IND vs NZ ಚಾಂಪಿಯನ್ಸ್ ಟ್ರೋಫಿ ಫೈನಲ್: 5000 ಕೋಟಿ ರೂ. ಬೆಟ್ಟಿಂಗ್: ಯಾರು ಬಾಜಿ ಕೋರರ ಫೆವರೀಟ್?
ಚಾಂಪಿಯನ್ಸ್ ಟ್ರೋಫಿ ಫೈನಲ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಶಸ್ತಿ ಸುತ್ತಿನ ಫೈಟ್ ನಡೆಯಲಿದೆ. ಈ ಹೈ ವೋಲ್ಟೇಜ್ ಪಂದ್ಯಕ್ಕಾಗಿ ಬಾಜಿ ಕೋರರ ಗಮನ ಸೆಳೆದಿದೆ. ಈ ಮೆಗಾ ಪಂದ್ಯಕ್ಕಾಗಿ ಇದುವರೆಗೆ 5000 ಕೋಟಿ ರೂ.ಗಳ ಬೆಟ್ಟಿಂಗ್ ನಡೆದಿದೆ.
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯಕ್ಕೂ ದೆಹಲಿ ಪೊಲೀಸರು ಭರ್ಜರಿ ಕಾರ್ಯಚಾರಣೆ ನಡೆಸಿದ್ದಾರೆ. ಈ ವರೆಗೆ ಪೊಲೀಸರು ಅಪರಾಧ ವಿಭಾಗ ಈ ವರೆಗೆ ಕನಿಷ್ಠ ಐದು ದೊಡ್ಡ ಬುಕ್ಕಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಅಪರಾಧಿಗಳನ್ನು ಬಂಧಿಸಿದ ಬಳಿಕ, ತನಿಖೆಯಲ್ಲಿ ದುಬೈಗೆ ಲಿಂಕ್ ಇರುವುದು ತಿಳಿದು ಬಂದಿದೆ. ಬಂಧಿತ ಬುಕ್ಕಿಗಳು ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎಂದು ಎನ್‌ಡಿಟಿವಿ ವರದಿಯನ್ನು ಮಾಡಿದೆ. ಪೊಲೀಸರು ದಾಳಿಯ ವೇಳೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದರೆ.

ಬಾಜಿ ದಾರರ ಫೆವರೀಟ್ ಟೀಮ್ ಇಂಡಿಯಾ ಆಗಿದೆ. ಭಾರತ 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುತ್ತದೆ ಎಂದು ಲೆಕ್ಕಾಚಾರ ಹಾಕಿಕೊಂಡಿದೆ. ಬುಕ್ಕಿಗಳ ಪ್ರಕಾರ ಟೀಮ್ ಇಂಡಿಯಾ ಟೂರ್ನಿಯಲ್ಲಿ ಅಜೇಯವಾಗಿ ಇರಲಿದೆ ಎಂಬ ಲೆಕ್ಕಾಚಾರ ನಡೆದಿದೆ. ದುಬೈನಲ್ಲಿ ಭಾರತ ತನ್ನ ಎಲ್ಲ ಪಂದ್ಯಗಳನ್ನು ಆಡಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯ ಹೈಬ್ರೀಡ್ ಮಾದರಿಯಲ್ಲಿ ನಡೆಯುತ್ತಿದ್ದು, ಈ ಟೂರ್ನಿಯನ್ನು ಪಾಕಿಸ್ತಾನ ಆಯೋಜಿಸಿದೆ.
ಚಾಂಪಿಯನ್ಸ್ ಟ್ರೋಫಿಯ ಮೇಲೆ ಕಣ್ಣು
ಭಾರತ ಚಾಂಪಿಯನ್ಸ್ ಟ್ರೋಫಿ ಪಂದ್ಯವಳಿಯಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಬಾಂಗ್ಲಾದೇಶ, ಪಾಕಿಸ್ಯಾನ, ನ್ಯೂಜಿಲೆಂಡ್ ವಿರುದ್ಧ ಲೀಗ್ ಹಂತದಲ್ಲಿ ಗೆಲುವು ಸಾಧಿಸಿದ್ದು, ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾ ತಂಡವನ್ನು 50 ರನ್‌ಗಳಿಂದ ಮಣಿಸಿ ಫೈನಲ್‌ಗೆ ಪ್ರವೇಶ ಪಡೆದಿತ್ತು. ಈಗ ಫೈನಲ್‌ನಲ್ಲಿ ಉಭಯ ತಂಡಗಳು ಜಿದ್ದಾಜಿದ್ದಿನ ಫೈಟ್ ಕಂಡು ಬರಲಿದೆ. ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ. ಸುಮಾರು 12 ವರ್ಷಗಳ ಹಿಂದೆ ಮಹೇಂದ್ರ ಸಿಂಗ್ ಧೋನಿ ಸಾರಥ್ಯದ ತಂಡ ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು.

ಟೀಮ್ ಇಂಡಿಯಾ ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಎಲ್ಲರ ಗಮನ ಸೆಳೆದಿದೆ. ದುಬೈನಲ್ಲಿ ನಡೆಯುವ ಫೈನಲ್ ಪಂದ್ಯದ ಟಿಕೆಟ್‌ಗಳು ಕೆಲವೇ ಗಂಟೆಗಳಲ್ಲಿ ಮಾರಾಟವಾಗಿವೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಅಮೋಘ ಫಾರ್ಮ್‌ನಲ್ಲಿದ್ದು ನ್ಯೂಜಿಲೆಂಡ್ ತಂಡವನ್ನು ಮಣಿಸುವ ಲೆಕ್ಕಾಚಾರವನ್ನು ಹಾಕಿಕೊಂಡಿದ್ದಾರೆ. ಇನ್ನು ಉಭಯ ತಂಡದಲ್ಲೂ ವಿಶ್ವ ವಿಖ್ಯಾತ ನುರಿತ ಸ್ಪಿನ್ ಬೌಲರ್‌ಗಳು ಇದ್ದು ರೋಚಕತೆ ಹೆಚ್ಚಿಸಿದೆ. ಟೀಮ್ ಇಂಡಿಯಾದ ಪರ ನಾಲ್ವರು ಸ್ಪಿನ್ ಬೌಲರ್‌ಗಳು ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ರೋಹಿತ್ ಶರ್ಮಾ ತನ್ನ ವಿನ್ನಿಂಗ್ ಕಾಂಬಿನೇಷನ್ ಮುಂದುವರೆಸುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಈ ಪಂದ್ಯ ಬಾಜಿ ಕೋರರ ಚಿತ್ತವನ್ನು ಸಹ ಕದ್ದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications