ವಿಶ್ವಕಪ್ 2023: ಬಾಂಗ್ಲಾದೇಶದ ಪ್ರದರ್ಶನಕ್ಕೆ ಕಿಡಿಕಾರಿದ ಆಕಾಶ್ ಚೋಪ್ರ
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ಕಳಫೆ ಪ್ರದರ್ಶನ ನೀಡುತ್ತಿರುವ ತಂಡಗಳ ಪೈಕಿ ಬಾಂಗ್ಲಾದೇಶ ಕೂಡ ಒಂದು. ದಕ್ಷಿಣ ಆಪ್ರಿಕಾ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಹೆಚ್ಚಿನ ಪ್ರತಿರೋಧ ನೀಡದೆ ಭಾರೀ ಅಂತರದಿಂದ ಸೋಲು ಅನುಭವಿಸಿತು. ಈ ಸೋಲಿನ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ಹಾಗೂ ಕಾಮೆಂಟೇಟರ್ ಆಕಾಶ್ ಚೋಪ್ರ ಬಾಂಗ್ಲಾದೇಶದ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ವಿಶ್ಲೇಷಕರಾಗಿ ಖ್ಯಾತರಾಗಿರುವ ಆಕಾಶ್ ಚೋಪ್ರ 'X'ನಲ್ಲಿ ಬಾಂಗ್ಲಾದೇಶದ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕಳೆದ ಎರಡು ದಶಕಗಳಿಮದ ಟೆಸ್ಟ್ ಆಡುವ ದೇಶವಾಗಿದ್ದುಕೊಂಡಿದ್ದರೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅತ್ಯಂತ ಕಳಪೆ ಆಟವನ್ನು ಆಡುತ್ತಿದೆ ಎಂದು ಆಕಾಶ್ ಚೋಪ್ರ ಹೇಳಿದ್ದಾರೆ.

"ವಿಶ್ವ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡುವ ತಂಡವಾಗಿ ಇನ್ನೂ ಕೂಡ ಉಳಿದುಕೊಂಡಿದೆ" ಎಂದು ಬರೆದುಕೊಳ್ಳುವ ಮೂಲಕ ಬಾಂಗ್ಲಾದೇಶ ತಂಡದ ಪ್ರದರ್ಶನದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ಯಾವ ವಿಭಾಗದಲ್ಲಿಯೂ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ಸಫಲವಾಗಲಿಲ್ಲ. ಆರಂಭದಲ್ಲಿ ಬೌಲಿಂಗ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಂಗ್ಲಾದೇಶ ಬಳಿಕ ಬ್ಯಾಟಿಂಗ್‌ನಲ್ಲಿಯೂ 233 ರನ್‌ಗಳಿಗೆ ಆಲೌಟ್ ಆಗುವ ಮೂಲಕ 149 ರನ್‌ಗಳ ಅಂತರದ ಸೋಲು ಅನುಭವಿಸಿದೆ.
ಬಾಂಗ್ಲಾದೇಶದ ಈ ಸೋಲು ಈ ಟೂರ್ನಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ ಅನುಭವಿಸಿದ ನಾಲ್ಕನೇ ಸೋಲಾಗಿದೆ. ಅಫ್ಘಾನಿಸ್ತಾನದ ವಿರುದ್ಧ ಒಂದು ಗೆಲುವು ಸಾಧಿಸಿದ್ದು ಎರಡು ಅಂಕಗಳನ್ನು ಮಾತ್ರವೇ ಖಾತೆಯಲ್ಲಿ ಹೊಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಬಾಂಗ್ಲಾದೇಶ ಕೊನೆಯ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications