ಟೀಮ್ ಇಂಡಿಯಾದ ಬೆಂಬಲ ಸಿಬ್ಬಂದಿಗೆ ಕೋವಿಡ್, ಅಭ್ಯಾಸ ರದ್ದು

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತದ ಪಾಲಿಗೆ ಆತಂಕಕಾರಿ ಸಂಗತಿಯೊಂದು ಕೇಳಿ ಬಂದಿದೆ. ಟೀಮ್ ಇಂಡಿಯಾದ ಬೆಂಬಲ ಸಿಬ್ಬಂದಿಯಲ್ಲಿ ಮತ್ತೊಬ್ಬರಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಹೀಗಾಗಿ ಗುರುವಾರ (ಸೆಪ್ಟೆಂಬರ್ 9) ನಡೆಯಲಿದ್ದ ಭಾರತೀಯ ತಂಡದ ತರಬೇತಿ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಟೀಮ್ ಇಂಡಿಯಾದಲ್ಲಿ ಈಗಾಗಲೇ ಮುಖ್ಯ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್, ಫಿಸಿಯೋ ನಿತಿನ್ ಪಾಟೆಲ್ ಕೋವಿಡ್ ಸೋಂಕಿಗೆ ತುತ್ತಾಗಿ ಸದ್ಯ ಐಸೊಲೇಶನ್‌ನಲ್ಲಿದ್ದಾರೆ. ಈಗ ಮತ್ತೊಬ್ಬ ಬೆಂಬಲ ಸಿಬ್ಬಂದಿ ಜೂನಿಯರ್ ಫಿಸಿಯೋ ಯೋಗೇಶ್ ಪಾರ್ಮರ್ ಅವರ ಕೋವಿಡ್ ಫಲಿತಾಂಶ ಕೂಡ ಪಾಸಿಟಿವ್ ಬಂದಿದೆ.
ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 10ರಿಂದ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಐದನೇ ಟೆಸ್ಟ್ ಪಂದ್ಯ ನಡೆಯಲಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸರಣಿ ವಿಜೇತರನ್ನು ನಿರ್ಧರಿಸಲು ಇರುವ ಪ್ರಮುಖ ಸರಣಿಯಿದು. ಇದಕ್ಕೂ ಮುನ್ನವೇ ಟೀಮ್ ಇಂಡಿಯಾದ ಮತ್ತೊಬ್ಬ ಬೆಂಬಲ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ವರದಿಯಾಗಿದೆ.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆರಂಭಿಕ ಪಂದ್ಯ ಡ್ರಾ ಎನಿಸಿತ್ತು. ದ್ವಿತೀಯ ಪಂದ್ಯದಲ್ಲಿ ಭಾರತ 151 ರನ್ ಜಯ ಗಳಿಸಿತ್ತು. ತೃತೀಯ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಇನ್ನಿಂಗ್ಸ್ ಸಹಿತ 76 ರನ್ ಜಯ ಗಳಿಸಿತ್ತು. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ 157 ರನ್ ಜಯ ಗಳಿಸಿತ್ತು. ಈಗ ಭಾರತ 2-1ರಿಂದ ಸರಣಿ ಮುನ್ನಡೆಯಲ್ಲಿದೆ.
ಭಾರತ ಗೆಲ್ಲದೆ 14 ವರ್ಷಗಳ ಕಳೆದಿವೆ
ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯೊಂದನ್ನು ಗೆಲ್ಲದೆ ಭಾರತ ತಂಡ ಬರೋಬ್ಬರಿ 14 ವರ್ಷಗಳನ್ನು ಕಳೆದಿದೆ. ಕಳೆದ ಬಾರಿ ಭಾರತೀಯ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆದ್ದಿದ್ದೆಂದರೆ 2007ರಲ್ಲಿ. 2007ರಲ್ಲಿ ಇಂಗ್ಲೆಂಡ್‌ಗೆ ಪ್ರವಾಸ ಹೋಗಿದ್ದ ರಾಹುಲ್ ದ್ರಾವಿಡ್ ನಾಯಕತ್ವದ ತಂಡ ಅಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0ಯಿಂದ ಗೆದ್ದಿತ್ತು. ಈ ವೇಳೆ ಎರಡು ಪಂದ್ಯಗಳು ಡ್ರಾ ಅನ್ನಿಸಿದ್ದವು. ದ್ವಿತೀಯ ಟೆಸ್ಟ್‌ನಲ್ಲಿ ಭಾರತ 7 ವಿಕೆಟ್ ಜಯ ಗಳಿಸಿತ್ತು. ಅದಾದ ಬಳಿಕ 2011, 2014 ಮತ್ತು 2018ರಲ್ಲಿ ಭಾರತ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಆಡಿತ್ತು. ಇದರಲ್ಲಿ ಯಾವುದರಲ್ಲೂ ಗೆದ್ದಿಲ್ಲ. ಹೀಗಾಗಿ ಈ ಬಾರಿ ಗೆಲ್ಲಲು ತಂಡಕ್ಕೆ ಅವಕಾಶವಿದೆ. ಮುಂಬರಲಿರುವ ಟೆಸ್ಟ್‌ನಲ್ಲಿ ಭಾರತ ಗೆದ್ದರೆ 14 ವರ್ಷಗಳ ಬಳಿಕ ಇಂಗ್ಲೆಂಡ್‌ನಲ್ಲಿ ಸರಣಿ ಗೆದ್ದ ದಾಖಲೆಗೆ ವಿರಾಟ್ ಕೊಹ್ಲಿ ಪಡೆ ಕಾರಣವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications