For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ ಸೆಮಿಫೈನಲ್ ತಲುಪುವ 4 ತಂಡಗಳನ್ನು ಪ್ರಕಟಿಸಿದ ಆಕಾಶ್ ಚೋಪ್ರಾ; ಕಳೆದ ಬಾರಿಯ ರನ್ನರ್-ಅಪ್ ಹೊರಗೆ!

ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಜಗತ್ತಿನಾದ್ಯಂತ ಕ್ರಿಕೆಟ್ ಪ್ರೇಮಿಗಳು ಹೈ-ವೋಲ್ಟೇಜ್ ಪಂದ್ಯಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

ಇದೇ ವೇಳೆ 2023ರ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಅಕ್ಟೋಬರ್ 14ರಂದು ಅಹಮದಾಬಾದ್‌ನಲ್ಲಿ ನಡೆಯುವ ಹಣಾಹಣಿಗೆ ಉಭಯ ದೇಶಗಳ ಅಭಿಮಾನಿಗಳು ಮಾತ್ರವಲ್ಲದೆ, ಜಗತ್ತಿನ ಅಭಿಮಾನಿಗಳು ಕಾಯುತ್ತಿದ್ದಾರೆ.

Aakash Chopras ICC World Cup Semi-Final Prediction: Surprisingly This World Cup Finalist is Missing!

ಭಾರತದಲ್ಲೇ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಎರಡು ವಾರಗಳು ಮಾತ್ರ ಬಾಕಿ ಉಳಿದಿದ್ದು, ಕ್ರಿಕೆಟ್ ತಜ್ಞರು ಟೂರ್ನಿಯ ಭವಿಷ್ಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪುವ ನಾಲ್ಕು ತಂಡಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ವಿಶ್ಲೇಷಕರಂತೆ, ಆತಿಥೇಯ ಭಾರತವನ್ನು ಮುಂಚೂಣಿ ತಂಡವೆಂದು ಆಕಾಶ್ ಚೋಪ್ರಾ ಪರಿಗಣಿಸಿದ್ದಾರೆ.

ಇನ್ನು ಕಳೆದ ಮೂರು ಐಸಿಸಿ ಏಕದಿನ ವಿಶ್ವಕಪ್‌ಗಳನ್ನು ಆತಿಥೇಯ ರಾಷ್ಟ್ರವೇ ಗೆದ್ದಿದೆ ಎನ್ನುವ ಮೂಲಕ ಗಮನಸೆಳೆದಿದ್ದಾರೆ. 2011ರಲ್ಲಿ ಭಾರತ, 2015ರಲ್ಲಿ ಆಸ್ಟ್ರೇಲಿಯಾ ಮತ್ತು 2019ರಲ್ಲಿ ಇಂಗ್ಲೆಂಡ್ ತವರಿನಲ್ಲಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದ್ದವು.

Aakash Chopras ICC World Cup Semi-Final Prediction: Surprisingly This World Cup Finalist is Missing!

"ಭಾರತ ತಂಡವು ತವರಿನಲ್ಲಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ. ಕಳೆದ ಮೂರು ವಿಶ್ವಕಪ್‌ಗಳನ್ನು ಗಮನಿಸಿದರೆ, ಆಸ್ಟ್ರೇಲಿಯಾದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ, ಇಂಗ್ಲೆಂಡ್‌ನಲ್ಲಿ ಇಂಗ್ಲೆಂಡ್ ಗೆದ್ದಿದೆ ಮತ್ತು ಅದಕ್ಕೂ ಮೊದಲು ಭಾರತವು ಭಾರತದಲ್ಲಿ ಗೆದ್ದಿದೆ," ಎಂದು ಆಕಾಶ್ ಚೋಪ್ರಾ ಹೇಳಿದರು.

