ಜಗತ್ತಿನ ಅತ್ಯುತ್ತಮ ಆಲ್‌ರೌಂಡರ್ ರವೀಂದ್ರ ಜಡೇಜಾ ಎಂದ ಆಕಾಶ್ ಚೋಪ್ರ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ನೀಡಿರುವ ಪ್ರದರ್ಶನಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡಿರುವ ಜಡೇಜಾ ನಾಗ್ಪುರ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಮೇಲುಗೈಗೆ ಪ್ರಮುಖ ಕಾರಣವಾಗಿದ್ದಾರೆ. ಈ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ರವೀಂದ್ರ ಜಡೇಜಾ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಜಗತ್ತಿನ ಅತ್ಯುತ್ತಮ ಆಲ್‌ರೌಂಡರ್ ಎಂದು ಚೋಪ್ರ ಬಣ್ಣಿಸಿದ್ದಾರೆ.
ಮೊಣಕಾಲಿನ ಗಾಯದಿಂದ ಚೇತರಿಸಿಕೊಂಡ ಸುಮಾರು ಐದು ತಿಂಗಳ ನಂತರ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಜಡೇಜಾ ಅದ್ಭುತರವಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ನಾಗ್ಪುರ ಟೆಸ್ಟ್‌ನ ಮೊದಲ ದಿನದಂದು ಐದು ವಿಕೆಟ್ ಕಬಳಿಸಿದ ಜಡ್ಡು 2ನೇ ದಿನದಂದು ಅರ್ಧಶತಕ ಬಾರಿದ್ದಾರೆ.
ಇಎಸ್‌ಪಿಎನ್ ಕ್ರಿಕ್‌ಇನ್ಫೋಗೆ ಪ್ರತಿಕ್ರಿಯಿಸಿರುವ ಆಕಾಶ್ ಚೋಪ್ರ, ಪ್ರಸ್ತುತ ಜಗತ್ತಿನ ಅತ್ಯುತ್ತಮ ಆಲ್‌ರೌಂಡರ್ ಆಕಾಶ್ ಚೋಪ್ರ ಎಂದು ಬಣ್ಣಿಸಿದ್ದಾರೆ. "ಆತನ ಬತ್ತಳಿಕೆಯಲ್ಲಿ ಅತ್ಯುತ್ತಮ ಹೊಡೆತಗಳಿವೆ. ರನ್‌ಗಳನ್ನು ಗಳಿಸುವುದು ಹೇಗೆ ಎಂಬುದು ಅವರಿಗೆ ತಿಳಿದಿದೆ" ಎಂದಿದ್ದಾರೆ.
ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಮೊದಲಿಗೆ ಐದು ವಿಕೆಟ್‌ಗಳ ಗೊಂಚಲು ಪಡೆದುಕೊಂಡಿದ್ದು ಬಳಿಕ ಎರಡನೇ ದಿನದಾಟದಲ್ಲಿ ಅರ್ಧ ಶತಜವನ್ನು ಕೂಡ ಗಳಿಸಿದ್ದಾರೆ. ಈ ಮೂಲಕ ರವೀಂದ್ರ ಜಡೇಜಾ ಒಂದೇ ಪಂದ್ಯದಲ್ಲಿ ಈ ರೀತಿಯ ಸಾಧನೆಯನ್ನು ಮಾಡಿದ ಏಕೈಕ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕಪಿಲ್ ದೇವ್ ನಾಲ್ಕು ಪಂದ್ಯಗಳಲ್ಲಿ ಈ ಸಾಧನೆಯನ್ನು ಮಾಡಿ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದರು. 34ರ ಹರೆಯದ ಟೀಮ್ ಇಂಡಿಯಾದ ಆಟಗಾರ ಈ ದಾಖಲೆಯನ್ನು ಈಗ ಮುರಿದಿದ್ದಾರೆ.
ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ಶುಬ್ಮನ್ ಗಿಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಪೀಟರ್ ಹ್ಯಾಂಡ್ಸ್ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಆಷ್ಟನ್ ಅಗರ್, ಕ್ಯಾಮರೂನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಲ್ಯಾನ್ಸ್ ಮೋರಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications