ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ, ತಮ್ಮ ಅಮೋಘ ಫಾರ್ಮ್ ಮುಂದುವರೆಸಿದ್ದಾರೆ. ಇವರು ಯುಎಇನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಸೂಪರ್ 4 ಹಂತದ ಪಂದ್ಯದಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಸರಣಿಯಲ್ಲಿ ಇವರನ್ನು ಕಟ್ಟಿ ಹಾಕುವಲ್ಲಿ ಬೌಲರ್‌ಗಳು ವಿಫಲರಾಗಿದ್ದಾರೆ. ಈಗ ಅಭಿಷೇಕ್ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಆ ಬಗ್ಗೆ ವರದಿ ಇಲ್ಲಿದೆ.
ಬುಧವಾರ ಬಾಂಗ್ಲಾದೇಶದ ವಿರುದ್ಧ ಆರಂಭದಲ್ಲಿ ಸಮಯೋಚಿತ ಆಟವನ್ನು ಆಡಿದ ಅಭಿಷೇಕ್, ಬಳಿಕ ಗೇರ್ ಶಿಫ್ಟ್ ಮಾಡಿದರು. ಇವರು ಈ ಪಂದ್ಯದಲ್ಲಿ ಮುಗಿಲೆತ್ತರದ ಸಿಕ್ಸರ್‌ಗಳನ್ನು ಬಾರಿಸಿ ಸದ್ದು ಮಾಡಿದ್ದಾರೆ. ಶುಕ್ರವಾರ ಟೀಮ್ ಇಂಡಿಯಾ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದೆ. ಈ ವೇಳೆ ಅಭಿಷೇಕ್ ಶರ್ಮಾ ಅವರ ಮೇಲೆ ಎಲ್ಲರ ಗಮನ ಸೆಳೆದಿದೆ.

ಪ್ರಸಕ್ತ ಏಷ್ಯಾ ಕಪ್ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಆಡಿದ 5 ಪಂದ್ಯಗಳಲ್ಲಿ 49.60ರ ಸರಾಸರಿಯಲ್ಲಿ 248 ರನ್ ಸಿಡಿಸಿದ್ದಾರೆ. ಈ ವೇಳೆ 2 ಅರ್ಧಶತಕ ಬಾರಿಸಿದ್ದಾರೆ. ಇವರು 23 ಬೌಂಡರಿ, 17 ಸಿಕ್ಸರ್ ಸಿಡಿಸಿದ್ದು, ಅಬ್ಬರಿಸಿದ್ದಾರೆ. ಈ ಮೂಲಕ ಪ್ರಸಕ್ತ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಹಾಗೂ ಫೈನಲ್ ವಿರುದ್ಧದ ಪಂದ್ಯದಲ್ಲಿ ಇವರು 34 ರನ್ ಬಾರಿಸುತ್ತಲೇ ದೊಡ್ಡ ದಾಖಲೆಯನ್ನು ನಿರ್ಮಿಸಲಿದ್ದಾರೆ.
ಏಷ್ಯಾ ಕಪ್ ಟಿ20 ಸರಣಿಯ ಒಂದೇ ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಸದ್ಯ ಪಾಕಿಸ್ತಾನದ ಸ್ಟಾರ್ ಆಟಗಾರ ಮೊಹಮ್ಮದ್ ರಿಜ್ವಾನ್ ಅವರ ಹೆಸರನನಲ್ಲಿದೆ. ಇವರು 2022 ರ ಆವೃತ್ತಿಯಲ್ಲಿ ಆರು ಪಂದ್ಯಗಳಲ್ಲಿ 281 ರನ್ ಸಿಡಿಸಿದ್ದಾರೆ. ಇನ್ನು ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐದು ಪಂದ್ಯಗಳಲ್ಲಿ 276 ರನ್ ಗಳಿಸಿದ್ದಾರೆ. ಈ ಮೂಲಕ ಇವರು ಎರಡನೇ ಸ್ಥಾನದಲ್ಲಿದ್ದಾರೆ. ಈ ದಾಖಲೆಯ ಸನಿಹದಲ್ಲಿ ಅಭಿಷೇಕ್ ಶರ್ಮಾ ಇದ್ದು, ಈ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ. ಈ ಟೂರ್ನಿಯಲ್ಲಿ ಅಭಿಷೇಕ್ ಇನ್ನು 34 ರನ್ ಬಾರಿಸುತ್ತಲೇ ದೊಡ್ಡ ಸಾಧನೆ ಮಾಡಲಿದ್ದಾರೆ.

ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ), 281 ರನ್
ವಿರಾಟ್ ಕೊಹ್ಲಿ (ಭಾರತ), 276 ರನ್
ಅಭಿಷೇಕ್ ಶರ್ಮಾ (ಭಾರತ), 248 ರನ್
ಇಬ್ರಾಹಿಂ ಜದ್ರಾನ್ (ಅಫ್ಘಾನಿಸ್ತಾನ), 196 ರನ್
ಬಾಬರ್ ಹಯಾತ್ (ಹಾಂಗ್ ಕಾಂಗ್),194 ರನ್