"ತವರಿನಲ್ಲಿ ನಡೆಯುವುದರ ಜೊತೆಗೆ, ಭಾರತ ವಿಶ್ವ ಕ್ರಿಕೆಟ್‌ನಲ್ಲಿ ಅಸಾಧಾರಣ ತಂಡವಾಗಿದೆ. ಅದರ ಹಿಂದಿನ ಸಾಧನೆಗಳು ಮತ್ತು ಎದುರಾಳಿಗಳಿಗೆ ಒಡ್ಡುವ ಸವಾಲುಗಳಿಗೆ ಹೆಸರುವಾಸಿಯಾಗಿದೆ," ಎಂದು ಭಾರತದ ಮಾಜಿ ಆರಂಭಿಕ ಬ್ಯಾಟರ್ ಆಕಾಶ್ ಚೋಪ್ರಾ ತಿಳಿಸಿದರು.

ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಬಲಿಷ್ಠ ಏಕದಿನ ತಂಡವನ್ನು ಹೊಂದಿದೆ ಮತ್ತು 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ನಾಲ್ಕು ಸೆಮಿಫೈನಲಿಸ್ಟ್‌ಗಳಲ್ಲಿ ಒಂದಾಗಿರಲಿದೆ ಎಂದು ಆಕಾಶ್ ಚೋಪ್ರಾ ಹೆಸರಿಸಿದ್ದಾರೆ.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪುವ ಇತರ ಎರಡು ತಂಡಗಳಾಗಿವೆ ಎಂದು ಆಕಾಶ್ ಚೋಪ್ರಾ ಭವಿಷ್ಯ ನುಡಿದಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಫೈನಲ್‌ ತಲುಪಲಿವೆ ಎಂದೂ ತಿಳಿಸಿದ್ದಾರೆ.

"ಮುಂಚೂಣಿಯಲ್ಲಿರುವ ಭಾರತವನ್ನು ಹೊರತುಪಡಿಸಿ, ಸೆಮಿಫೈನಲ್ ತಲುಪುವ ಇತರ ಮೂರು ತಂಡಗಳಲ್ಲಿ ಪಾಕಿಸ್ತಾನವೂ ಒಂದು. ಉಳಿದೆರಡು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು. ಈ ನಾಲ್ಕು ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಆಡುವುದನ್ನು ನೀವು ನೋಡಬಹುದು ಎಂದು ನಾನು ಭಾವಿಸುತ್ತೇನೆ," ಎಂದು ಭಾರತದ ಮಾಜಿ ಕ್ರಿಕೆಟಿಗ ಅಭಿಪ್ರಾಯಪಟ್ಟರು.

"ಅಲ್ಲದೆ, ಇವರ ಪೈಕಿ ಯಾರಾದರೂ ಸೆಮಿಫೈನಲ್‌ನಲ್ಲಿ ಆಡದಿದ್ದರೆ ನನಗೆ ಸ್ವಲ್ಪ ಆಶ್ಚರ್ಯವಾಗುತ್ತದೆ. ಆದರೂ ವಿಶ್ವಕಪ್ ನಡೆದಾಗ ನಿಮಗೆ ಸ್ವಲ್ಪ ಆಶ್ಚರ್ಯವಾಗಬಹುದು. ನ್ಯೂಜಿಲೆಂಡ್ ತಂಡವೂ ಬರಬಹುದು ಎಂದು ಹೇಳುತ್ತಿದ್ದಾರೆ ಮತ್ತು ಇದು ಐಸಿಸಿ ಪಂದ್ಯಾವಳಿ ಆಗಿದೆ," ಎಂದರು.

2023ರ ಐಸಿಸಿ ವಿಶ್ವಕಪ್ ಪಂದ್ಯಾವಳಿಗೆ ಅಕ್ಟೋಬರ್ 5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅದ್ಧೂರಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿ ರನ್ನರ್-ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ನವೆಂಬರ್ 19ರಂದು ಇದೇ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Story first published: Friday, September 22, 2023, 12:06 [IST]
Other articles published on Sep 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+