ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡಕ್ಕೆ ಮರಳುವ ಮುನ್ಸೂಚನೆ ನೀಡಿದ ಎಬಿ ಡಿ ವಿಲಿಯರ್ಸ್
ಎಬಿ ಡಿವಿಲಿಯರ್ಸ್ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ತಮ್ಮದೇ ಛಾಪನ್ನು ಮೂಡಿಸಿರುವ ಆಟಗಾರ. ಆದರೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಡಿವಿಲಿಯರ್ಸ್ ನಿವೃತ್ತಿಯನ್ನು ಘೋಷಿಸಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಆದರೆ ಡಿವಿಲಿಯರ್ಸ್ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಮುನ್ಸೂಚನೆ ನೀಡಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಹೇಳಿರುವ ಎಬಿ ಡಿವಿಲಿಯರ್ಸ್ ಬಳಿಕ ಟಿ20 ಲೀಗ್‌ಗಳತ್ತ ಸಂಪೂರ್ಣ ಗಮನವನ್ನು ನೀಡಿದ್ದರು. ಇದೇ ಮೊದಲ ಬಾರಿಗೆ ಡಿ ವಿಲಿಯರ್ಸ್ ಬಿಗ್ ಬ್ಯಾಷ್ ಲೀಗ್‌ನಲ್ಲೂ ಪಾಲ್ಗೊಂಡಿದ್ದಾರೆ. ಇಂದು ಬಿಗ್‌ಬ್ಯಾಷ್‌ನಲ್ಲಿ ಪದಾರ್ಪಣಾ ಪಂದ್ಯವನ್ನು ಆಡಿದ್ದಾರೆ ಎಬಿ ಡಿವಿಲಿಯರ್ಸ್.
ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಟೂರ್ನಿಯ ಮೊದಲ ಪಂದ್ಯದಲ್ಲಿ ಡಿವಿಲಿಯರ್ಸ್ 40 ರನ್ ಸಿಡಿಸಿ ತಮ್ಮ ತಂಡದ ಗೆಲುವಿಗೆ ಕಾರಣರಾದರು. ಈ ಪಂದ್ಯದ ಬಳಿಕ ಎಬಿಡಿ ಮಾತನಾಡುತ್ತಾ ದಕ್ಷಿಣ ಆಫ್ರಿಕಾ ತಂಡಕ್ಕೆ ಮರಳುವ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಎಬಿಡಿ ಹೇಳಿದ್ದೇನು?
ದಕ್ಷಿಣ ಆಫ್ರಿಕಾದ ಲೆಜೆಂಡರಿ ಆಟಗಾರ ಡಿವಿಲಿಯರ್ಸ್ ತಂಡಕ್ಕೆ ಮರಳುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, " ನಾನು ಅದನ್ನು ಇಷ್ಟ ಪಡುತ್ತೇನೆ. ಅದು ನಿಜವಾಗ ಬೇಕಿದ್ದರೆ ಸಾಕಷ್ಟು ಬೆಳವಣಿಗೆಗಳು ನಡೆಯಬೇಕಿದೆ ಎಂದು ಹೇಳಿದ್ದಾರೆ. ಈ ಮೂಲಕ ಕಳೆದ ಕೆಲ ತಿಂಗಳಿನಿಂದ ಕೇಳಿ ಬರುತ್ತಿದ್ದ ಸುದ್ದಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾಗವಹಿಸುವುದು ಬಹುತೇಕ ಖಚಿತ ಎನ್ನಲಾಗಿದೆ.

ಸುಳಿವು ನೀಡಿದ್ದ ಬೌಷರ್:
ಇತ್ತೀಚೆಗಷ್ಟೇ ನೇಮಕವಾಗಿರುವ ದಕ್ಷಿಣ ಆಫ್ರಿಕಾ ತಂಡದ ಕೋಚ್ ಮಾರ್ಕ್ ಬೌಷರ್ ಈ ವಿಚಾರವಾಗಿ ಹೇಳಿಕೆಯನ್ನು ನೀಡಿದ್ದರು. ವಿದಾಯ ಹೇಳಿರುವ ಡಿವಿಲಿಯರ್ಸ್ ಮರಳಿ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳಬೇಕು ಎಂದಿದ್ದರು. ಈ ನಿಟ್ಟಿನಲ್ಲಿ ಅವರ ಮನವೊಲಿಸುವ ಪ್ರಯತ್ನ ಮಾಡಬೇಕಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್ ಕೀಪರ್ ಹೇಳಿಕೆಯನ್ನು ನೀಡಿದ್ದರು. ಇದಕ್ಕೆ ದಕ್ಷಿಣ ಆಫ್ರಿಕಾದ ನಾಯಕ ಫಾಪ್ ಡು ಪ್ಲೆಸಿಸ್ ಕೂಡ ಧ್ವನಿಗೂಡಿಸಿದ್ದರು.

ಎರಡು ವರ್ಷದ ಹಿಂದೆ ಎಬಿಡಿ ನಿವೃತ್ತಿ
35 ವರ್ಷದ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕನೂ ಆಗಿರುವ ಡಿವಿಲಿಯರ್ಸ್ ದಕ್ಷಿಣ ಅಫ್ರಿಕಾದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಪ್ರಮುಖರಾಗಿದ್ದಾರೆ. 2018ರ ಮಾರ್ಚ್ ತಿಂಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಡಿವಿಲಿಯರ್ಸ್ ವಿದಾಯವನ್ನು ಹೇಳಿದ್ದಾರೆ.

ಲೀಗ್‌ಗಳತ್ತ ಗಮನ ಹರಿಸಿದ್ದ ಎಬಿಡಿ
ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಾದ ಬಳಿಕ ಎಬಿಡಿ ಲೀಗ್ ಟೂರ್ನಿಗಳತ್ತ ಗಮನ ಹರಿಸಿದ್ದಾರೆ. ಐಪಿಎಎಲ್‌ನಲ್ಲಿ ಆರ್‌ಸಿಬಿ ಪರವಾಗಿ ಕಣಕ್ಕಳಿಯುತ್ತಿರುವ ಡಿವಿಲಿಯರ್ಸ್ ಕೆರೆಬಿಯನ್ ಕ್ರಿಕೆಟ್ ಲೀಗ್, ಬಿಗ್ ಬ್ಯಾಷ್‌ನಲ್ಲೂ ಆಡುತ್ತಿದ್ದಾರೆ ಈ ಮೂಲಕ ವಿಶ್ವದ ಮೂಲೆ ಮೂಲೆಗಳಲ್ಲೂ ತಮ್ಮ ಅಭಿಮಾನಿಗಳನ್ನು ಹೆಚ್ಚಿಸಿಕೊಂಡಿದ್ದಾರೆ. ಆದರೆ ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ತಂಡದಲ್ಲೂ ಎಬಿಡಿ ಕಾಣಲು ಅಭಿಮಾನಿಗಳು ತವಕಿಸುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications