ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೋಹಿತ್ ಶರ್ಮಾ ರೀತಿಯ ಆಟಗಾರ ಈತ: ಯುವ ಆಟಗಾರನನ್ನು ಹೊಗಳಿದ ಚೋಪ್ರ

Aakash Chopra Praises Sanju Samson said he is belongs to Rohit Sharmas category

ಭಾರತ ಐರ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ 2-0 ಅಂತರದಿಂದ ಜಯ ಸಾಧಿಸಿದ್ದು ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಸಜ್ಜಾಗಿದೆ. ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರನಿಯ ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಆಡಿದ ಯುವ ತಂಡವೇ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಮಧ್ಯೆ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಓರ್ವ ಆಟಗಾರನ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ಐರ್ಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಭಾರತದ ಪರವಾಗಿ ದೀಪಕ್ ಹೂಡಾ ಶತಕ ಗಳಿಸಿ ಮಿಂಚಿದ್ದರೆ ಸಂಜು ಸ್ಯಾಮ್ಸನ್ 77 ರನ್‌ಗಳ ಕೊಡುಗೆ ನೀಡುವ ಮೂಲಕ ಮಿಂಚಿದ್ದಾರೆ. ಈ ಸಂದರ್ಭದಲ್ಲಿ ಆಕಾಶ್ ಚೋಪ್ರ ಸಂಜು ಸ್ಯಾಮ್ಸನ್ ಅವರ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು ರೋಹಿತ್ ಶರ್ಮಾ ಶೈಲಿಯ ಆಟಗಾರ ಸಂಜು ಎಂದು ಕೊಂಡಾಡಿದ್ದಾರೆ.

IND vs ENG 5ನೇ ಟೆಸ್ಟ್: ಬುಮ್ರಾ ನಾಯಕನಲ್ಲ; ಅಚ್ಚರಿ ಮೂಡಿಸಿದ ರಾಹುಲ್ ದ್ರಾವಿಡ್ ಹೇಳಿಕೆ!IND vs ENG 5ನೇ ಟೆಸ್ಟ್: ಬುಮ್ರಾ ನಾಯಕನಲ್ಲ; ಅಚ್ಚರಿ ಮೂಡಿಸಿದ ರಾಹುಲ್ ದ್ರಾವಿಡ್ ಹೇಳಿಕೆ!

ಸಿಕ್ಕ ಅವಕಾಶ ಬಳಸಿಕೊಂಡ ಸಂಜು

ಸಿಕ್ಕ ಅವಕಾಶ ಬಳಸಿಕೊಂಡ ಸಂಜು

ಸಂಜು ಸ್ಯಾಮ್ಸನ್ ಪ್ರತಿಭಾನ್ವಿತ ಆಟಗಾರ ಎಂಬುದಲ್ಲಿ ಅನುಮಾನವಿಲ್ಲ. ಸುದೀರ್ಘ ಕಾಲದಿಂದ ಭಾರತೀಯ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್‌ಗೆ ಅವಕಾಶಗಳು ದೊರೆತಿದ್ದು ಬಹಳ ಕಡಿಮೆ. ಐರ್ಲೆಂಡ್ ವಿರುದ್ಧಧ ಎರಡನೇ ಟಿ20 ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಸಂಜು ಸ್ಯಾಮ್ಸನ್ ಈ ಅವಕಾಶ ವನ್ನು ಅದ್ಭುತವಾಗಿ ಬಳಸಿಕೊಂಡಿದ್ದಾರೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಯುವ ಆಟಗಾರ 42 ಎಸೆತಗಳಲ್ಲಿ 77 ರನ್ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ಅರ್ಧ ಶತಕವನ್ನು ಪೂರ್ಣಗೊಳಿಸಿದರು.

