IND vs ENG T20: ಗುರು ಯುವರಾಜ್ ಸಿಂಗ್ ದಾಖಲೆ ಮುರಿದ ಅಭಿಷೇಕ್ ಶರ್ಮಾ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ 7 ವಿಕೆಟ್ ಜಯ ಸಾಧಿಸಿದೆ. ಅಲ್ಲದೆ ಐದು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವರುಣ್ ಚಕ್ರವರ್ತಿ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಪ್ರದರ್ಶನ ನೀಡಿದರು.
ಮೊದಲ ಪಂದ್ಯದಲ್ಲಿ ಮೂರು ವಿಕೆಟ್ ಪಡೆದ ವರುಣ್ ಚಕ್ರವರ್ತಿಯವರಿಗೆ ಪಂದ್ಯ ಶ್ರೇಷ್ಠ ಗರಿ ಸಂದಿದೆ. ಆದರೆ ಅಭಿಷೇಕ್ ಶರ್ಮಾ ಅವರ ಸಾಧನೆ ಸಹ ಕಮ್ಮಿ ಏನು ಇರಲಿಲ್ಲ. ಅಭಿಷೇಕ್ ಶರ್ಮಾ ತಮ್ಮ ಧಮಾಕೆದಾರ್ ಬ್ಯಾಟಿಂಗ್‌ನಿಂದ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಿದರು. ಬೌಂಡರಿ, ಸಿಕ್ಸರ್‌ಗಳನ್ನು ಬಾರಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ಅಲ್ಲದೆ ತಮ್ಮದೇ ಗುರುವಿನ ದಾಖಲೆಯನ್ನು ಅಳಸಿಹಾಕಿದರು.

ಈಡನ್ ಗಾರ್ಡ್‌ನಲ್ಲಿ ಅಬ್ಬರ
ಗುರಿಯನ್ನು ಹಿಂಬಾಲಿಸಿದ ಭಾರತ ಸಾಧರಣ ಆರಂಭ ಕಂಡಿತು. ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಜೋಡಿ ತಂಡಕ್ಕೆ 41 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಸೂರ್ಯಕುಮಾರ್ ಯಾದವ್ ಸಹ ಬಂದು ಹೋಗುವ ಸಂಪ್ರದಾಯ ಮುಗಿಸಿದರು. ಆಗ ಒಂದು ತುದಿಯನ್ನು ಗಟ್ಟಿಯಾಗಿ ಕಚ್ಚಿಕೊಂಡಿದ್ದು ಅಭಿಷೇಕ್ ಶರ್ಮಾ. ಇಂಗ್ಲೆಂಡ್ ಬೌಲರ್‌ಗಳ ಪ್ರತಿ ಸವಾಲಿಗೆ, ತಕ್ಕ ಉತ್ತರ ನೀಡುತ್ತಾ ಸಾಗಿದ ಅಭಿಷೇಕ್ ಈಡನ್ ಗಾರ್ಡನ್ ಅಂಗಳದಲ್ಲಿ ಕ್ಲಾಸಿಕ್ ಇನಿಂಗ್ಸ್ ಕಟ್ಟಿದರು. ಇವರು ಕೇವಲ 34 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಾಯದಿಂದ 79 ರನ್ ಬಾರಿಸಿ ಔಟ್ ಆದರು.
ಗುರುವಿನ ದಾಖಲೆ ಮುರಿದ ಅಭಿಷೇಕ್
ಇಂಗ್ಲೆಂಡ್ ವಿರುದ್ಧದ ಅಮೋಘ ಇನಿಂಗ್ಸ್ ಮೂಲಕ ಅಭಿಷೇಕ್ ಶರ್ಮಾ ಹೊಸ ದಾಖಲೆಯನ್ನು ಬರೆದಿದ್ದಾರೆ. ಅಭಿಷೇಕ್ ಶರ್ಮಾ ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಅಳಿಸಿದ್ದಾರೆ. ಅಭಿಷೇಕ್ ಶರ್ಮಾ, ಯುವರಾಜ್ ಗರಡಿಯಲ್ಲಿ ಪಳಗಿದ ಪ್ರತಿಭೆ ಈಗ ಗುರುವಿನ ದಾಖಲೆಯನ್ನೇ ಅಳಿಸಿ ಹಾಕಿದ್ದಾರೆ. ಹೌದು ಬುಧವಾರ ನಡೆದ ಪಂದ್ಯದಲ್ಲಿ ಅಭಿಷೇಕ್ 8 ಸಿಕ್ಸರ್ ಬಾರಿಸುವ ಮೂಲಕ ಹೊಸ ಇತಿಹಾಸ ಬರೆದರು. ಅಲ್ಲದೆ ಯುವಿ ದಾಖಲೆಯನ್ನು ಅಳಿಸಿ ಹಾಕಿದರು.

ಇಂಗ್ಲೆಂಡ್ ವಿರುದ್ಧ ಯುವರಾಜ್ 2007ರಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ 6 ಸಿಕ್ಸರ್ ಬಾರಿಸಿದ್ದರು. ಇದು ಭಾರತೀಯ ಬ್ಯಾಟರ್ ಒಬ್ಬ ಇಂಗ್ಲೆಂಡ್ ವಿರುದ್ಧ ದಾಖಲಿಸಿದ್ದ ಗರಿಷ್ಠ ಸಿಕ್ಸರ್ ಆಗಿತ್ತು. ಈಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಅಳಸಿಹಾಕಿದ್ದಾರೆ. ಅಭಿಷೇಕ್ ಮೊದಲ ಪಂದ್ಯದಲ್ಲಿ 8 ಸಿಕ್ಸರ್ ಸಿಡಿಸಿದ್ದರು.
ಪಂದ್ಯದ ಬಳಿಕ ಮಾತನಾಡಿರುವ ಅಭಿಷೇಕ್ ಶರ್ಮಾ ಕೋಚ್ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಸಹಜ ಆಟವನ್ನು ಆಡಲು ನಮಗೆ ಸೂಚಿಸಿದರು. ಇವರಿಬ್ಬರೂ ನಮ್ಮಂತಹ ಯುವ ಆಟಗಾರರೊಂದಿಗೆ ಮಾತನಾಡುವ ರೀತಿ ಶ್ಲಾಘನೀಯ. ಅದು ಡಬಲ್ ಪೇಸ್ ಪಿಚ್ ಎಂದು ಈ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications