ಐಪಿಎಲ್ ಪ್ರದರ್ಶನದ ಮೇಲೆ ಟಿ20 ವಿಶ್ವಕಪ್‌ಗೆ ತಂಡ ಪ್ರಕಟಿಸಿದ ಚೋಪ್ರಾ; ರೋಹಿತ್, ಕೊಹ್ಲಿಗೆ ಕೊಕ್!

ಕಳೆದ ಭಾನುವಾರವಷ್ಟೇ ಮುಕ್ತಾಯಗೊಂಡ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಂತರ ಇದೀಗ ಟೀಮ್ ಇಂಡಿಯಾ ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್‍ನತ್ತ ಮುಖ ಮಾಡಿದ್ದಾರೆ.
ಇದೇ ತಿಂಗಳ 9ರಿಂದ ಟೀಮ್ ಇಂಡಿಯಾ ಭಾರತ ಪ್ರವಾಸ ಕೈಗೊಳ್ಳಲಿರುವ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ಆಡಲಿದ್ದು, ತಿಂಗಳ ಕೊನೆಯಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧದ 2 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿಯೂ ಭಾಗವಹಿಸಲಿದೆ. ಹೀಗೆ ಇದೇ ತಿಂಗಳಿನಿಂದ ಟೀಮ್ ಇಂಡಿಯಾ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿದ್ದು, ರೋಹಿತ್ ಶರ್ಮಾ ಬಳಗ ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಆಸ್ಟ್ರೇಲಿಯ ನೆಲದಲ್ಲಿ ನಡೆಯಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಯಾರಿಯನ್ನು ಕೂಡ ನಡೆಸಿಕೊಳ್ಳಲಿದೆ.
ಹೀಗಾಗಿ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದಲ್ಲಿ ಯಾವ ಆಟಗಾರರಿದ್ದರೆ ಗೆಲುವು ಸಾಧಿಸಬಹುದು ಎಂಬ ಚರ್ಚೆಗಳು ಈಗಾಗಲೇ ಆರಂಭವಾಗಿದ್ದು, ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಿಂಚಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರನ್ನೂ ಸಹ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿ ಸೇರ್ಪಡೆಪಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆರಿಸಿ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಾಗಿ ತಂಡವನ್ನು ರಚಿಸಿದ್ದಾರೆ. ಇದರ ವಿವರ ಮುಂದಿದೆ ಓದಿ.

ಆಕಾಶ್ ಚೋಪ್ರಾ ರಚಿಸಿರುವ ತಂಡ
ಈ ಬಾರಿಯ ಐಪಿಎಲ್ ಟೂರ್ನಿಯ ಪ್ರದರ್ಶನದ ಆಧಾರದ ಮೇಲೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಾಗಿ ರಚಿಸಿರುವ ತಂಡ: ಕೆಎಲ್ ರಾಹುಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಕುಲದೀಪ್ ಯಾದವ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ

ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೈಬಿಟ್ಟ ಚೋಪ್ರಾ
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಆರಿಸಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಾಗಿ ತಂಡ ರಚಿಸಿರುವ ಆಕಾಶ್ ಚೋಪ್ರಾ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಕೈಬಿಟ್ಟಿದ್ದಾರೆ.

ಪಾಂಡ್ಯಾಗೆ ನಾಯಕತ್ವ
ರೋಹಿತ್ ಶರ್ಮಾರನ್ನು ತಂಡದಿಂದ ಕೈಬಿಟ್ಟಿರುವ ಆಕಾಶ್ ಚೋಪ್ರಾ ಈ ಬಾರಿಯ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ನಾಯಕನಾಗಿ ಯಶಸ್ವಿಯಾಗಿ ಮುನ್ನಡೆಸಿದ ಹಾರ್ದಿಕ್ ಪಾಂಡ್ಯಾಗೆ ನಾಯಕತ್ವವನ್ನು ನೀಡಿದ್ದಾರೆ. ಹಾಗೂ ತನ್ನ ಪ್ರಕಾರ ಈ ಬಾರಿಯ ಮ್ಯಾನ್ ಆಫ್ ದ ಸಿರೀಸ್ ಎಂದರೆ ಅದು ಹಾರ್ದಿಕ್ ಪಾಂಡ್ಯ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications