ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾಗೆ ಕಮ್‌ಬ್ಯಾಕ್ ಮಾಡಬಲ್ಲ ಐವರು ಕ್ರಿಕೆಟಿಗರು

ಕಳೆದ ಕೆಲ ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ ತಂಡ ಕ್ರಿಕೆಟ್ ಲೋಕದ ಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ವಿದೇಶಿ ನೆಲದಲ್ಲಿಯೂ ಶ್ರೇಷ್ಠ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ಸಾಕಷ್ಟು ಪ್ರತಿಭೆಗಳು ಬೆಳಕಿಗೆ ಬರುತ್ತಿದೆ. ಈ ಮಧ್ಯೆ ಭಾರತೀಯ ಕ್ರಿಕೆಟ್ ತಂಡ ಈಗ ಸ್ಟಾರ್ ಆಟಗಾರರಿಲ್ಲದೆ ಪ್ರವಾಸವೊಂದಕ್ಕೆ ಸಜ್ಜಾಗಿದೆ. ಪ್ರಮುಖ ಆಟಗಾರರ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲು ಸಜ್ಜಾಗುತ್ತಿರುವ ಸಂದರ್ಭದಲ್ಲಿಯೇ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಆಯೋಜಿಸಲು ಟೀಮ್ ಇಂಡಿಯಾ ಘೋಷಿಸಿದೆ.

ಹೀಗಾಗಿ ಶ್ರೀಲಂಕಾ ವಿರುದ್ಧದ ಈ ಪ್ರವಾಸದಲ್ಲಿ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಅವರಿಲ್ಲದೆ ನಡೆಯುವ ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಸರಣಿಯಲ್ಲಿ ಸ್ಥಾನವನ್ನು ಕಳೆದುಕೊಂಡಿರುವ ಕೆಲ ಆಟಗಾರರು ಅವಕಾಶವನ್ನು ಗಿಟ್ಟಿಸಿಕೊಳ್ಳುವ ಸಂಭವವಿದೆ.

ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್ಟೆಸ್ಟ್‌ ವೃತ್ತಿ ಬದುಕಿನ ಗಾಳಿಸುದ್ದಿಗೆ ಖಾರವಾಗಿ ಪ್ರತಿಕ್ರಿಯಿಸಿದ ಭುವನೇಶ್ವರ್

ಹಾಗಾದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಸಾಧ್ಯತೆಯಿರುವ ಪ್ರಮುಖ ಐವರು ಆಟಗಾರರು ಯಾರು ಎಂಬುದನ್ನು ಬನ್ನಿ ನೋಡೋಣ..

ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

ಸದ್ಯ ಭಾರತದ ಅಗ್ರ ವಿಕೆಟ್ ಕೀಪರ್‌ಗಳ ಪೈಕಿ ದಿನೇಶ್ ಕಾರ್ತಿಕ್ ಕೂಡ ಒಬ್ಬರು. ರಿಶಭ್ ಪಂತ್, ಕೆಎಲ್ ರಾಹುಲ್ ಮತ್ತು ವೃದ್ಧಿಮಾನ್ ಸಾಹಾ ಇಂಗ್ಲೆಂಡ್ ಪ್ರವಾಸಕ್ಕೆ ಹಾರಲು ಸಜ್ಜಾಗಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಶ್ರೀಲಂಕಾ ಕ್ರಿಕೆಟ್ ತಂಡದ ವಿರುದ್ಧ ದಿನೇಶ್ ಕಾರ್ತಿಕ್ ಉತ್ತಮ ದಾಖಲೆಯನ್ನು ಕೂಡ ಹೊಂದಿರುವುದು ಕೂಡ ಗಮನಾರ್ಹ ಸಂಗತಿಯಾಗಿದೆ.

ಪೃಥ್ವಿ ಶಾ

ಪೃಥ್ವಿ ಶಾ

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ವಿಫಲವಾದ ನಂತರ ತಂಡದಿಂದ ಹೊರಬಿದ್ದ ಯುವ ಆಟಗಾರ ಪೃಥ್ವಿ ಶಾ ದೇಶೀಯ ಕ್ರಿಕೆಟ್‌ನಲ್ಲಿ ಹಾಗೂ ಐಪಿಎಲ್‌ನಲ್ಲಿ ಅದ್ಭುತವಾದ ಫಾರ್ಮ್‌ಅನ್ನು ಪ್ರದರ್ಶಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗದಿರುವುದಕ್ಕೆ ಕೆಲವರು ಆಶ್ಚರ್ಯವನ್ನು ಕೂಡ ವ್ಯಕ್ತಪಡಿಸಿದ್ದರು. ಆದರೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಶಾ ಕಮ್‌ಬ್ಯಾಕ್ ಮಾಡುವುದು ಬಹುತೇಕ ಖಚಿತವಾಗಿದೆ.

ಸಂಜು ಸ್ಯಾಮ್ಸನ್

ಸಂಜು ಸ್ಯಾಮ್ಸನ್

ದಿನೇಶ್ ಕಾರ್ತಿಕ್ ಹೊರತು ಪಡಿಸಿ ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವ ಇನ್ನೋರ್ವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಕಳೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ತಂಡದ ಭಾಗವಾಗಿದ್ದ ಸಂಜು ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿರಲಿಲ್ಲ. ಈಗ ಶ್ರೀಲಂಕಾ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಮನೀಶ್ ಪಾಂಡೆ

ಮನೀಶ್ ಪಾಂಡೆ

ಈ ಬಾರಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರವಾಗಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ ಮನೀಶ್ ಪಾಂಡೆ ರಾಷ್ಟ್ರೀಯ ತಂಡಕ್ಕೆ ಮತ್ತೆ ಆಯ್ಕೆಯಾಗುವ ಅವಕಾಶವನ್ನು ಹೊಂದಿದ್ದಾರೆ. ಟೀಮ್ ಇಂಡಿಯಾ ಪರವಾಗಿ ನಿರಂತರವಾಗಿ ಪ್ರವಾಸ ಮಾಡಿದ್ದರೂ ಆಡುವ ಅವಕಾಶವನ್ನು ಪಾಂಡೆ ಗಳಿಸಿಕೊಂಡಿದ್ದು ಕಡಿಮೆ. ಈಗ ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.

ನವ್‌ದೀಪ್ ಸೈನಿ

ನವ್‌ದೀಪ್ ಸೈನಿ

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಂತರ ಟೀಮ್ ಇಂಡಿಯಾ ತಂಡದಲ್ಲಿಯೂ ಅವಕಾಶವನ್ನು ಪಡೆದುಕೊಂಡರು. ಆದರೆ ದುರಾದೃಷ್ಟವಶಾತ್ ರಾಷ್ಟ್ರೀಯ ತಂಡದಲ್ಲಿ ಮಿಂಚಲು ವಿಫಲರಾದ ಸೈನಿ ತಂಡದಿಂದ ಹೊರಬಿದ್ದರು. ಆದರೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸೈನಿ ಮತ್ತೆ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, May 16, 2021, 11:41 [IST]
Other articles published on May 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X