ಎಬಿಡಿಯಿಂದ ಮತ್ತೊಂದು ವಿಶೇಷ ದಾಖಲೆ: ಈತ ಸಿಡಿದ್ರೆ ಎದುರಾಳಿ ಧೂಳೀಪಟ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಮಿಂಚಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೂಪರ್‌ಸ್ಟಾರ್ ಎಬಿ ಡಿ ವಿಲಿಯರ್ಸ್ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಸ್ಫೋಟಕ ಆಟದ ಜೊತೆಗೆ ಸ್ಥಿರ ಪ್ರದರ್ಶನಕ್ಕೆ ಹೆಸರಾಗಿರುವ ಎಬಿಡಿ 25 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅತಿ ಹೆಚ್ಚು ಅರ್ಧಶತಕ ಪೂರೈಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ನಾಯಕ ಡೇವಿಡ್ ವಾರ್ನರ್ 12 ಬಾರಿ 25 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ ವಾರ್ನರ್ ಜೊತೆಗೆ ಸಮನಾಗಿ ಎಬಿ ಡಿ ವಿಲಿಯರ್ಸ್ ಕೂಡ 12 ಬಾರಿ ಈ ಸಾಧನೆ ಮಾಡಿದ್ದಾರೆ.
ಸನ್‌ರೈಸರ್ಸ್ ಹೈದ್ರಾಬಾದ್ ತಂಡ ಕ್ರಿಸ್‌ಗೇಲ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಕಿರಾನ್ ಪೊಲಾರ್ಡ್ ಏಳು ಬಾರಿ ಈ ಸಾಧನೆ ಮಾಡಿದ್ದು, ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಆರು ಅರ್ಧಶತಕವನ್ನು 5 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಪೂರೈಸಿದ್ದಾರೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧ ಅಬ್ಬರದ ಆಟವಾಡಿದ ಎಬಿಡಿ ಕೇವಲ 22 ಎಸೆತಗಳಲ್ಲಿ ಆರು ಭರ್ಜರಿ ಸಿಕ್ಸರ್‌ಗಳು ಹಾಗೂ 1 ಬೌಂಡರಿ ಜೊತೆಗೆ 55ರನ್ ಸಿಡಿಸಿ ಆರ್‌ಸಿಬಿಗೆ ರೋಚಕ ಗೆಲುವು ತಂದುಕೊಟ್ಟರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications