ಐಪಿಎಲ್ 2021: ಆರ್‌ಸಿಬಿ ಪರ ಕಣಕ್ಕಿಳಿಯಲು ಭರ್ಜರಿ ಸಿದ್ಧತೆ ನಡೆಸುತ್ತಿರುವ ಎಬಿ ಡಿವಿಲಿಯರ್ಸ್

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ದಾಂಡಿಗ ಎಬಿ ಡಿವಿಲಿಯರ್ಸ್ ಮುಂದಿನ ಐಪಿಎಲ್ ಆವೃತ್ತಿಗೆ ತಮ್ಮ ಸಿದ್ಧತೆಯನ್ನು ಆರಂಭಿಸಿದ್ದಾರೆ. ಐಪಿಎಲ್ 14ನೇ ಆವೃತ್ತಿಯಲ್ಲಿ ಪಾಳ್ಗೊಳ್ಳುವ ಮುನ್ನ ಎಬಿಡಿ ವಿಲಿಯರ್ಸ್ ದಕ್ಷಿಣ ಆಫ್ರಿಕಾದಲ್ಲಿ ನೆಟ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಮಂಗಳವಾರದಿಂದ ಸಂಪೂರ್ಣವಾಗಿ ಅಭ್ಯಾಸದಲ್ಲಿ ಎಬಿ ಡಿವಿಲಿಯರ್ಸ್ ತೊಡಗಿಸಿಕೊಂಡಿದ್ದಾರೆ. ಬುಧವಾರದ ನೆಟ್ ಅಭ್ಯಾಸದಲ್ಲಿ ಎಬಿಡಿ ತಮ್ಮ ಐಫೋನ್‌ನಲ್ಲಿ ಚಿತ್ರೀಕರಿಸುತ್ತಿದ್ದರು. ಈ ಸಂದರ್ಭದಲ್ಲಿ ಸ್ಟ್ರೈಟ್‌ಹಿಟ್ ಹೊಡೆತವೊಂದು ಎಬಿ ಡಿವಿಲಿಯರ್ಸ್ ಮೊಬೈಲ್‌ಗೆ ಬಡಿದು ಬೀಳಿಸಿದೆ. ಇದರ ವಿಡಿಯೋವನ್ನು ಎಬಿ ಡಿವಿಲಿಯರ್ಸ್ ಹಂಚಿಕೊಂಡಿದ್ದಾರೆ. ಇದಕ್ಕೆ "ಐಫೋನ್ ಔಟ್" ಎಂದು ಅಡಿ ಬರಹವನ್ನು ನೀಡಿದ್ದಾರೆ.
ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಈವರೆಗೆ 156 ಇನ್ನಿಂಗ್ಸ್‌ಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ ಅವರು 4849 ರನ್‌ಗಳಿಸಿದ್ದಾರೆ. 151.91ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿರುವುದು ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ನಿಡಿದ ಅಬ್ಬರದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.
14ನೇ ಆವೃತ್ತಿಯ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಮುನ್ನಡೆಸುತ್ತಿರುವ ಆರ್‌ಸಿಬಿ ತಂಡದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಬಾರಿ ವಿರಾಟ್ ಕೊಹ್ಲಿ ಬಳಗಕ್ಕೆ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಮಧ್ಯಮ ಕ್ರಮಾಂಕ ಸಾಕಷ್ಟು ಬಲಿಷ್ಠವಾಗಿದೆ.
ಕಳೆದ ಬಾರಿಯ ಆವೃತ್ತಿಯಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನವನ್ನು ನೀಡಿದ್ದು ಟಾಪ್ 4ರಲ್ಲಿ ಸ್ಥಾನವನ್ನು ಪಡೆದುಕೊಂಡಿತ್ತು. ಈ ಬಾರಿಯ ಆವೃತ್ತಿಯಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನವನ್ನು ನೀಡುವ ನಿರೀಕ್ಷೆಯಿದೆ. ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಸಿದ್ದತೆಯಲ್ಲಿದ್ದು ಐದು ಪಂದ್ಯಗಳ ಟಿ20 ಸರಣಿಯ ಬಳಿಕ 3 ಏಕದಿನ ಪಂದ್ಯಗಳಲ್ಲಿ ಭಾಗಿಯಾಗಲಿದೆ. ಅದಾದ ಬಳಿಕ ಐಪಿಎಲ್ ಶಿಬಿರಕ್ಕೆ ಸೇರಿಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications