ಐರ್ಲೆಂಡ್ ಪ್ರವಾಸ ಕೈಗೊಳ್ಳುವ ಪಾಂಡ್ಯಾ ತಂಡವೇ ಇಂಗ್ಲೆಂಡ್ ವಿರುದ್ಧವೂ ಕಣಕ್ಕಿಳಿಯುತ್ತಾ? ಕೊಹ್ಲಿ, ರೋಹಿತ್ ಇರಲ್ವಾ?

ಇತ್ತೀಚೆಗಷ್ಟೇ ಭಾರತ ಪ್ರವಾಸ ಕೈಗೊಂಡಿದ್ದ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಿ 2-2 ಅಂತರದೊಂದಿಗೆ ಹರಿಣಗಳ ಜತೆ ಸರಣಿಯನ್ನು ಹಂಚಿಕೊಂಡಿರುವ ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಗಳಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ತಂಡಗಳನ್ನು ಎದುರಿಸಲಿದೆ.
ಐರ್ಲೆಂಡ್ ನೆಲದಲ್ಲಿ ನಡೆಯಲಿರುವ 2 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡಲು ಬಿಸಿಸಿಐ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಿದ್ದು ಯುವ ಆಟಗಾರರನ್ನೊಳಗೊಂಡ ಈ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕನಾಗಿ ನೇಮಕಗೊಂಡಿದ್ದಾರೆ. ಹೀಗೆ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸ ಕೈಗೊಂಡರೆ, ಮುಂದಿನ ತಿಂಗಳು ಇಂಗ್ಲೆಂಡ್ ನೆಲದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಈಗಾಗಲೇ ಇಂಗ್ಲೆಂಡ್ ತಲುಪಿದೆ.
ಇನ್ನು ಇಂಗ್ಲೆಂಡ್ ವಿರುದ್ಧದ ಈ ಟೆಸ್ಟ್ ಪಂದ್ಯ ಮುಕ್ತಾಯವಾದ ನಂತರ ಇಂಗ್ಲೆಂಡ್ ನೆಲದಲ್ಲಿಯೇ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ಕೂಡ ನಡೆಯಲಿದ್ದು, ಈ ಸೀಮಿತ ಓವರ್ ಸರಣಿಗಳಿಗೆ ಟೆಸ್ಟ್ ಪಂದ್ಯಕ್ಕೆ ಪ್ರಕಟವಾಗಿರುವ ತಂಡವನ್ನೇ ಕಣಕ್ಕಿಳಿಸುತ್ತಾರಾ ಅಥವಾ ಈ ಸರಣಿಗಳಿಗೆ ಪ್ರತ್ಯೇಕ ತಂಡಗಳನ್ನು ಪ್ರಕಟಿಸುತ್ತಾರಾ ಎಂಬ ಪ್ರಶ್ನೆ ಇದೀಗ ಅಭಿಮಾನಿ ಬಳಗದಲ್ಲಿ ಮೂಡಿದೆ. ಇನ್ನೂ ಕೆಲವರು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿಯೂ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ತಂಡವೇ ಕಣಕ್ಕಿಳಿಯಲಿದೆ ಎಂಬ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ಈ ಎಲ್ಲಾ ಊಹಾಪೋಹಗಳಿಗೆ ಬಿಸಿಸಿಐನ ಆಯ್ಕೆ ಸಮಿತಿಯ ಸದಸ್ಯರೋರ್ವರು ಈ ಕೆಳಕಂಡಂತೆ ಹೇಳಿಕೆ ನೀಡುವುದರ ಮೂಲಕ ತೆರೆ ಎಳೆದಿದ್ದಾರೆ.

ದೊಡ್ಡ ತಂಡವನ್ನು ಆದಷ್ಟು ಬೇಗ ಪ್ರಕಟಿಸಲಿದ್ದೇವೆ
ಐರ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ತಂಡವೇ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯ ಹಿರಿಯ ಆಟಗಾರರನ್ನೊಳಗೊಂಡ ಬೃಹತ್ ತಂಡವನ್ನು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್ ಸರಣಿಗಳಿಗೆ ಮುಂದಿನ ವಾರ ಪ್ರಕಟಿಸಲಿದ್ದೇವೆ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

ಕೊಹ್ಲಿ ಮತ್ತು ರೋಹಿತ್ ಇರಲಿದ್ದಾರಾ?
ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ ಟ್ವೆಂಟಿ ಸರಣಿಗಳಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಲಭ್ಯರಿರುತ್ತಾರೆ ಎಂದು ಬಿಸಿಸಿಐನ ಸದಸ್ಯರು ಖಚಿತಪಡಿಸಿದ್ದಾರೆ. ಸೀಮಿತ ಓವರ್ ಸರಣಿಯಲ್ಲಿಯೂ ಭಾರತ ತಂಡವನ್ನು ರೋಹಿತ್ ಶರ್ಮಾ ಅವರೇ ಮುಂದುವರಿಸುವುದು ಖಚಿತ ಎಂಬುದು ಈ ಮೂಲಕ ತಿಳಿದುಬಂದಿದೆ.

ಐರ್ಲೆಂಡ್ ಸರಣಿಯಲ್ಲಿ ಪಾಲ್ಗೊಳ್ಳುವ ಕೆಲ ಆಟಗಾರರು ಇಂಗ್ಲೆಂಡ್ ಪ್ರಯಾಣ ಕೈಗೊಳ್ಳಲಿದ್ದಾರೆ
ಇನ್ನೂ ಮುಂದುವರಿದು ಮಾಹಿತಿ ನೀಡಿರುವ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯ ಐರ್ಲೆಂಡ್ ಪ್ರವಾಸ ಮುಗಿಸುವ ಕೆಲ ಆಟಗಾರರು ತವರಿಗೆ ಮರಳಿದರೆ, ಇನ್ನೂ ಕೆಲ ಆಟಗಾರರು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ ಹಾಗೂ ಈ ತಂಡದಲ್ಲಿ ಹಿರಿಯ ಆಟಗಾರರು ಕೂಡ ಇರಲಿದ್ದಾರೆ ಎಂಬ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ವಾರ ದೊಡ್ಡ ತಂಡವನ್ನು ಪ್ರಕಟಿಸಲಿದ್ದು, ಯಾವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ ಎಂಬುದನ್ನು ಖಚಿತಪಡಿಸುವುದಾಗಿ ಹೇಳಿಕೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications