ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ vs ಆಸ್ಟ್ರೇಲಿಯಾ: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಫಿಂಚ್ ಮಹತ್ವದ ಮೈಲಿಗಲ್ಲು

Aaron Finch Second-fastest After Virat Kohli To Score 2000 T20i Runs

ಆಸ್ಟ್ರೇಲಿಯಾ ಸೀಮಿತ ಓವರ್‌ಗಳ ನಾಯಕ ಆ್ಯರೋನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಅತ್ಯಂತ ವೇಗವಾಗಿ 2000 ರನ್ ದಾಖಲಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಆ್ಯರೋನ್ ಫಿಂಚ್. ಮೊದಲ ಸ್ಥಾನದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಇದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆ್ಯರೋನ್ ಫಿಂಚ್ ಈ ಸಾಧನೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಫಿಂಚ್ 32 ಎಸೆತಗಳನ್ನು ಎದುರಿಸಿದ್ದು 46 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 1 ಸಿಕ್ಸ್ ಒಳಗೊಂಡಿತ್ತು. ಅದರೆ ಈ ಪಂದ್ಯವನ್ನು ಆಸ್ಟ್ರೇಲಿಯಾ 2 ರನ್‌ಗಳ ಅಂತರದಿಂದ ಇಂಗ್ಲೆಂಡ್‌ಗೆ ಶರಣಾಗಿದೆ.

ಮಲನ್ ಅರ್ಧ ಶತಕ, ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ಗೆ ರೋಚಕ ಜಯಮಲನ್ ಅರ್ಧ ಶತಕ, ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ಗೆ ರೋಚಕ ಜಯ

ಆ್ಯರೋನ್ ಫಿಂಚ್ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 2000 ರನ್‌ಗಳ ಸಾಧನೆಯನ್ನು ಮಾಡಲು 62 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಕೇವಲ 56 ಇನ್ನಿಂಗ್ಸ್‌ಗಳಲ್ಲಿ ಈ ಗಡಿಯನ್ನು ತಲುಪು ವೇಗವಾಗಿ 2 ಸಾವಿರ ರನ್ ಗಳಿಸಿದ ಆಟಗಾರನೆಂಬ ಖ್ಯಾತಿಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 2000 ರನ್‌ಗಳಿಸಿದ ಸಾಧನೆ ಮಾಡಿದ 10ನೇ ಆಟಗಾರನಾಗಿದ್ದಾರೆ ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್. ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಯಾನ್ ಮಾರ್ಗನ್, ಹಾಗೂ ಡೇವಿಡ್ ವಾರ್ನರ್ ಸಾಲಿಗೆ ಈಗ ಆ್ಯರೋನ್ ಫಿಂಚ್ ಕೂಡ ಸೇರ್ಪಡೆಗೊಂಡಿದ್ದಾರೆ.

ಐಪಿಎಲ್ 2020: 2 ತಂಡಗಳು ಬಾಗಿಲು ಬಡಿದರೂ ಬಾಂಗ್ಲಾ ವೇಗಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾಗ್ಯವಿಲ್ಲ!ಐಪಿಎಲ್ 2020: 2 ತಂಡಗಳು ಬಾಗಿಲು ಬಡಿದರೂ ಬಾಂಗ್ಲಾ ವೇಗಿಗೆ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾಗ್ಯವಿಲ್ಲ!

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕಳೆದುಕೊಂಡಿದೆ. ಇಂಗ್ಲೆಂಡ್ ಈಡಿದ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಒಂದು ಹಂತದಲ್ಲಿ ಗೆಲುವಿಗೆ 30 ಎಸೆತಗಳಲ್ಲಿ 36 ರನ್‌ಗಳಷ್ಟೇ ಅಗತ್ಯವಿತ್ತು. ಆದರೆ ದಿಢೀರ್ ಕುಸಿತವನ್ನು ಕಂಡ ಆಸ್ಟ್ರೇಲಿಯಾ 2 ರನ್‌ಗಳ ಸೋಲು ಕಂಡಿತು.

Story first published: Saturday, September 5, 2020, 16:40 [IST]
Other articles published on Sep 5, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X