Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಎಬಿಡಿ ವಿಲಿಯರ್ಸ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ, ಆಗಸ್ಟ್ ನಲ್ಲಿ ನಿರ್ಧಾರ

ಕಾರ್ಡಿಫ್, ಜೂನ್ 27 : ದಕ್ಷಿಣ ಆಫ್ರಿಕಾದ ನಾಯಕ ಎಬಿಡಿ ವಿಲಿಯರ್ಸ್ ಟೆಸ್ಟ್ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸುವ ತೀರ್ಮಾನ ಕೈಗೊಂಡಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಆತಿಥೇಯ ಇಂಗ್ಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಸೋಲನುಭವಿಸಿದ ಬಳಿಕ ಮಾತನಾಡಿದ 33 ವರ್ಷದ ವಿಲಿಯರ್ಸ್, ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಆಗಸ್ಟ್ ನಲ್ಲಿ ತಮ್ಮ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

AB de Villiers Contemplating Retirement from Test Cricket: Reports

ಸೆಪ್ಟೆಂಬರ್‌ ನಲ್ಲಿ ಬಾಂಗ್ಲಾದೇಶ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು ಅದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯನ್ನು ಭೇಟಿ ಮಾಡಿ, ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದರು.

ಮತ್ತೊಂದೆಡೆ ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಬಳಿಕ ಎಬಿಡಿ ನಾಯಕತ್ವದ ಬಗ್ಗೆಯು ಹಿರಿಯ ಕ್ರಿಕೆಟಿಗರೂ ಪ್ರಶ್ನೆ ಮಾಡಲಾರಂಭಿಸಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+