ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ ಈ ಐವರು ಯುವ ಆಟಗಾರರು

5 Young Indian cricketers to Look Out For on limited over series against Sri Lanka
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಈ ಆಟಗಾರರ ಮೇಲೆ ಒಂದು ಕಣ್ಣಿಡಿ | Oneindia Kannada

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದೆ. ಈ ಮಧ್ಯೆ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಸರಣಿಯತ್ತ ಚಿತ್ತ ನೆಟ್ಟಿದೆ. ಯುವ ಆಟಗಾರರೇ ತುಂಬಿರುವ ಭಾರತ ಕ್ರಿಕೆಟ್ ತಂಡ ಶ್ರೀಲಂಕಾಗೆ ಪ್ರವಾಸವನ್ನು ಕೈಗೊಂಡಿದ್ದು ಮೂರು ಟಿ20 ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಲಿದೆ.

ಒಂದಡೆ ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವಂತೆಯೇ ಭಾರತ ಲಂಕಾ ನೆಲದಲ್ಲಿ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗಿಯಾಗುವ ಮೂಲಕ ಹೊಸ ಇತಿಹಾಸವನ್ನು ಬರೆಯಲು ಸಜ್ಜಾಗಿದೆ.

ಶಿಖರ್ ಧವನ್ ನೇತೃತ್ವದ ಟೀಮ್ ಇಂಡಿಯಾ ಸೀಮಿತ ಓವರ್‌ಗಳ ಸರಣಿಯಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಸಹಿತ ಸಾಕಷ್ಟು ಯುವ ಆಟಗಾರರು ಟೀಮ್ ಇಂಡಿಯಾದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಈ ಆಟಗಾರ ಪ್ರದರ್ಶನದ ಮೇಲೆ ಸಾಕಷ್ಟು ಕುತೂಹಲವಿದೆ.

ಶಿಖರ್ ಧವನ್ ನಾಯಕತ್ವದ ಟೀಮ್ ಇಂಡಿಯಾ ಶ್ರೀಲಂಕಾಕ್ಕೆ ಪ್ರಯಾಣಶಿಖರ್ ಧವನ್ ನಾಯಕತ್ವದ ಟೀಮ್ ಇಂಡಿಯಾ ಶ್ರೀಲಂಕಾಕ್ಕೆ ಪ್ರಯಾಣ

ಹಾಗಾದರೆ ಈ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಲು ಸಜ್ಜಾಗಿರುವ ಐವರು ಯುವ ಆಟಗಾರರನ್ನು ಬಗ್ಗೆ ಇಲ್ಲಿದೆ ಮಾಹಿತಿ

ದೇವದತ್ ಪಡಿಕ್ಕಲ್

ದೇವದತ್ ಪಡಿಕ್ಕಲ್

ಕರ್ನಾಟಕ ಈ ಯುವ ಆಟಗಾರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಆದರೆ ದೇವದತ್ ಪಡಿಕ್ಕಲ್ ಸಾಧನೆ ಕೇವಲ ಐಪಿಎಲ್‌ಗೆ ಮಾತ್ರವೇ ಸೀಮಿತವಾಗಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ರಾಜ್ಯ ತಂಡದ ಪರವಾಗಿಯೂ ಪಡಿಕ್ಕಲ್ ಅದ್ಭುತವಾದ ಸಾಧನೆ ಮಾಡಿದ್ದಾರೆ. ಈ ಮೂಲಕ ಭವಿಷ್ಯದ ತಾರೆ ಎನಿಸಿಕೊಂಡಿದ್ದಾರೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ 7 ಪಂದ್ಯಗಳಲ್ಲಿ 737 ರನ್‌ಗಳಿಸಿ ಎರಡನೇ ಹೈಯೆಸ್ಟ್ ಸ್ಕೋರರ್ ಎನಿಸಿದ್ದಾರೆ. ಐಪಿಎಲ್‌ನಲ್ಲಿಯೂ ಒಂದು ಅದ್ಭುತವಾದ ಶತಕ ಸಿಡಿಸಿ ತನ್ನ ಸಾಮರ್ಥ್ಯವನ್ನು ಮೆರೆದಿದ್ದಾರೆ. ತನ್ನ ಕೌಶಲ್ಯ, ಸಾಮರ್ಥ್ಯ ಹಾಗೂ ಟೈಮಿಂಗ್ಸ್ ಮೂಲಕ ಕ್ರಿಕೆಟ್ ಪ್ರೇಮಿಗಳಲ್ಲಿ ದೊಡ್ಡ ಭರವಸೆಯನ್ನು ಹುಟ್ಟುಹಾಕಿದ್ದಾರೆ.

