ಭಾರತ vs ದ. ಆಫ್ರಿಕಾ: ಪಂತ್‌ಗೆ ಮುನ್ನ ಈ ಆಟಗಾರನನ್ನು ಬ್ಯಾಟಿಂಗ್‌ಗೆ ಇಳಿಸಿ ಎಂದ ಆಕಾಶ್ ಚೋಪ್ರ

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ2 ಸರಣಿಯ ಎರಡನೇ ಪಂದ್ಯಕ್ಕೆ ಮುನ್ನ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಮಾತನಾಡಿರುವ ಆಕಾಶ್ ಚೋಪ್ರ ಟೀಮ್ ಇಂಡಿಯಾದ ಕ್ರಮಾಂಕದಲ್ಲಿ ಬದಲಾವಣೆ ಮಾಡುವಂತೆ ಸಲಹೆ ನೀಡಿದ್ದಾರೆ. ಅದರಲ್ಲೂ ಓರ್ವ ಆಟಗಾರನನ್ನು ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿಸುವಂತೆ ಮನವಿ ಮಾಡಿದ್ದಾರೆ ಆಕಾಶ್ ಚೋಪ್ರ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಈ ಪಂದ್ಯದಲ್ಲಿ ಕೇವಲ 12 ಎಸೆತಗಳನ್ನು ಎದುರಿಸಿದ ಹಾರ್ದಿಕ್ ಪಾಂಡ್ಯ 31 ರನ್ ಬಾರಿಸಿ ಮಿಂಚಿದರು. ಇದರಿಂದಾಗಿ ಭಾರತ 212 ರನ್‌ಗಳ ಬೃಹತ್ ಗುರಿಯನ್ನು ನಿಗದಿಪಡಿಸಿತು. ಆದರೆ ಪಂದ್ಯದ ಅಂತ್ಯದಲ್ಲಿ ಭಾರತ ತಂಡದ ಈ ಮೊತ್ತ ಕೂಡ ಗೆಲುವಿಗೆ ಸಾಕಾಗಲಿಲ್ಲ.

ಹಾರ್ದಿಕ್ ಪಾಂಡ್ಯ ಸ್ವಲ್ಪ ಮೇಲಿನ ಕ್ರಮಾಂಕದಲ್ಲಿ ಇಳಿಯಲಿ
ಆಕಾಶ್ ಚೋಪ್ರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆಯೇ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸ್ಪೋಟಕ ಬ್ಯಾಟಿಂಗ್ ನಡೆಸುವ ಸಾಮರ್ಥ್ಯವಿರುವ ಹಾರ್ದಿಕ್ ಸ್ಪಲ್ಪ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕೆ ಎಂಬುದು ಆಕಾಶ್ ಚೋಪ್ರ ಅಭಿಪ್ರಾಯ. "ನನ್ನ ಪ್ರಕಾರ ಹಾರ್ದಿಕ್ ಪಾಂಡ್ಯ ಅವರು ಸ್ವಲ್ಪ ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು. 10-12 ಓವರ್‌ಗಳ ಸಂದರ್ಭದಲ್ಲಿ ವಿಕೆಟ್ ಕಳೆದುಕೊಂಡಿದ್ದಾಗ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಬೇಕು. ಆತನಿಗೆ 30 ಎಸೆತಗಳನ್ನು ಆಡುವ ಅವಕಾಶವನ್ನು ನೀವು ನೀಡಿದರೆ 70-80 ರನ್‌ಗಳನ್ನು ಆತ ತಂಡಕ್ಕೆ ನೀಡಬಲ್ಲ ಆಟಗಾರ. ಹಾರ್ದಿಕ್ ಪಾಂಡ್ಯ ಅವರನ್ನು ರಿಷಬ್ ಪಂತ್‌ಗಿಂತ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಸಬೇಕು" ಎಂದಿದ್ದಾರೆ ಆಕಾಶ್ ಚೋಪ್ರ.

ಚಾಹಲ್‌ಗೆ ಹೆಚ್ಚಿನ ಅವಕಾಶ ನೀಡಲಿಲ್ಲ
ಇನ್ನು ಮೊದಲ ಪಂದ್ಯದಲ್ಲಿ ಕೇವಲ 2.1 ಓವರ್‌ಗಳ ಬೌಲಿಂಗ್ ನಡೆಸಿದ್ದ ಯುಜುವೇಂದ್ರ ಚಾಹಲ್‌ಗೆ ಹೆಚ್ಚಿನ ಓವರ್‌ಗಳನ್ನು ನೇಡಬೇಕು ಎಂದಿದ್ದಾರೆ ಆಕಾಶ್ ಚೋಪ್ರ. ಚಾಹಲ್ ಆದಷ್ಟು ಬೇಗನೆ ದಾಳಿಗಿಳಿದು ತಮ್ಮ ಕೋಟಾವನ್ನು ಸಂಪೂರ್ಣಗೊಳಿಸುವಂತಾಗಬೇಕು ಎಂದಿದ್ದಾರೆ. ಅಲ್ಲದೆ ಭಾರತ ತಂಡದಲ್ಲಿ ಹರ್ಷಲ್ ಪಟೇಲ್ ಇನ್ನಷ್ಟು ಮಿಂಚಬೇಕಿದೆ ಎಂದು ಕೂಡ ಆಕಾಶ್ ಚೋಪ್ರ ಹೇಳಿದ್ದಾರೆ. ಆರ್‌ಸಿಬಿ ಪರವಾಗಿ ಉತ್ತಮವಾಗಿ ರನ್ ನಿಯಂತ್ರಣ ಮಾಡುವ ಹರ್ಷಲ್ ಟೀಮ್ ಇಂಡಿಯಾ ಪರವಾಗಿಯೂ ಅಂತಾದ್ದೇ ಪ್ರದರ್ಶನ ನೀಡಬೇಕು ಎಂದಿದ್ದಾರೆ.

ಬದಲಾವಣೆ ಬೇಡ ಎಂದ ಚೋಪ್ರ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧಧ ಟಿ20 ಪಂದ್ಯದ ಎರಡನೇ ಪಂದ್ಯದಲ್ಲಿ ಭಾರತ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಬೇಡ ಎಂದಿದ್ದಾರೆ ಆಕಾಶ್ ಚೋಪ್ರ. "ಭಾರತ ತಂಡದಲ್ಲಿ ಬದಲಾವಣೆಗೆ ಅವಕಾಶವಿದೆಯೇ ಎಂದಿ ಕೇಳಿದರೆ ಬದಲಾವಣೆ ಬೇಡ ಎನ್ನುವುದು ನನ್ನ ಉತ್ತರ. ಇದೇ ತಂಡದೊಂದಿಗೆ ಆಡಬೇಕು, ಯಾಕೆಂದರೆ ಪದೇ ಪದೆ ಬದಲಾವಣೆ ಮಾಡುತ್ತಿದ್ದರೆ ಅದು ಕೆಟ್ಟ ಪರಿಣಾಮ ಬೀರುತ್ತದೆ. ದೀಪಕ್ ಹೂಡಾ ಅವರನ್ನು ಆಡಿಸುವುದಿದ್ದರೆ ಮೊದಲ ಪಂದ್ಯದಲ್ಲಿಯೇ ಆಡಿಸಬೇಕಾಗಿತ್ತು" ಎಂದಿದ್ದಾರೆ ಆಕಾಶ್ ಚೋಪ್ರ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಭಾರತ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯಿ, ರವಿ ಬಿಷ್ಣೋಯಿ ಸಿಂಗ್ ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಾಮ್, ರೀಜಾ ಹೆಂಡ್ರಿಕ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications