Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಆರೆಂಜ್ ಕ್ಯಾಪ್‌ಗೆ ಪೈಪೋಟಿ ನಡೆಸಲಿರುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರ

Aakash Chopra predicts Orange Cap holder: KL Rahul, Quinton de Kock are contenders

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಆರಂಭಕ್ಕೂ ಮುನ್ನವೇ ಸಾಕಷ್ಟು ಕುತೂಹಲಗಳು ಗರಿಗೆದರಿವೆ. ಟೂರ್ನಿಯ ವಿಚಾರವಾಗಿ ಸಾಕಷ್ಟು ವಿಶ್ಲೇಷಣೆಗಳನ್ನು ವಿಶ್ಲೇಷಕರು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ಗಳಿಸುವ ಆಟಗಾರರಿಗೆ ನೀಡುವ ಆರೆಂಜ್ ಕ್ಯಾಪ್ ಯಾರ ಪಾಲಾಗಲಿದೆ ಎಂಬುದರ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮಾರ್ಚ್ 31ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮೂಲಕ ಎರಡು ತಿಂಗಳ ಕಾಲ ನಡೆಯಲಿರುವ ಕ್ರಿಕೆಟ್ ಜಾತ್ರೆಗೆ ಚಾಲನೆ ದೊರೆಯಲಿದ್ದು ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾತನಾಡಿರುವ ಆಕಾಶ್ ಚೋಪ್ರ ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ಹೆಚ್ಚಿ ರನ್‌ಗಳಿಸಿದ ಆಟಗಾರರಿಗೆ ನೀಡುವ ಆರೆಂಜ್ ಕ್ಯಾಪ್ ಯಾರಿಗೆ ದೊರೆಯಲಿದೆ ಎಂಬ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಆರೆಂಜ್ ಕ್ಯಾಪ್‌ಗೆ ಪ್ರಮುಖ ಸ್ಪರ್ಧಿಗಳು ಎಂದಿದ್ದಾರೆ ಆಕಾಶ್ ಚೋಪ್ರ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಆಕಾಶ್ ಚೋಪ್ರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಮರ್ಥ್ಯವೇ ಅದರ ಅಗ್ರ ಕ್ರಮಾಂಕದ ಬ್ಯಾಟಿಂಗ್ ಎಂದಿದ್ದಾರೆ. ಈ ಸಂದರ್ಭದಲ್ಲಿ ಅವರು ತಂಡದ ಆರಂಭಿಕ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಆರೆಂಹ್ ಕ್ಯಾಪ್‌ಗೆ ಸ್ಪರ್ಧಿಸಲಿರುವ ಪ್ರಮುಖ ಸ್ಪರ್ಧಿಗಳು ಎಂದಿದ್ದಾರೆ. 2022ರ ಐಪಿಎಲ್ ಆವೃತ್ತಿಯಲ್ಲಿ ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ 616 ರನ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದರು. ಮೊದಲ ಸ್ಥಾನವನ್ನು ಜೋಸ್ ಬಟ್ಲರ್ ಪಡೆದುಕೊಂಡಿದ್ದರು.

"ಲಕ್ನೀ ಸೂಪರ್ ಜೈಂಟ್ಸ್ ತಂಡಕ್ಕೆ ಅಗ್ ಕ್ರಮಾಂಕದ ಆಟಗಾರರೇ ದೊಡ್ಡ ಶಕ್ತಿ. ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಈ ಇಬ್ಬರು ಕೂಡ ಆರೆಂಜ್ ಕ್ಯಾಪ್‌ಗಾಗಿ ಸ್ಪರ್ಧಿಸುವ ಆಟಗಾರರು. ಇನ್ನು ಕ್ವಿಂಟನ್ ಡಿಕಾಕ್ ಅವರು ಇರುವ ಫಾರ್ಮ್ ನೋಡಿದರೆ 10-12 ಓವರ್‌ಗಳಲ್ಲಿಯೇ ತಮ್ಮ ವೈಯಕ್ತಿಕ ಶತಕವನ್ನು ಪೂರ್ಣಗೊಳಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ" ಎಂದಿದ್ದಾರೆ ಆಕಾಶ್ ಚೋಪ್ರ.

ಇನ್ನು ಈ ಸಂದರ್ಭದಲ್ಲಿ ಆಕಾಶ್ ಚೋಪ್ರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆಯೂ ಮಾತನಾಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೂರನೇ ಕ್ರಮಾಂಕದಲ್ಲಿ ದೀಪಕ್ ಹೂಡಾ ಕಣಕ್ಕಿಳಿಯಬೇಕು ಎಂದಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಹೂಡಾ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕಳೆದ ಆವೃತ್ತಿಯಲ್ಲಿ ಎಲ್‌ಎಸ್‌ಜಿ ಪರ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದ ಅವರು 451 ರನ್‌ಗಳನ್ನು ಗಳಿಸಿ ಆವೃತ್ತಿಯಲ್ಲಿ ಅತಿ ಹೆಚ್ಚಿನ ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದರು.

ಲಕ್ನೋ ಸೂಪರ್ ಜೈಂಟ್ಸ್ ಸ್ಕ್ವಾಡ್: ರಾಹುಲ್ (ನಾಯಕ & ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಮನನ್ ವೋಹ್ರಾ, ಆಯುಷ್ ಬಡೋನಿ, ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಡೇನಿಯಲ್ ಸಾಮ್ಸ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಕರಣ್ ಶರ್ಮಾ, ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಜಯದೇವ್ ಉನದ್ಕತ್, ರೊಮಾರಿಯೋ ಶೆಫರ್ಡ್, ನವೀನ್-ಉಲ್-ಹಕ್, ಅವೇಶ್ ಖಾನ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯುದ್ವೀರ್ ಸಿಂಗ್, ಯಶ್ ಠಾಕೂರ್, ಮಯಾಂಕ್ ಯಾದವ್, ಸ್ವಪ್ನಿಲ್ ಸಿಂಗ್.

Story first published: Thursday, March 30, 2023, 18:34 [IST]
Other articles published on Mar 30, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+