ಚೇತನ್ ಸಕಾರಿಯಾ

ಚೇತನ್ ಸಕಾರಿಯಾ

ವೈಯಕ್ತಿಕವಾಗಿ ಚೇತನ್ ಸಕಾರಿಯಾ ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ಆದರೆ ಕ್ರಿಕೆಟ್ ಅಂಗಳದಲ್ಲಿ ಸಾಧಿಸುವ ಛಲ ಚೇತನ್ ಸಕಾರಿಯಾ ಬಳಿಯಿದೆ. ಈ ಬಾರಿಯ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಕ್ಸ್ ತಂಡದ ಪರವಾಗಿ ಚೇತನ್ ಸಕಾರಿಯಾ ನೀಡಿದ ಪ್ರದರ್ಶನ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿದೆ. ಕೊರೊನಾವೈರಸ್‌ನ ಕಾರಣದಿಂದಾಗಿ ಐಪಿಎಲ್ ಮುಂದೂಡುವ ಮುನ್ನ ಆಡಿದ 7 ಪಂದ್ಯಗಳ ಪೈಕಿ 7 ವಿಕೆಟ್ ಕಬಳಿಸಿದ್ದಾರೆ ಚೇತನ್ ಸಕಾರಿಯಾ. 8.22ರಷ್ಟು ಎಕಾನಮಿಯಲ್ಲಿ ಬೌಲಿಂಗ್ ದಾಳಿ ನಡೆಸಿರುವುದು ಗಮನಾರ್ಹ.

ಋತುರಾಜ್ ಗಾಯಕ್ವಾಡ್

ಋತುರಾಜ್ ಗಾಯಕ್ವಾಡ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ತಮ್ಮ ಪ್ರದರ್ಶನದ ಮೂಲಕ ಕ್ರಿಕೆಟ್‌ನಲ್ಲಿ ಬಹುದೂರ ಸಾಗುವ ಕೌಶಲ್ಯವನ್ನು ತೋರಿಸಿದ್ದಾರೆ. ತಮ್ಮ ಅದ್ಭುತವಾದ ಟೈಮಿಂಗ್ ಹಾಗೂ ಪ್ರದರ್ಶನದ ಮೂಲಕ ಮಿಂಚಿದ್ದಾರೆ. ಐಪಿಎಲ್ 2020ಯಲ್ಲಿ ಕೆಲ ಗಮನಾರ್ಹ ಪ್ರದರ್ಶನ ನೀಡಿ ಮಿಂಚಿದ್ದ ಗಾಯಕ್ವಾಡ್ ಐಪಿಎಲ್ 2021ರಲ್ಲಿಯೂ ಈ ಪ್ರದರ್ಶನವನ್ನು ಮುಂದುವರಿಸಿದ್ದರು. ಆರಂಭದಲ್ಲಿ ಕೆಲ ಪಂದ್ಯಗಳಲ್ಲಿ ಫಾರ್ಮ್ ವೈಫಲ್ಯತೆಯನ್ನು ಅನುಭವಿಸಿದ್ದರಾದರು ನಂತರ ಶೀಘ್ರದಲ್ಲಿಯೇ ಫಾರ್ಮ್‌ಗೆ ಮರಳಲು ಯಶಸ್ವಿಯಾಗಿದ್ದರು. ಆಡಿದ ಏಳು ಪಂದ್ಯಗಳಲ್ಲಿ 196 ರನ್‌ಗಳನ್ನು ಋತುರಾಜ್ ಗಾಯಕ್ವಾಡ್ ಬಾರಿಸಿದ್ದಾರೆ.

