Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಆರ್‌ಸಿಬಿ ಬಯೋಬಬಲ್ ಸೇರಿಕೊಂಡ ಎಬಿ ಡಿವಿಲಿಯರ್ಸ್

AB de Villiers lands in Chennai to break the internet ahead of IPL 2021, RCB tweets to confirm

ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಚೆನ್ನೈನಲ್ಲಿ ಆರ್‌ಸಿಬಿ ತಂಡದ ಬಯೋಬಬಲ್‌ಅನ್ನು ಚೆನ್ನೈನಲ್ಲಿ ಕೂಡಿಕೊಂಡಿದ್ದಾರೆ. ಈ ವಿಚಾರವನ್ನು ಆರ್‌ಸಿಬಿ ತಂಡದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಖಚಿತಪಡಿಸಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಉದ್ಘಾಟನಾ ಪಂದ್ಯದಲ್ಲಿ ಆಡಲಿದ್ದು ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದೆ. ಏಪ್ರಿಲ್ 9 ರಂದು ನಡೆಯುವ ಈ ಪಂದ್ಯದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ. ಹೀಗಾಗಿ ಆರ್‌ಸಿಬಿಯ ಎಲಲ್ಆ ಆಟಗಾರರು ಚೆನ್ನೈನಲ್ಲಿ ಅಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎಬಿ ಡಿವಿಲಿಯರ್ಸ್ ಆರ್‌ಸಿಬಿ ತಂಡದ ಬಯೋಬಬಲ್‌ ಸೇರಿಕೊಳ್ಳುವದನ್ನು ಆರ್‌ಸಿಬಿ ಟ್ವಿಟ್ಟರ್‌ನಲ್ಲಿ ವಿಭಿನ್ನವಾಗಿ ಘೋಷಿಸಿದೆ. "ಬ್ರೇಕಿಂಗ್‌ ದಿ ಇಂಟರ್‌ನೆಟ್: ವೈಮಾನಿಕ ನೌಕೆ ಬಂದಿಳಿದೆ. ಚೆನ್ನೈನಲ್ಲಿ ಎಬಿ ಡಿವಿಲಿಯರ್ಸ್ ಆರ್‌ಸಿಬಿ ತಂಡದ ಬಯೋಬಬಲ್‌ಅನ್ನು ಸೇರಿಕೊಂಡಿದ್ದಾರೆ" ಎಂದು ಡಿವಿಲಿಯರ್ಸ್ ಅವರ ಫೋಟೋ ಜೊತೆಗೆ ಅವರ ಕಿಟ್ ಬ್ಯಾಗ್‌ನ ಫೋಟೋವನ್ನು ಕೂಡ ಹಂಚಿಕೊಂಡಿದೆ.

ಈ ದಿನದಂತ್ಯದಲ್ಲಿ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಆರ್‌ಸಿಬಿ ತಂಡದ ಕ್ಯಾಂಪ್‌ಅನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಆದರೆ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿ ಅಂತ್ಯವಾದ ಬಳಿಕ ವಿರಾಟ್ ಕೊಹ್ಲಿ ಬಯೋಬಬಲ್‌ನಿಂದ ಹೊರಬಂದಿದ್ದಾರೆ ಎಂಬ ಮಾಹಿತಿಯಿದ್ದು ಅವರು ಕಡ್ಡಾಯ ಕ್ವಾರಂಟೈನ್ ಮುಗಿಸಿ ಆರ್‌ಸಿಬಿ ಬಯೋಬಬಲ್‌ಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈ ಬಾರಿಯ ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಜೊತೆಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಆರ್‌ಸಿಬಿ ತಂಡದಲ್ಲಿದ್ದಾರೆ. ಈಗಾಗಲೇ ಚೆನ್ನೈಗೆ ಬಂದಿರುವ ಮ್ಯಾಕ್ಸ್‌ವೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ.

Story first published: Thursday, April 1, 2021, 13:34 [IST]
Other articles published on Apr 1, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+