ರೋಹಿತ್ ಶೈಲಿಯ ಬ್ಯಾಟರ್ ಸಂಜು

ರೋಹಿತ್ ಶೈಲಿಯ ಬ್ಯಾಟರ್ ಸಂಜು

ಈ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಬಗ್ಗೆ ಆಕಾಶ್ ಚೋಪ್ರ ಮಾತನಾಡಿದ್ದಾರೆ. ಸಂಜು ಸ್ಯಾಮ್ಸನ್ ಬ್ಯಾಟಿಂಗ್ ವಿಚಾರದಲ್ಲಿ ರೋಹಿತ್ ಶರ್ಮಾ ರೀತಿಯ ಆಟಗಾರ ಎಂದಿದ್ದಾರೆ. ರೋಹಿತ್ ಶರ್ಮಾ ಬ್ಯಾಟಿಂಗ್ ಶೈಲಿಗೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಹೋಲಿಕೆಯಾಗುತ್ತದೆ ಎಂದಿದ್ದಾರೆ ಆಕಾಶ್ ಚೋಪ್ರ.

ಸಂಜು ಕೆಟ್ಟದಾಗಿ ಬ್ಯಾಟಿಂಗ್ ಮಾಡಿದ್ದನ್ನು ನೋಡಿಲ್ಲ

ಸಂಜು ಕೆಟ್ಟದಾಗಿ ಬ್ಯಾಟಿಂಗ್ ಮಾಡಿದ್ದನ್ನು ನೋಡಿಲ್ಲ

ಸಂಜು ಸ್ಯಾಮ್ಸನ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಚರು 42 ಎಸೆತಗಳಲ್ಲಿ 77 ರನ್ ಬಾರಿಸಿದ್ದಾರೆ. ಅವರ ಆರಂಬ ಉತ್ತಮವಾಗಿರುತ್ತದೆ. ಮಧ್ಯದಲ್ಲಿ ಸ್ವಲ್ಪ ನಿಧಾನವಾದರು. ನಂತರ ಮತ್ತೆ ತಮ್ಮ ರನ್ ವೇಗವನ್ನು ಹೆಚ್ಚುಗೊಳಿಸಿದರು. ಅವರು ಬ್ಯಾಟಿಂಗ್ ಮಾಡುವಾಗ ಅದ್ಭುತವಾಗಿ ಆಡುತ್ತಾರೆ. ಆತ ಯಾವತ್ತೂ ಕೆಟ್ಟದಾಗಿ ಬ್ಯಾಟಿಂಗ್ ಮಾಡಿದ್ದನ್ನು ನಾನು ನೊಡಿಲ್ಲ. ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಶೈಲಿಗೆ ಹೋಲಿಕೆಯಾಗುವ ಬ್ಯಾಟರ್ ಅವರು" ಎಂದು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮಾರ್ಗನ್ | OneIndia Kannada
ಸ್ಥಿರ ಪ್ರದರ್ಶನ ನೀಡಲು ಸಂಜು ವಿಫಲ

ಸ್ಥಿರ ಪ್ರದರ್ಶನ ನೀಡಲು ಸಂಜು ವಿಫಲ

ಇನ್ನು ಸಂಜು ಸ್ಯಾಮ್ಸನ್ ಅತ್ಯುತ್ತಮ ಬ್ಯಾಟರ್ ಎಂಬುದರಲ್ಲಿ ಅನುಮಾನವಿಲ್ಲ. ಹಾಗಿದ್ದರೂ ಸಂಜು ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗುತ್ತಿದ್ದಾರೆ. ಇದಕ್ಕೆ ಕಾರಣ ಸ್ಥಿರ ಪ್ರದರ್ಶನ ನೀಡಲು ಸಂಜು ವಿಫಲವಾಗುತ್ತಿರುವುದು. ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಂಜು ಹೆಚ್ಚಿನ ಸಂದರ್ಭಗಳಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಸಾಕಷ್ಟು ಟೀಕೆಗಳು ಕೂಡ ಸಂಜು ಎದುರಿಸುವಂತಾಗಿದೆ. ಇದೀಗ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಮಿಂಚಿದ ಸಂಜು ಇಂಗ್ಲೆಂಡ್ ವಿರುದ್ಧದ ಅವಕಾಶವನ್ನು ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Story first published: Thursday, June 30, 2022, 18:20 [IST]
Other articles published on Jun 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X