ನಿತೀಶ್ ರಾಣಾ

ನಿತೀಶ್ ರಾಣಾ

ದೇಶೀಯ ಕ್ರಿಕೆಟ್‌ನಲ್ಲಿ ದೆಹಲಿ ತಂಡದ ಪರವಾಗಿ ಹಾಗೂ ಐಪಿಎಲ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ನಿರಂತರವಾಗಿ ಸ್ಥಿರ ಪ್ರದರ್ಶನ ನೀಡಿಕೊಂಡು ಬಂದ ಕ್ರಿಕೆಟಿಗ ನಿತೀಶ್ ರಾಣಾ. ಅನ್‌ಕ್ಯಾಪ್‌ಡ್ ಆಟಗಾರರ ಪೈಕಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿಯೂ ರಾಣಾ ಗುರುತಿಸಿಕೊಂಡಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ ಆಡಿದ 7 ಪಂದ್ಯಗಳ ಪೈಕಿ 201 ರನ್‌ಗಳಿಸಿದ್ದಾರೆ. 2020-21ನೇ ಸಾಲಿನ ವಿಜಯ್ ಹಜಾರೆ ಟ್ರೋಫಿಯಲ್ಲಿ 398 ರನ್‌ಗಳಿಸಿ ಮಿಂಚಿದ್ದು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಈಗ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿ ಉತ್ತಮ ಪ್ರದರ್ಶನ ನೀಡುವ ಭರವಸೆಯಲ್ಲಿದ್ದಾರೆ.

ವರುಣ್ ಚಕ್ರವರ್ತಿ

ವರುಣ್ ಚಕ್ರವರ್ತಿ

ಮಿಸ್ಟರಿ ಸ್ಪಿನ್ನರ್ ಎಂದೇ ಖ್ಯಾತರಾಗಿರುವ ವರುಣ್ ಚಕ್ರವರ್ತಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಈಗಾಗಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ವರುಣ್ ಚಕ್ರವರ್ತಿ ಟೀಮ್ ಇಂಡಿಯಾದಿಂದ ಮೊದಲ ಬಾರಿ ಕರೆಯನ್ನು ಸ್ವೀಕರಿಸಿದ್ದರು. ಆದರೆ ಗಾಯದ ಕಾರಣದಿಂದಾಗಿ ಹೊರಬಿದ್ದರು. ಅದಾದ ನಂತರ ಇಂಗ್ಲೆಂಡ್ ವಿರುದ್ಧದ ಸರಣಿಗೂ ವರುಣ್ ಚಕ್ರವರ್ತಿ ಆಯ್ಕೆಯಾಗಿದ್ದರಾದರೂ ಫಿಟ್‌ನೆಸ್ ಪರೀಕ್ಷೆಯಲ್ಲಿ ವಿಫಲರಾಗಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದರು. ಆದರೆ ಈಗ ಶ್ರೀಲಂಕಾ ವಿರುದ್ಧದ ಸರಣಿಗೆ ಫಿಟ್‌ನೆಸ್‌ ಪಡೀಕ್ಷೆಯಲ್ಲಿ ಕೆಲ ಸಡಿಲಿಕೆಗಳನ್ನು ಮಾಡಲಾಗಿದೆ. ಹೀಗಾಗಿ ತಮಿಳುನಾಡಿದ ಈ ಆಟಗಾರ ಅದ್ಭುತ ಪ್ರದರ್ಶನವನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ನೀಡುವ ನಿರೀಕ್ಷೆಯಲ್ಲಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಆಡಿದ 7 ಪಂದ್ಯಗಳಲ್ಲಿ 7ವಿಕೆಟ್ ಕಿತ್ತಿರುವ ವರುಣ್ ಚಕ್ರವರ್ತಿ 7.82ರ ಎಕಾನಮಿ ರೇಟ್‌ನಲ್ಲಿ ಬೌಲಿಂಗ್ ನಡೆಸಿದ್ದಾರೆ.

Story first published: Monday, June 28, 2021, 19:59 [IST]
Other articles published on Jun 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X