For Quick Alerts
ALLOW NOTIFICATIONS  
For Daily Alerts
 

GT vs MI: ಈ ಮುಖಾಮುಖಿಯನ್ನು ನೋಡಲು ಕಾಯುತ್ತಿದ್ದೇನೆ ಎಂದ ಆಕಾಶ್ ಚೋಪ್ರ

ಇಂಡಿಯನ್ ಪ್ರೀಮಿಯರ್ ಲೀಗ್‌ 16ನೇ ಆವೃತ್ತಿಯ ಎರಡನೇ ಕ್ವಾಲಿಫಯರ್ ಪಂದ್ಯ ಇಂದು ನಡೆಯುತ್ತಿದ್ದು ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್ ಪ್ರವೇಶಿಸಲು ತೀವ್ರ ಪೈಪೊಟಿ ನಡೆಸಲಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶಲಿದ್ದು ಪ್ರಶಸ್ತಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಾಡಲಿದೆ. ಈ ಹಿನ್ನಡೆಯಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಪ್ರತಿಕ್ರಿಯೆ ನೀಡಿದ್ದು ಇಂದಿನ ಪಂದ್ಯದಲ್ಲಿ ಇಬ್ಬರು ಆಟಗಾರರ ಮುಖಾಮುಖಿಯಾಗಿ ಎದುರು ನೋಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಕ್ವಾಲಿಫಯರ್ 2ರಲ್ಲಿ ಮುಖಾಮುಖಿಯಾಘುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಕದನ ಅತ್ಯಂತ ರೋಚಕವಾಗಿರಲಿದೆ ಎಂದಿರುವ ಆಕಾಶ್ ಚೋಪ್ರ, ಎರಡು ತಂಡಗಳು ಕೂಡ ಬಲಿಷ್ಠ ಆಟಗಾರರನ್ನು ಹೊಂದಿದ್ದು ಸಾಕಷ್ಟು ಜಿದ್ದಾಜಿದ್ದಿನ ಕದನ ನಡೆಯಲಿದೆ ಎಂದಿದ್ದಾರೆ. ಲೀಗ್ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿದರೂ ಗುಜರಾತ್ ಟೈಟನ್ಸ್ ತಂಕ್ಕೆ ಮುಂಬೈ ಇಂಡಿಯನ್ಸ್ ತಂಡ ಸುಲಭ ಸವಾಲು ಆಗಲಾರದು ಎಂದಿದ್ದಾರೆ ಆಕಾಶ್ ಚೋಪ್ರ.

Aakash Chopra said Mohammed Shami vs Mumbai Indians openers would be a contest to watch

"ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಸುಲಭಕ್ಕೆ ಮಣಿಸಲು ಸಾಧ್ಯವಿಲ್ಲ. ಗುಜರಾತ್ ಟೈಟನ್ಸ್ ಕೂಡ ಬಹಳ ಉತ್ತಮವಾಗಿರುವ ತಂಡ. ಗುಜರಾತ್ ಟೈಟನ್ಸ್ ತಂಡವನ್ನು ಕೂಡ ಸುಲಭವಾಗಿ ಪರಿಗಣಿಸಲಿ ಸಾಧ್ಯವಿಲ್ಲ. ಯಾಕೆಂದರೆ ಅವರು ಟೂರ್ನಿಯುದ್ದಕ್ಕೂ ನಂಬರ್‌ 1 ತಂಡವಾಗಿಯೇ ಉಳಿದುಕೊಂಡಿದ್ದರು. ಒಮ್ಮೆ ಅವರು ನಂಬರ್ 1 ಸ್ಥಾನಕ್ಕೇರಿದ ಬಳಿಕ ಅದನ್ನು ಯಾರಿಗೂ ಬಿಟ್ಟುಕೊಡಲೇ ಇಲ್ಲ. ಬಹಳ ಸುಲಭವಾಗಿ ಫ್ಲೇಆಫ್‌ಗೆ ಪ್ರವೇಶಿಸಿದರು" ಎಂದಿದ್ದಾರೆ ಆಕಾಶ್ ಚೋಪ್ರ.

ಮುಂದುವರಿದು ಮಾತನಾಡಿದ ಆಕಾಶ್ ಚೋಪ್ರ ಇಂದಿನ ಈ ಪಂದ್ಯದಲ್ಲಿ ತಾವು ಕಾಯುತ್ತಿರುವ ಮುಖಾಮುಖಿ ಯಾವುದು ಎಂಬುದನ್ನು ಹೇಳಿಕೊಂಡಿದ್ದಾರೆ. "ಇಂದಿನ ಪಂದ್ಯದಲ್ಲಿ ನಾನು ಮೊಹಮ್ಮದ್ ಶಮಿ ಅವರ ಬೌಲಿಂಗ್ ಹಾಗೂ ಮುಂಬೈ ಇಂಡಿಯನ್ಸ್ ತಡದ ಆರಂಭಿಕರ ಸೆಣೆಸಾಟವನ್ನು ನೋಡಲು ಎದುರುನೋಡುತ್ತಿದ್ದೇನೆ. ಈ ಹಿಂದಿನ ಬಾರಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಶಮಿ ಮೇಲೆ ಸಾಕಷ್ಟು ನಿರೀಕ್ಷೆಗಳು ಇತ್ತು ಆದರೆ ಅವರಿಂದ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ" ಎಂದಿದ್ದಾರೆ ಆಕಾಶ್ ಚೋಪ್ರ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.

Story first published: Friday, May 26, 2023, 15:50 [IST]
Other articles published on May 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+