ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮುಂಬೈ ಇಂಡಿಯನ್ಸ್‌ಗೆ ಸವಾಲೊಡ್ಡುವ ತಂಡವನ್ನು ಹೆಸರಿಸಿದ ಆಕಾಶ್ ಚೋಪ್ರ

Aakash Chopra names team which ‘can give competition to MI’ in IPL 2021

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್‌ನಲ್ಲಿಯೂ ಅತ್ಯಂತ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿಯೇ ಕಣಕ್ಕಿಳಿಯುತ್ತಿದೆ. ಆದರೆ ಈ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಒಂದು ತಂಡ ಉತ್ತಮ ಸವಾಲೊಡ್ಡಲಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಆಕಾಶ್ ಚೋಪ್ರ ಮುಂಬೈ ಇಂಡಿಯನ್ಸ್ ತಂಡಕ್ಕೆ ಸವಾಲೊಡ್ಡುವ ತಂಡ ಎಂದು ಹೆಸರಿಸಿದ್ದು ಬೇರೆ ಯಾವ ತಂಡವನ್ನೂ ಅಲ್ಲ. ಕಳೆದ ಬಾರಿಯ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್. ಈ ಬಾರಿಯ ಆವೃತ್ತಿಯಲ್ಲೂ ಡೆಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಭರವಸೆಯನ್ನು ಆಕಾಶ್ ಚೋಪ್ರ ವ್ಯಕ್ತಪಡಿಸಿದ್ದಾರೆ.

ಐಪಿಎಲ್ 2021: ಗೇಲ್ ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಸುಳಿವು ನೀಡಿದ ಕೋಚ್ ಜಾಫರ್ಐಪಿಎಲ್ 2021: ಗೇಲ್ ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಸುಳಿವು ನೀಡಿದ ಕೋಚ್ ಜಾಫರ್

ಡೆಲ್ಲಿ ಮೂಲದ ಫ್ರಾಂಚೈಸಿ ಕಳೆದ ಬಾರಿಯ ಆವೃತ್ತಿಯಲ್ಲಿ ಆರಂಭದಿಂದಲೂ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಫೈನಲ್ ಹಂತಕ್ಕೆ ಏರಿದ್ದ ಶ್ರೇಯಸ್ ಐಯ್ಯರ್ ನೇತೃತ್ವದ ಯುವ ಪಡೆ ಮುಂಬೈ ವಿರುದ್ಧದ ಅಂತಿಮ ಪಂದ್ಯದಲ್ಲಿ ಮುಗ್ಗರಿಸಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಕಳೆದ ಬಾರಿಯ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ನಾಲ್ಕು ಬಾರಿ ಮುಖಾಮುಖಿಯಾಗಿತ್ತು. ಈ ನಾಲ್ಕು ಸಂದರ್ಭದಲ್ಲಿಯೂ ಡೆಲ್ಲಿ ತಂಡ ಮುಂಬೈಗೆ ಶರಣಾಗಿತ್ತು. ಆದರೆ ಈ ಬಾರಿ ತಂಡದಲ್ಲಿ ಕೆಲ ಬದಲಾವಣೆ ಮಾಡಿಕೊಂಡಿರುವ ಡೆಲ್ಲಿ ಮುಂಬೈಗೆ ಸವಾಲೊಡ್ಡುವ ನಿರೀಕ್ಷೆಯನ್ನು ಆಕಾಶ್ ಚೋಪ್ರ ವ್ಯಕ್ತಪಡಿಸಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಕೊರೊನಾ ಪ್ರಕರಣಗಳು ಮತ್ತೂ ಏರಿಕೆವಾಂಖೆಡೆ ಸ್ಟೇಡಿಯಂನಲ್ಲಿ ಕೊರೊನಾ ಪ್ರಕರಣಗಳು ಮತ್ತೂ ಏರಿಕೆ

ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಆಕಾಶ್ ಚೋಪ್ರ "ಡೆಲ್ಲಿ ತಂಡ ಸಾಕಷ್ಟು ಸಾಮರ್ಥ್ಯವನ್ನು ಹೊಂದಿದೆ. ಕಾಗದದಲ್ಲಿ ಬಲಿಷ್ಠವಾಗಿರುವ ಅದು ನನ್ನ ನೆಚ್ಚಿನ ತಂಡಗಳಲ್ಲಿ ಒಂದು. ಅವರು ಮುಂಬೈ ಇಂಡಿಯನ್ಸ್‌ಗೆ ಸವಾಲೊಡ್ಡಲಿದ್ದಾರೆ" ಎಂದು ಚೋಪ್ರ ಹೇಳಿದ್ದಾರೆ.

Story first published: Wednesday, April 7, 2021, 9:47 [IST]
Other articles published on Apr 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X