ಗೆಳೆಯ ಎಬಿಡಿ ನೀಡಿದ ಸಲಹೆಯನ್ನು ಬಹಿರಂಗಪಡಿಸಿದ ನಾಯಕ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಐದು ಪಂದ್ಯಗಳ ಟಿ20 ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಲು ಸಾಧ್ಯವಾಗಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಚೊಚ್ಚಲ ಪಂದ್ಯವನ್ನಾಡಿದ ಇಶಾನ್ ಕಿಶನ್ ನೀಡಿದ ಅರ್ಧ ಶತಕದ ಆಟ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು.
ಮೊದಲ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದ ನಂತರ ಕೊಹ್ಲಿ ಆಟದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಅಜೇಯ 73 ರನ್‌ಗಳ ಮೂಲಕ ಟೀಕಾಕಾರರಿಗೆ ಬ್ಯಾಟ್‌ನಿಂದಲೇ ಕೊಹ್ಲಿ ಉತ್ತರವನ್ನು ನೀಡಿದರು. ಆದರೆ ಪಂದ್ಯದ ಮುಕ್ತಾಯದ ನಂತರ ಮೊದಲ ಪಂದ್ಯದ ನಂತರ ಗೆಳೆಯ ಎಬಿ ಡಿವಿಲಿಯರ್ಸ್ ಜೊತೆಗೆ ಆಡಿದ ಮಾತುಕತೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಮಾತುಕತೆಯ ವಿಚಾರ ತಿಳಿಸಿದ ಕೊಹ್ಲಿ
ಪಂದ್ಯದ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಹ ಆಟಗಾರ ಎಬಿ ಡಿವಿಲಿಯರ್ಸ್ ಅವರೊಂದಿಗೆ ವಿಶೇಷ ಚರ್ಚೆಯನ್ನು ನಡೆಸಿದ ಬಗ್ಗೆ ಬಹಿರಂಗಪಡಿಸಿದರು. ಇದರ ಜೊತೆಗೆ ಪತ್ನಿ ಅನುಷ್ಕಾ ಶರ್ಮಾ ಹಾಗೂ ತಂಡದ ಮ್ಯಾನೇಜ್‌ಮೆಂಟ್ ಏಕಾಗ್ರಥೆಯನ್ನು ಪಡೆದುಕೊಳ್ಳಲು ಸಹಕಾರಿಯಾಯಿತು ಎಂದಿದ್ದಾರೆ.

ಕೇವಲ ಚೆಂಡನ್ನು ಗಮನಿಸು
"ನಾನು ಈ ಪಂದ್ಯಕ್ಕೂ ಮುನ್ನ ಎಬಿ ಡಿವಿಲಿಯರ್ಸ್ ಜೊತೆಗೆ ವಿಶೇಷ ಚರ್ಚೆಯನ್ನು ನಡೆಸಿದೆ. ಆತ ನನಗೆ 'ಕೇವಲ ಚೆಂಡನ್ನು ಗಮನಿಸು' ಎಂದು ಸೂಚಿಸಿದರು. ನಾನು ಅದನ್ನೇ ಮಾಡಿದ್ದೇನೆ" ಎಂದು ವಿರಾಟ್ ಕೊಹ್ಲಿ ಎಬಿ ಡಿವಿಲಿಯರ್ಸ್ ಸಲಹೆಯನ್ನು ಬಹಿರಂಗಪಡಿಸಿದರು.

ಇಶಾನ್ ಕಿಶನ್ ಬಗ್ಗೆ ಮೆಚ್ಚುಗೆಯ ಮಾತು
ಇನ್ನು ಇದೇ ಸಂದರ್ಭದಲ್ಲಿ ನಾಯಕ ವಿರಾಟ್ ಕೊಹ್ಲಿ ಚೊಚ್ಚಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಅರ್ಧ ಶತಕವನ್ನು ಬಾರಿಸಿದ ಇಶಾನ್ ಕಿಶನ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಿಖರ್ ಧವನ್ ಹಾಗೂ ಅಕ್ಷರ್ ಪಟೇಲ್‌ಗೆ ಎರಡನೇ ಪಂದ್ಯದಲ್ಲಿ ವಿಶ್ರಾಂತಿಯನ್ನು ನೀಡಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅವನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಸೂರ್ಯಕುಮಾರ್ ಯಾದವ್‌ಗೆ ಬ್ಯಾಟಿಂಗ್ ಮಾಡುವ ಅವಕಾಶ ಎರಡನೇ ಪಂದ್ಯದಲ್ಲಿ ದೊರೆತಿರಲಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications