ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿಗಳ ಮೊದಲ ಪಂದ್ಯ ಕಟಕ್‌ನಲ್ಲಿ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಕಣಕ್ಕೆ ಇಳಿಯಲಿದ್ದಾರೆ. ಮೊದಲ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ದೊಡ್ಡ ಸಾಧನೆಯನ್ನು ಮಾಡುವ ಕನಸಿನಲ್ಲಿದ್ದಾರೆ. ಇನ್ನು ಸೂರ್ಯ ಸಹ ವಿರಾಟ್ ಕೊಹ್ಲಿ ಅವರ ವಿಶೇಷ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಹಾಗಿದ್ದರೆ ಆ ದಾಖಲೆ ಯಾವುದು? ಇಲ್ಲಿದೆ ರಿಪೋರ್ಟ್.
ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಪಂದ್ಯಗಳಲ್ಲಿ ಅಭಿಷೇಕ್ ಶರ್ಮಾ ಕಣಕ್ಕೆ ಇಳಿಯುತ್ತಲೇ ಎಲ್ಲರ ಕಣ್ಣುಗಳ ಅವರ ಮೇಲೆ ನೆಟ್ಟಿರಲಿವೆ. ಇವರು ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಹೀಗಾಗಿ ಇದೇ ಲಯವನ್ನು ಅವರು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಮುಂದುವರೆಸುವ ವಿಶ್ವಾಸವನ್ನು ಹೊಂದಿದ್ದಾರೆ. 2025 ರಲ್ಲಿ ಪೂರ್ಣ ಸದಸ್ಯ ತಂಡಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಅಗ್ರಸ್ಥಾನಕ್ಕೇರುವ ಸಾಧ್ಯತೆ ಇದೆ.

ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಪ್ರಸಕ್ತ ವರ್ಷ ರನ್ ಕಲೆ ಹಾಕಿದ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ವರ್ಷ, ಅಭಿಷೇಕ್ ಈ ಸ್ವರೂಪದಲ್ಲಿ 17 ಪಂದ್ಯಗಳಲ್ಲಿ 756 ರನ್ ಗಳಿಸಿದ್ದಾರೆ. ಅಭಿಷೇಕ್ ಶರ್ಮಾ ಈ ಸರಣಿಯಲ್ಲಿ 181 ರನ್‌ಗಳಿಸಿದರೆ, ಈ ವರ್ಷ ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದರು. ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಪಟ್ಟಿಯಲ್ಲಿ ಜಿಂಬಾಬ್ವೆಯ ಬ್ರಿಯಾನ್ ಬೆನೆಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಜಿಂಬಾಬ್ವೆಯ ಬ್ರಿಯಾನ್ ಬೆನೆಟ್ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 25 ಇನಿಂಗ್ಸ್‌ಗಳಲ್ಲಿ 936 ರನ್ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ತಂಜಿದ್ ಹಸನ್ (775 ರನ್) ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಸಾಹಿಬ್ಜಾದಾ ಫರ್ಹಾನ್ (771 ರನ್) ಮೂರನೇ ಸ್ಥಾನ, ಈ ಪಟ್ಟಿಯಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿ ಅಭಿಷೇಕ್ ಶರ್ಮಾ ಇದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಸುರ್ಯಕುಮಾರ್ ಯಾದವ್ ಸಹ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಈ ವೇಳೆ ಸೂರ್ಯ ಟಿ20 ಕ್ರಿಕೆಟ್‌ನಲ್ಲಿ ಇನ್ನು 5 ಗೆಲುವುಗಳನ್ನು ದಾಖಲಿಸಿದರೆ, ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಕೊಹ್ಲಿ 50 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು, ಈ ವೇಳೆ ತಂಡ 30 ಪಂದ್ಯಗಳನ್ನು ಗೆದ್ದಿದೆ. ಈ ದಾಖಲೆ ಸಮಕ್ಕೆ ನಿಲ್ಲಲು ಸೂರ್ಯಕುಮಾರ್ ಯಾದವ್ ಅವರಿಗೆ ಇನ್ನು 5 ಗೆಲುವಿನ ಅನಿವಾರ್ಯತೆ ಇದೆ. ಸೂರ್ಯ ಈ ವರೆಗೆ 34 ಪಂದ್ಯಗಳನ್ನು ಆಡಿದ್ದು, ಇವುಗಳಲ್ಲಿ 25 ಪಂದ್ಯಗಳಲ್ಲಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದ್ದಾರೆ.
ರೋಹಿತ್ ಶರ್ಮಾ, 62 ಪಂದ್ಯ, 49 ಜಯ
ಎಂಎಸ್ ಧೋನಿ, 72 ಪಂದ್ಯ, 41 ಜಯ
ವಿರಾಟ್ ಕೊಹ್ಲಿ, 50 ಪಂದ್ಯ, 30 ಜಯ
ಸೂರ್ಯಕುಮಾರ್ ಯಾದವ್, 34 ಪಂದ್ಯ, 25 ಜಯ