮತ್ತೆ ಸಂಕಷ್ಟಕ್ಕೆ ಸಿಲುಕಿತು.

ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಅಲಭ್ಯ ಸಾಧ್ಯತೆ: ಟೆಸ್ಟ್ ಸರಣಿಗೂ ಅನುಮಾನ!

ಗಾಯದ ನಡುವೆ ರೋಹಿತ್ ಭರ್ಜರಿ ಬ್ಯಾಟಿಂಗ್

ಗಾಯದ ನಡುವೆ ರೋಹಿತ್ ಭರ್ಜರಿ ಬ್ಯಾಟಿಂಗ್

ಅಕ್ಷರ್ ಪಟೇಲ್ ಮತ್ತು ಶ್ರೇಯಸ್ ಅಯ್ಯರ್ ಔಟ್ ಆದ ನಂತರ ಶಾರ್ದೂಲ್ ಠಾಕುರ್ ಮತ್ತು ದೀಪಕ್ ಚಹರ್ ಬೇಗನೆ ಔಟ್ ಆದರು. ಗಾಯಗೊಂಡಿದ್ದರೂ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಲು ಬಂದರು.

28 ಎಸೆತಗಳಲ್ಲಿ 3 ಬೌಂಡರಿ 5 ಸಿಕ್ಸರ್ ಸಹಿತ 51 ರನ್ ಗಳಿಸಿದರೂ ಕೂಡ ತಂಡವನ್ನು ಸೋಲಿನಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ರೋಹಿತ್ ಶರ್ಮಾಗೆ ಇನ್ನೊಂದು ಬದಿಯಿಂದ ಸರಿಯಾದ ಬೆಂಬಲ ಸಿಗಲಿಲ್ಲ, ಮೊಹಮ್ಮದ್ ಸಿರಾಜ್ 12 ಎಸೆತಗಳಲ್ಲಿ 2 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ 20 ರನ್ ಗಳಿಸಿಬೇಕಾದಾಗ ಮುಸ್ತಾಫಿಜುರ್ ರೆಹಮಾನ್ ಉತ್ತಮವಾಗಿ ಬೌಲಿಂಗ್ ಮಾಡಿದರು 14 ರನ್ ಬಿಟ್ಟುಕೊಟ್ಟು ಬಾಂಗ್ಲಾದೇಶಕ್ಕೆ 5 ರನ್‌ಗಳ ರೋಚಕ ಜಯ ಸಾಧಿಸಿದರು.

ಭರ್ಜರಿ ಶತಕ ಸಿಡಿಸಿದ ಮೆಹಿದಿ ಹಸನ್

ಭರ್ಜರಿ ಶತಕ ಸಿಡಿಸಿದ ಮೆಹಿದಿ ಹಸನ್

ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಬಾಂಗ್ಲಾದೇಶಕ್ಕೆ ಆಸರೆಯಾಗಿದ್ದು ಮಹ್ಮದುಲ್ಲಾ ರಿಯಾದ್ ಮತ್ತು ಮೆಹಿದಿ ಹಸನ್ ಮೀರಜ್. ಮಹ್ಮದುಲ್ಲಾ ರಿಯಾದ್ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುವ ಮೂಲಕ ಅರ್ಧಶತಕ ಸಿಡಿಸಿದರು. ಅವರು 96 ಎಸೆತಗಳಲ್ಲಿ 7 ಬೌಂಡರಿ ಸಹಿತ 77 ರನ್ ಗಳಿಸಿದರು.

ಕಳೆದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಬಾಂಗ್ಲಾದೇಶದ ಗೆಲುವಿಗೆ ಕಾರಣವಾಗಿದ್ದ ಮೆಹಿದಿ ಹಸನ್ ಮೀರಜ್, ಎರಡನೇ ಪಂದ್ಯದಲ್ಲಿ ತಮ್ಮ ಅತ್ಯುತ್ತಮ ಫಾರ್ಮ್‌ ಮುಂದುವರೆಸಿದರು. 83 ಎಸೆತಗಳಲ್ಲಿ 8 ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ, ತಮ್ಮ ಚೊಚ್ಚಲ ಶತಕವನ್ನು ದಾಖಲಿಸಿದರು.

ಉಭಯ ತಂಡಗಳ ಪ್ಲೇಯಿಂಗ್ XI

ಉಭಯ ತಂಡಗಳ ಪ್ಲೇಯಿಂಗ್ XI

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ : ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರಹಮಾನ್

Story first published: Wednesday, December 7, 2022, 20:27 [IST]
Other articles published on Dec 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X